Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಷ್ಟ್ರಗೀತೆಗೆ ಅವಮಾನ ಆರೋಪ: ಬರಗೂರು...

ರಾಷ್ಟ್ರಗೀತೆಗೆ ಅವಮಾನ ಆರೋಪ: ಬರಗೂರು ರಾಮಚಂದ್ರಪ್ಪ ವಿರುದ್ಧ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು

ವಾರ್ತಾಭಾರತಿವಾರ್ತಾಭಾರತಿ29 Aug 2022 9:24 PM IST
share
ರಾಷ್ಟ್ರಗೀತೆಗೆ ಅವಮಾನ ಆರೋಪ: ಬರಗೂರು ರಾಮಚಂದ್ರಪ್ಪ ವಿರುದ್ಧ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು

ಬೆಂಗಳೂರು, ಆ. 29: ‘ಸಾಹಿತಿ ಬರಗೂರು ರಾಮಚಂದ್ರಪ್ಪ (Baraguru Ramachandrappa) ಅವರು ತಮ್ಮ ಕಾದಂಬರಿ ‘ಭರತನಗರಿ'ಯಲ್ಲಿ ರಾಷ್ಟ್ರಗೀತೆ ಬಗ್ಗೆ ಅತ್ಯಂತ ಅವಹೇಳನಕಾರಿಯಾಗಿ ಬರೆದಿದ್ದಾರೆ. ವಿಡಂಬನೆ ಮಾಡಿದ್ದಲ್ಲದೆ ಭಾರತವನ್ನು ಜಡಭಾರತ ಎಂದು ಕರೆದಿದ್ದಾರೆ. ಗಂಗಾನದಿಯನ್ನು ಹಾದರ ಎಂದು ಕರೆದಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೋರಿ ಬಿಜೆಪಿ (BJP) ನಿಯೋಗ, ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ. 

ಸೋಮವಾರ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ ಬಳಿಕ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ರಾಷ್ಟ್ರಗೀತೆಗೆ ಅವಮಾನ ಮಾಡಿದ್ದು, ದೇಶ ಮತ್ತು ರಾಷ್ಟ್ರಗೀತೆ ಬಗ್ಗೆ ಅಭಿಮಾನ ಇರುವವರು ಇದನ್ನು ಸಹಿಸಿಕೊಂಡು ಸುಮ್ಮನೆ ಕುಳಿತಿರಲು ಸಾಧ್ಯವಿಲ್ಲ' ಎಂದು ಎಚ್ಚರಿಕೆ ನೀಡಿದರು.

‘ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರೂ ಆಗಿದ್ದ ಬರಗೂರು ರಾಮಚಂದ್ರಪ್ಪ ದೊಡ್ಡ ಸಾಹಿತಿಯಾಗಿದ್ದು, ಅಂಥವರು ನಾಡಿಗೆ ಮತ್ತು ದೇಶಕ್ಕೆ ಅವಹೇಳನ ಮಾಡಿದ್ದಾರೆ. ಇದೊಂದು ತಲೆ ತಗ್ಗಿಸಬೇಕಾದ ವಿಚಾರ ಎಂದು ತಿಳಿಸಿದರು. ಸಿದ್ದರಾಮಯ್ಯನವರ ಸರಕಾರ ಇದ್ದಾಗ ಇಂತಹ ಅಪಮಾನ ಆಗಿದೆ. ಏಕೆ ಅವರು ಕ್ರಮ ಕೈಗೊಂಡಿಲ್ಲ? ಅಥವಾ ಸಿದ್ದರಾಮಯ್ಯನವರು ಹೋಗಲಿ ಬಿಡಿ ಎಂದು ಉದಾಸೀನ ಮಾಡಿದರೇ ಎಂದು ರವಿಕುಮಾರ್ ಪ್ರಶ್ನಿಸಿದರು.

‘ಇವತ್ತು ಬರಗೂರು ರಾಮಚಂದ್ರಪ್ಪ ಅವರ ಈ ಬರಹದ ಬಗ್ಗೆ ಸಿದ್ದರಾಮಯ್ಯ ಏನು ಹೇಳುತ್ತಾರೆಂದು ಕೇಳಿದರಲ್ಲದೆ, ಪೊಲೀಸ್ ಇಲಾಖೆಯು ರಾಷ್ಟ್ರಧ್ವಜಕ್ಕೆ ಆದ ಅವಮಾನದ ಹಿನ್ನೆಲೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಕಾನೂನು ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜೊತೆ ಚರ್ಚಿಸಿ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸ್ ಆಯುಕ್ತರು ತಿಳಿಸಿದ್ದಾಗಿ ಹೇಳಿದರು. ಭರತನಗರಿ ಕಾದಂಬರಿಯನ್ನು ನಿಷೇಧಿಸಬೇಕು ಎಂದು ರವಿಕುಮಾರ್ ಒತ್ತಾಯಿಸಿದರು.

ನಾಡಿನ ಕಲೆ, ಸಂಸ್ಕøತಿ, ದೇಶ, ಅಂಬೇಡ್ಕರ್ ಮತ್ತು ಸಾಹಿತ್ಯದ ಬಗ್ಗೆ ಉದ್ದುದ್ದ ಭಾಷಣ ಮಾಡುವ ಬರಗೂರು ರಾಮಚಂದ್ರಪ್ಪ ಅವರು, ಹೀಗೆ ಬರೆದುದಾದರೂ ಹೇಗೆ ಎಂದು ಕೇಳಿದರು. 1983ರಲ್ಲಿ ಈ ಕಾದಂಬರಿ ಬರೆದುದಾಗಿ ಅವರು ಪ್ರಶ್ನೆಗೆ ಉತ್ತರ ನೀಡಿದರು. ಈಗ ಅದು ಗಮನಕ್ಕೆ ಬಂದಿದೆ ಎಂದು ಅವರು ತಿಳಿಸಿದರು.

ಎಸ್ಸಿ ಮೋರ್ಚಾ ಅಧ್ಯಕ್ಷ ಹಾಗೂ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಬರಗೂರು ರಾಮಚಂದ್ರಪ್ಪ ‘ಭರತನಗರಿ' ಎಂಬ ಪುಸ್ತಕವನ್ನು ಬರೆದಿದ್ದಾರೆ. ಆ ಪುಸ್ತಕ ಗಮನಿಸಿದಾಗ ರಾಷ್ಟ್ರಗೀತೆ, ರಾಷ್ಟ್ರಧ್ವಜದ ಬಗ್ಗೆ ವಿಕೃತಿ ಮೆರೆದಿರುವುದು ಗೊತ್ತಾಗಿದೆ. ಬರಗೂರರಿಗೆ ರಾಷ್ಟ್ರಗೀತೆ ಬಗ್ಗೆ ಇರುವ ವಿಕೃತ ಮನಸ್ಸು ಈಗ ಅರಿವಿಗೆ ಬಂದಿದೆ ಎಂದು ವಾಗ್ದಾಳಿ ನಡೆಸಿದರು.

‘ಭರತನಗರಿ' ಓದಿದರೆ ಯಾರಿಗಾದರೂ ತಲೆ ಕೆಡಬಹುದು. ಪ್ರಧಾನಿಯಾಗಿದ್ದ ವಾಜಪೇಯಿಯವರನ್ನು ಮಜಾಪೇಯಿ ಬಿಹಾರಿ ಎಂದು ಕರೆದು ಅವಮಾನ ಮಾಡಿದ್ದಾರೆ. ಚಂದ್ರಶೇಖರ, ಮೊರಾರ್ಜಿ, ಸಿಂಹಚರಣ್ (ಚರಣ್ ಸಿಂಗ್) ಎಂದು ವಿಕೃತಿಯ ಹೆಸರುಗಳನ್ನು ಬಳಸಿದ್ದಾರೆ. ಓದುವವರ ತಲೆ ಕೆಡಬೇಕೆಂದು ಹೀಗೆ ಮಾಡಿದ್ದಾರಾ? ಅಥವಾ ಅವರು ತಲೆಕೆಟ್ಟು ಬರೆದಿದ್ದಾರಾ ಗೊತ್ತಿಲ್ಲ' ಎಂದು ಅವರು ಆಕ್ಷೇಪಿಸಿದರು.
ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ಯೋಗೇಂದ್ರ ಹೊಡಾಘಟ್ಟ, ಚಾಮರಾಜಪೇಟೆ ಕಾನೂನು ಪ್ರಕೋಷ್ಠದ ಮಂಡಲ ಸಹ ಸಂಚಾಲಕ ಹಾಗೂ ದೂರುದಾರ ವಿ.ಎಲ್.ಜಗದೀಶ್ ಈ ಸಂದರ್ಭದಲ್ಲಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X