Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಈಶ್ವರಪ್ಪರ ಹೇಳಿಕೆಗಳಿಂದ ಜಿಲ್ಲೆಯಲ್ಲಿ...

ಈಶ್ವರಪ್ಪರ ಹೇಳಿಕೆಗಳಿಂದ ಜಿಲ್ಲೆಯಲ್ಲಿ ಶಾಂತಿ ಕದಡಿ ಹೋಗಿದೆ: ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು

ವಾರ್ತಾಭಾರತಿವಾರ್ತಾಭಾರತಿ29 Aug 2022 8:32 PM IST
share
ಈಶ್ವರಪ್ಪರ ಹೇಳಿಕೆಗಳಿಂದ ಜಿಲ್ಲೆಯಲ್ಲಿ ಶಾಂತಿ ಕದಡಿ ಹೋಗಿದೆ: ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ, ಆ.29: 'ಶಾಸಕ ಕೆ.ಎಸ್. ಈಶ್ವರಪ್ಪ ಅವರ ಹಾಳು ಬಾಯಿಯಿಂದ ಜಿಲ್ಲೆಯಲ್ಲಿ ಶಾಂತಿಯೇ ಕದಡಿ ಹೋಗಿದೆ. ಅವರು ಬಳಸುವ ಕೆಟ್ಟ ಪದಗಳು, ಆರೋಗ್ಯಕರವಲ್ಲದ ಟೀಕೆಗಳಿಂದ ಇಡೀ ವ್ಯವಸ್ಥೆಯೇ ಕದಡಿಹೋಗಿದೆ' ಎಂದು ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು  ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಶಿವಮೊಗ್ಗದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ. ಅತಂತ್ರ ಪರಿಸ್ಥಿತಿ ಉಂಟಾಗಿದೆ ಎಂದು ಆರೋಪಿಸಿದರು.

'ಸುಖಾ ಸುಮ್ಮನೆ ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ ಕೊಲೆ ಮಾಡಿದವರನ್ನು ನೇಣಿಗೆ ಏರಿಸಿ ಎಂದು ಹೇಳುತ್ತಲೇ ಬಂದಿದೆ. ತಮ್ಮ ವೈಫಲ್ಯತೆಗಳನ್ನು ಮುಚ್ಚಿಕೊಳ್ಳಲು ಬಿಜೆಪಿಯವರು ಕಾಂಗ್ರೆಸ್ ನವರ ಮೇಲೆ ವಿನಾಕರಾಣ ಆರೋಪ ಮಾಡುತ್ತಿದ್ದಾರೆ. ಅದರಲ್ಲೂ ಈಶ್ವರಪ್ಪ ಸಿದ್ದರಾಮಯ್ಯ ಅವರ ಮೇಲೆ ಇಲ್ಲ ಸಲ್ಲದ ಟೀಕೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಅನ್ನು ಟೀಕೆ ಮಾಡುವ ಯಾವುದೇ ನೈತಿಕತೆ ಅವರಿಗೆ ಇಲ್ಲ' ಎಂದರು.

'ಈ ಬಾರಿಯ ಸ್ವಾತಂತ್ರ್ಯೋತ್ಸವ ಬಿಜೆಪಿಯವರಿಗೆ ಮಾತ್ರ ಬಂದಿದೆ. ಎಲ್ಲಾ ಕಡೆ ಶೇ. 40 ರಷ್ಟಿದ್ದ ಲಂಚ ಶೇ. 60 ಕ್ಕೆ ಏರಿದೆ. ಧ್ವಜದ ವಿಚಾರವೂ ಅಷ್ಟೇ. ಧ್ವಜಾರೋಹಣದ ರೋಮಾಂಚನಗಳನ್ನೇ ಆಡಳಿತ ಪಕ್ಷ ಕಸಿದುಕೊಂಡಿದೆ. ಬೇಲಿ, ಗದ್ದೆ, ಕಸದ ಬುಟ್ಟಿಗಳಲ್ಲಿ ರಾಷ್ಟ್ರಧ್ವಜಗಳನ್ನು ಎಸೆಯಲಾಗಿದೆ. ಇದು ಅತ್ಯಂತ ಬೇಸರ ಮತ್ತು ಖಂಡನೀಯ. ಇಷ್ಟರ ಮೇಲೆ ಆರ್.ಎಸ್.ಎಸ್. ಕಟ್ಟಡಗಳಲ್ಲಿ ರಾಷ್ಟ್ರಧ್ವಜ ಹಾರಿಲ್ಲ. ಇದರಿಂದಲೇ ಗೊತ್ತಾಗುತ್ತದೆ ಯಾರು ರಾಷ್ಟ್ರದ್ರೋಹಿಗಳು' ಎಂದು ಟೀಕಿಸಿದರು.

'ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಬಿಜೆಪಿ ನಾಯಕರು ಸಾವರ್ಕರ್ ಫೋಟೋ ಕುರಿತು ಮಾತನಾಡುತ್ತಾರೆ. ಅವರ ಫೋಟೋ ಇಡದವರನ್ನು ಜೈಲಿಗೆ ಹಾಕಬೇಕು ಎನ್ನುತ್ತಾರೆ. ಆದರೆ, ಬಿಜೆಪಿ ಸರ್ಕಾರದಲ್ಲಿ ನೆಹರು ಫೋಟೋ ಹಾಕಿಲ್ಲವಲ್ಲ, ಶೋಭಾ ಮೇಡಂ ಅವರನ್ನು ತಿಹಾರ್ ಜೈಲಿಗೆ ಹಾಕಬೇಕಲ್ಲವೇ ಎಂದು ಪ್ರಶ್ನಿಸಿದ ಅವರು ಗಾಂಧಿಜಿ ಅವರನ್ನು ಕೊಂದ ಗೋಡ್ಸೆಗೆ ದೇವರ ಗುಡಿ ಕಟ್ಟುವವರು ಹೇಗೆ ರಾಷ್ಟ್ರ ಭಕ್ತರಾಗುತ್ತಾರೆ' ಎಂದು ಪ್ರಶ್ನಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಜಿ.ಡಿ. ಮಂಜುನಾಥ್, ಆರ್. ರಾಜಶೇಖರ್, ಸಿ.ಎಸ್. ಚಂದ್ರಭೂಪಾಲ್, ಕೆ. ರಂಗನಾಥ್, ರಾಜಕುಮಾರ್, ಚಿನ್ಮಯ್ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X