ಜನಪದ ಸಿರಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉಡುಪಿ, ಆ.29: ಕುತ್ಪಾಡಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯು ರ್ವೇದ ಕಾಲೇಜಿನ ಜಾನಪದ ವೈದ್ಯಕೀಯ ಸಂಶೋಧನಾ ಕೇಂದ್ರದ ವತಿ ಯಿಂದ ಪ್ರತೀ ವರ್ಷ ನೀಡುವ ಜನಪದ ವೈದ್ಯ ಸಿರಿ ರಾಜ್ಯಮಟ್ಟದ ಪ್ರಶಸ್ತಿಯ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ನುರಿತ ಪಾರಂಪರಿಕ ನಾಟಿವೈದ್ಯರೊಬ್ಬ ರನ್ನು ಆಯ್ಕೆ ಸಮಿತಿ ಆಯ್ಕೆ ಮಾಡಿ ಸನ್ಮಾನಿಸಲಾಗುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲೆ ಡಾ.ಮಮತಾ ಕೆ.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





