Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜನರ ಪೌರತ್ವದ ಮೇಲೆ ಪ್ರಹಾರ: ಕೇಂದ್ರ...

ಜನರ ಪೌರತ್ವದ ಮೇಲೆ ಪ್ರಹಾರ: ಕೇಂದ್ರ ಸರಕಾರದ ವಿರುದ್ಧ ಸೀತಾರಾಂ ಯೆಚೂರಿ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ29 Aug 2022 8:59 PM IST
share
ಜನರ ಪೌರತ್ವದ ಮೇಲೆ ಪ್ರಹಾರ: ಕೇಂದ್ರ ಸರಕಾರದ ವಿರುದ್ಧ ಸೀತಾರಾಂ ಯೆಚೂರಿ ವಾಗ್ದಾಳಿ

ಬೆಂಗಳೂರು, ಆ.29: ಕೇಂದ್ರ ಸರಕಾರವು ಪೌರತ್ವ ತಿದ್ದುಪಡಿ ಕಾಯ್ದೆಯ ಮೂಲಕ ಜನರ ಪೌರತ್ವದ ಮೇಲೆ ಪ್ರಹಾರವಾಗಲಿದ್ದು, ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾಕ್ರ್ಸ್‍ವಾದಿ)-ಸಿಪಿಐ(ಎಂ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹೇಳಿದರು.

ಸೋಮವಾರ ನಗರದ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ರಾಷ್ಟ್ರೀಯ ನವ ನಿರ್ಮಾಣ ವೇದಿಕೆ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ-96 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಚುನಾವಣಾ ಆಯೋಗದ ಪರಮಾಧಿಕಾರವನ್ನು ಮೊಟಕುಗೊಳಿಸಲಾಗುತ್ತಿದೆ. ಎಲ್ಲ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಆಳುವ ಸರಕಾರ ಅದರ ಮೂಲಕ ದಾಳಿಗೆ ಇಳಿದಿದೆ. ಸರಕಾರದ ನೀತಿಯ ವಿರುದ್ದ ಮಾತಾಡಿದರೆ ಜಾರಿ ನಿರ್ದೇಶನಾಯಲಯ(ಇಡಿ) ದಾಳಿ ಮಾಡಲಾಗುತ್ತಿದೆ ಎಂದು ಟೀಕಿಸಿದರು.

ಇಂದು ಪ್ರಧಾನಿ ನರೇಂದ್ರ ಮೋದಿ ಅಪೌಷ್ಟಿಕತೆ ಬಗ್ಗೆ ಮಾತನಾಡಿದ್ದಾರೆ. ಅದರ ವಿರುದ್ಧ ಸಮರ ಸಾರಬೇಕಂತೆ. ಆದರೆ, ಇದೇ ಸರಕಾರ ಪಡಿತರ ಪಡೆಯಲು ಆಧಾರ್ ಕಾರ್ಡ್ ಜೋಡಣೆ ಮಾಡುವುದು ಕಡ್ಡಾಯ ಎನ್ನುತ್ತಿದೆ. ಮಕ್ಕಳಿಗೆ ಆಧಾರ್ ಕಡ್ಡಾಯ ಎಂದರೆ ಅವರಿಗೆ ಆಹಾರದ ಅಲಭ್ಯತೆ, ಇದು ಅಪೌಷ್ಟಿಕತೆಯನ್ನು ಹೆಚ್ಚಿಸುತ್ತದೆ ಎಂದು ಅವರು ವ್ಯಾಖ್ಯಾನಿಸಿದರು.

ದೇಶದಲ್ಲಿ ಜನ ಸಾಮಾನ್ಯರಿಗೆ ಭಯದ ವಾತಾವರಣವಿದೆ. ಜನಪರವಾಗಿ ಮಾತಾಡಿದರೆ ದೇಶದ್ರೋಹದ ಕೇಸು ದಾಖಲಾಗುತ್ತಿದೆ. ದೇಶದ ಸಾರ್ವಭೌಮತೆಯೇ ಅಪಾಯದಲ್ಲಿದೆ ಎಂದ ಅವರು, ಹತ್ರಾಸ್ ದಲಿತ ಯುವತಿಯ ಕಗ್ಗೊಲೆ ವರದಿ ಮಾಡಲು ಉತ್ತರ ಪ್ರದೇಶಕ್ಕೆ ಹೋದ ಪತ್ರಕರ್ತ ಕಪ್ಪನ್ ಕಾರಣವೇ ಇಲ್ಲದೆ ಜೈಲಿನಲ್ಲಿದ್ದಾನೆ. ಇದು ಒಂದು ಉದಾಹರಣೆ ಆಗಿದ್ದು, ಇಂತಹ ವಿಷಮ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆ ಎಂದು ಹೇಳಿದರು.

ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ರಾಮಕೃಷ್ಣ ಹೆಗಡೆಯವರ ಕನಸು ಭಾರತ ಒಂದಾಗಿ ಇರುವುದು ಎಂದಾಗಿತ್ತು. ಬಹುತ್ವ ಭಾರತವನ್ನು ಉಳಿಸುವುದೇ ಹೆಗಡೆಯವರಿಗೆ ಗೌರವ ಸಲ್ಲಿಸುವುದಾಗುತ್ತದೆ. ಐಕ್ಯ ಭಾರತವನ್ನು ಉಳಿಸುವ ಮೂಲಕ ಅದನ್ನು ಸಾಧಿಸಬೇಕು ಎಂದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ನವ ನಿರ್ಮಾಣ ವೇದಿಕೆಯ ಅಧ್ಯಕ್ಷೆ ಮಮತಾ ನಿಚ್ಚಾನಿ, ಕಾಂಗ್ರೆಸ್ ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷ ಡಾ.ಬಿ.ಎಲ್.ಶಂಕರ್, ಮಾಜಿ ವಿಧಾನ ಪರಿಷತ್ ಸದಸ್ಯ ಡಾ.ಎಂ.ಪಿ.ನಾಡಗೌಡ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X