ಆ.30: ರಾಜ್ಯಪಾಲರ ದ.ಕ.ಜಿಲ್ಲಾ ಪ್ರವಾಸ

ಮಂಗಳೂರು; ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆ.30ರಂದು ದ.ಕ.ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಗ್ಗೆ 7ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಬಳಿಕ ನಗರದ ಸರ್ಕ್ಯೂಟ್ ಹೌಸ್‌ಗೆ ತೆರಳುವರು. 11ಕ್ಕೆ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ ನಗರದ ಸರ್ಕ್ಯೂಟ್ ಹೌಸ್‌ನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ಬೆಂಗಳೂರಿಗೆ ತೆರಳುವರು ಎಂದು ಪ್ರಕಟನೆ ತಿಳಿಸಿದೆ.
Next Story