ಮುದ್ರಣಾಲಯಗಳ ಮಾಲಕರ ಸಂಘದ ಪದಪ್ರದಾನ ಸಮಾರಂಭ

ಉಡುಪಿ : ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘದ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ, ಹಿರಿಯ ಕಾರ್ಮಿಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಇತ್ತೀಚೆಗೆ ಉಡುಪಿಯ ಪುರಭವನದಲ್ಲಿ ನಡೆಯಿತು.
ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ ಶೆಟ್ಟಿ ಮತ್ತು ಉಡುಪಿ ವಿಭಾಗದ ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್., ಉಡುಪಿಯ ಭವಾನಿ ಕಾರ್ಡ್ಸ್ ಮತ್ತು ಸ್ಟೇಶನರಿ ಮಾಲಕ ದಶರಥ್ ಸಿಂಗ್ ಚೌಹಾಣ್ ಮುಖ್ಯ ಅತಿಥಿಯಾಗಿದ್ದರು.
ಅಧ್ಯಕ್ಷತೆಯನ್ನು ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ್ ಜಿ.ಕೊಡವೂರು ವಹಿಸಿದ್ದರು. ರಾಜ್ಯ ಸಮನ್ವಯ ಸಮಿತಿ ಸಹಸಂಚಾಲಕ ಅಶೋಕ್ ಶೆಟ್ಟಿ ಮತ್ತು ಮುದ್ರಕರ ಸಹಕಾರಿ ಸಂಘದ ಬಿ.ಜಿ.ಸುಬ್ಬರಾವ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನಿಗರ್ಮನ ಪದಾಧಿಕಾರಿಗಳು ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು.
ಮುದ್ರಣಾಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಮುದ್ರಣಾಲಯಗಳ ಮಾಲಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಸಂಘದ ದರಪಟ್ಟಿ, ಐಡಿ ಕಾರ್ಡ್, ರಾಜ್ಯ ಸಮ್ಮೇಳನದ ಬ್ರೋಚರ್ ಬಿಡು ಗಡೆಗೊಳಿಸಲಾಯಿತು. ರಾಜ್ಯ ಸಮನ್ವಯ ಸಮಿತಿ ಸಂಚಾಲಕ ಎಂ.ಮಹೇಶ್ ಕುಮಾರ್ ಸ್ವಾಗತಿಸಿದರು. ಮಾಜಿ ಅಧ್ಯಕ್ಷ ಮೋಹನ್ ಉಪಾಧ್ಯ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಂ.ಶರೀಫ್ ವಂದಿಸಿದರು. ಯೋಗೀಶ್ ಕೊಳಲಗಿರಿ ಕಾರ್ಯಕ್ರಮ ನಿರೂಪಿಸಿದರು.







