Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 10 ದಿನದೊಳಗೆ ಜುಲೈ ಮತ್ತು ಆಗಸ್ಟ್...

10 ದಿನದೊಳಗೆ ಜುಲೈ ಮತ್ತು ಆಗಸ್ಟ್ ಮೊದಲನೇ ವಾರದ ಬೆಳೆ ನಾಶಕ್ಕೆ ಪರಿಹಾರ ಪಾವತಿ: ಸಿಎಂ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ29 Aug 2022 10:27 PM IST
share
10 ದಿನದೊಳಗೆ ಜುಲೈ ಮತ್ತು ಆಗಸ್ಟ್ ಮೊದಲನೇ ವಾರದ ಬೆಳೆ ನಾಶಕ್ಕೆ ಪರಿಹಾರ ಪಾವತಿ: ಸಿಎಂ ಬೊಮ್ಮಾಯಿ

ರಾಮನಗರ, ಆ. 29: ಜುಲೈ ತಿಂಗಳು ಮತ್ತು ಆಗಸ್ಟ್ ಮೊದಲನೇ ವಾರದಲ್ಲಿ ಆದ ಬೆಳೆ ನಾಶದ ಪರಿಹಾರ ಪಾವತಿಗೆ ಕಂದಾಯ ಇಲಾಖೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಇನ್ನು ಹತ್ತು ದಿನಗಳೊಳಗೆ ಪರಿಹಾರ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ರಾಮನಗರ ಮತ್ತು ಚೆನ್ನಪಟ್ಟಣ ತಾಲ್ಲೂಕುಗಳ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ನಡೆಸಿ ಪತ್ರಿಕಾಗೋಷ್ಠಿ ನಡೆಸಿದರು.

ಬೆಳೆನಾಶದ ಬಗ್ಗೆ ಕೂಡಲೇ ಜಂಟಿ ಸರ್ವೆ, ದಾಖಲೆಗಳನ್ನು ಅಪಲೋಡ್ ಮಾಡಲಾಗುತ್ತಿದೆ. ಕಳೆದ 3 ದಿನದಿಂದ ಆಗಿರುವ ಹಾನಿಯ ವರದಿ ಸಲ್ಲಿಸಲು ತಿಳಿಸಲಾಗಿದೆ. ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ಪರಿಹಾರದ ಎರಡುಪಟ್ಟು ಹೆಚ್ಚಿಸಿ ಬೆಳೆ ಪರಿಹಾರವನ್ನು ನೀಡಲಾಗುತ್ತಿದೆ. ಒಣಬೇಸಾಯಕ್ಕೆ 13,600 ರೂ., ತೋಟಗಾರಿಕೆ ಬೆಳೆಗೆ 28,000 ರೂ., ನೀರಾವರಿಗೆ  25,000 ರೂ. ಪರಿಹಾರ ನೀಡಲಾಗುತ್ತಿದೆ. ಕಳೆದ ಬಾರಿ ನಾಶವಾದ 14 ಲಕ್ಷ ಎಕರೆ ನಾಶಕ್ಕೆ 1,100 ಕೋಟಿಗೂ ಹೆಚ್ಚುವರಿ ಪರಿಹಾರವನ್ನು ಕೇವಲ ಒಂದೂವರೆ ತಿಂಗಳಲ್ಲಿ ವಿತರಣೆ ಮಾಡಲಾಗಿದೆ. ಈ ಬಾರಿಯೂ ಒಂದೂವರೆ ತಿಂಗಳಲ್ಲಿ ಬೆಳೆ ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದರು.

ವಿಶೇಷ ಪ್ರಕರಣವೆಂದು ಪರಿಗಣಿಸಿ ರೇಷ್ಮೆ ಬೆಳೆ ನಾಶಕ್ಕೆ ಪರಿಹಾರ: ರಾಮನಗರ ಟೌನ್‍ನಲ್ಲಿ ಮನೆ ವಸ್ತುಗಳು ನಷ್ಟವಾಗಿರುವ ಜೊತೆಗೆ ರೇಷ್ಮೆ ರೀಲಿಂಗ್ ಕಾರ್ಖಾನೆ, ರೇಷ್ಮೆ ದಾಸ್ತಾನು ನಾಶವಾಗಿದ್ದು, ಸರ್ವೇ ಮಾಡಲು ಸೂಚಿಸಲಾಗಿದೆ. ಸರ್ವೇ ವರದಿ ಬಂದ ನಂತರ ಎನ್‍ಡಿಆರ್‍ಎಫ್ ಮಾರ್ಗಸೂಚಿಯಲ್ಲಿ ಇಲ್ಲವಾದ ಕಾರಣ ವಿಶೇಷ ಪ್ರಕರಣ ಎಂದು ಪರಿಗಣಿಸಿ ಈ ನಷ್ಟವನ್ನು ಭರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಬೆಂಗಳೂರು-ಮೈಸೂರು ರಸ್ತೆ ಬದಲಿಗೆ ಪರ್ಯಾಯ ಸಂಚಾರ ವ್ಯವಸ್ಥೆ: ಕಳೆದ ಮೂರು ದಿನಗಳಿಂದ ಅತಿ ಹೆಚ್ಚು ಮಳೆಯಾಗಿ ರಾಜ್ಯದ 16 ಜಿಲ್ಲೆಗಳಲ್ಲಿ ಪ್ರವಾಹ, ಮನೆಗಳಿಗೆ ಹಾನಿ, ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿ ತೊಂದರೆಯಾಗಿದೆ. ಈ ಬಗ್ಗೆ ನಿನ್ನೆಯೇ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದು ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ವಿಶೇಷವಾಗಿ ಬೆಂಗಳೂರು-ಮೈಸೂರು ರಸ್ತೆಯಲ್ಲಿ ನೀರು ನಿಂತಿದ್ದು, ಜಮೀನು, ಮನೆಗಳಗೆ ನೀರು ಹರಿಸಿದೆ. ಮೈಸೂರು, ಮಂಡ್ಯ, ರಾಮನಗರದ ಪರ್ಯಾಯ ಸಂಚಾರ ವ್ಯವಸ್ಥೆಯ ಬಗ್ಗೆ ಕ್ರಮವಹಿಸಲು ಈ ಜಿಲ್ಲೆಗಳ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ನೀರು ನುಗ್ಗಿರುವ ಮನೆಗಳಿಗೆ ಪರಿಹಾರ: ಬೇರೆ ಬೇರೆ ಜಿಲ್ಲೆಗಳಲ್ಲಿ ಹಾನಿಯಾಗಿರುವ ಮನೆಗಳಿಗೆ 10 ಸಾವಿರ ರೂ.ಗಳನ್ನು ನೀಡಲು ಆದೇಶ ಮಾಡಲಾಗಿದೆ. ಮನೆ ಹಾನಿಯಾಗಿರುವ ಪ್ರಮಾಣವನ್ನು ಎ, ಬಿ, ಸಿ ಎಂದು ವರ್ಗೀಕರಿಸಿ ಪೂರ್ಣ ಬಿದ್ದ ಮನೆಗಳಿಗೆ 5 ಲಕ್ಷ, ಭಾಗಶಃ ಬಿದ್ದ ಮನೆಗಳಿಗೆ 3 ಲಕ್ಷ, ಸ್ವಲ್ಪ ಹಾನಿಯಾಗಿರುವ ಮನೆಗಳಿಗೆ 50,000 ರೂ.ಗಳನ್ನು ಕೇಂದ್ರಸರ್ಕಾರದ ಮಾರ್ಗಸೂಚಿಯಂತೆ ನೀಡಲಾಗುತ್ತಿದೆ ಎಂದರು.

ಬೆಳೆನಾಶಕ್ಕೆ ಸರ್ವೆ: ರಾಮನಗರ ಜಿಲ್ಲೆ, ಚೆನ್ನಪಟ್ಟಣ, ಮಾಗಡಿಯಲ್ಲಿ ಕೆಲವು ಸೇತುವೆಗಳು ನಷ್ಟವಾಗಿವೆ. ರಾಮನಗರದಲ್ಲಿ ದೊಡ್ಡ ಕೆರೆ ಒಡೆದು ಊರಿಗೆ ನೀರು ಹರಿದು, ಮನೆಗಳಿಗೆ ನಷ್ಟವಾಗಿದೆ. ಸುಮಾರು ಒಟ್ಟು ಭಾಗಶಃ ನಾಶ 2,222 ಮನೆಗಳು, ರಾಮನಗರ ನಗರ ಟೌನ್‍ನಲ್ಲಿ 133 ಮನೆಗಳು, ಮನೆಗಳಿಗೆ ನೀರು ನುಗ್ಗಿರುವ ಪ್ರಕರಣಗಳು 3,863 ಮನೆಗಳು, ಪ್ರಾಣಹಾನಿ ರಾಮನಗರ ಹಾಗೂ ಚೆನ್ನಪಟ್ಟಣ ತಾಲ್ಲೂಕಿನಲ್ಲಿ ತಲಾ ಒಂದು ಪ್ರಾಣಹಾನಿ ಸಂಭವಿಸಿದೆ. ಸಣ್ಣ ಪ್ರಾಣಿಗಳಾದ 459ಕುರಿ,ಮೇಕೆ, 16ಹಸು, 5,500 ಕೋಳಿಗಳು ಸಾವಾಗಿದೆ. ಬೆಳೆಹಾನಿ ಸುಮಾರು ಕೃಷಿ ಬೆಳೆ 600 ಎಕರೆಯಷ್ಟು ಬೆಳೆನಾಶ, ತೋಟಗಾರಿಕಾ ಬೆಳೆ 500 ಎಕರೆ ಬೆಳೆನಾಶ, ಸರ್ವೆ ನಂತರ ಹೆಚ್ಚಿನ ವಿವರಗಳು ದೊರೆಯಲಿವೆ ಎಂದರು.

ಎಸ್‍ಸಿ ಎಸ್‍ಟಿ ಗುಡಿಸಲುಗಳನ್ನು ತೆರವುಗೊಳಿಸಿ ಹೊಸ ಮನೆ ನಿರ್ಮಾಣ: ಗಾಂಧಿಗ್ರಾಮದಲ್ಲಿ ಎಸ್‍ಸಿ ಎಸ್‍ಟಿಯವರ ಸುಮಾರು 50ಕ್ಕಿಂತ ಹೆಚ್ಚು ಮನೆ ಹಾಗೂ ಗುಡಿಸಲುಗಳಿಗೆ ನೀರು ನುಗ್ಗಿದೆ. ಗುಡಿಸಲುಗಳನ್ನು ತೆರವುಗೊಳಿಸಿ ಹೊಸ ಮನೆಗಳನ್ನು ಕಟ್ಟಿಸಿಕೊಡಲು ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ. ಮಾಗಡಿ ತಾಲ್ಲೂಕಿನಲ್ಲಿ ಸೇತುವೆ ಹಾಗೂ ಕೆರೆಕಟ್ಟೆಗಳಿಗೆ ಹಾನಿಯಾಗಿದೆ. ಕೆರೆಗಳಿಗೆ ಹಾನಿಯಾಗಿರುವುದಕ್ಕೆ ಬಂಡ್ ಕಟ್ಟಿ ತಾತ್ಕಾಲಿಕವಾಗಿ ನೀರು ನಿಲ್ಲಿಸುವ ವ್ಯವಸ್ಥೆ ಹಾಗೂ ಸಂಪೂರ್ಣವಾಗಿಮಳೆ ನಿಂತ ನಂತರ ಹೊಸ ಬಂಡ್‍ನ್ನು ಶಾಶ್ವತವಾಗಿ ನಿರ್ಮಿಸಲು ಸಣ್ಣ ನೀರಾವರಿ ಇಲಾಖೆಗೆ ಆದೇಶ ನೀಡಲಾಗುವುದು. ಮುಖ್ಯ ನಾಲೆಗಳಿಗೆ ಎರಡೂ ಬದಿ ಆರ್‍ಸಿಸಿ ತಡೆ ಗೋಡೆಗಳನ್ನು ಕಟ್ಟಲು ವ್ಯವಸ್ಥೆ ಮಾಡಲಾಗುವುದು. ಚೆನ್ನಪಟ್ಟಣದ ಮುಖ್ಯಕೆರೆಯಲ್ಲಿ ನೀರು ಉಕ್ಕಿ ಹರಿದಿದೆ. ಮನೆ ಪರಿಹಾರ ಕೊಡುವ ಜೊತೆಗೆ ಈ ಪ್ರದೇಶದಲ್ಲಿ 1.8 ಕಿ.ಮೀ ಉದ್ದದ ಮುಖ್ಯ ಕಾಲುವೆ ನಿರ್ಮಾಣಗೊಳಿಸಿ ಶಾಶ್ವತ ಪರಿಹಾರ ನೀಡಲಾಗುವುದು. ಮಳೆ ಸುರಿದ ಪ್ರದೇಶಗಳಲ್ಲಿ ವಿದ್ಯುತ್ ಕಂಬಗಳು, ರಸ್ತೆಗಳು, ಯಾವುದೇ ಮೂಲಭೂತ ಸೌಲಭ್ಯ ಹಾನಿಯಾಗಿದ್ದರೆ, ಜಿಲ್ಲಾಧಿಕಾರಿಗಳ ವರದಿ ನೀಡಿದ ಕೂಡಲೇ ದುರಸ್ತಿ ಮಾಡಲಾಗುವುದು. ವಿದ್ಯುತ್ ಕಡಿತಗೊಂಡಿರುವ ಪ್ರದೇಶಗಳಲ್ಲಿ 24*7 ಕಾರ್ಯನಿರ್ವಹಿಸಿ ವಿದ್ಯುತ್ ವ್ಯವಸ್ಥೆಯನ್ನು ಪುನಃ ಸ್ಥಾಪಿಸಲು ಎಸ್ಕಾಂ ಗಳಿಗೆ ಸೂಚಿಸಲಾಗಿದೆ ಎಂದರು.

ಹೆದ್ದಾರಿಯಲ್ಲಿ ಸರಾಗವಾಗಿ ನೀರು ಹರಿಯಲು ಕ್ರಮ: ಮಳೆಯಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿ ಅಕ್ಕಪಕ್ಕದಲ್ಲಿ ತೊಂದರೆಯಾಗಿದ್ದು, ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿಯೇ ಕಾರಣ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಈ ಬಾರಿ ದೊಡ್ಡ ಪ್ರಮಾಣದಲ್ಲಿ ಮಳೆಯಾಗಿದೆ. ಪ್ರಾಧಿಕಾರದವರು ಕಳೆದ ಹಲವು ವರ್ಷಗಳ ಸರಾಸರಿ ಮಳೆ ಪ್ರಮಾಣವನ್ನು ಆಧರಿಸಿ ಹೆದ್ದಾರಿಯ ವಿನ್ಯಾಸವನ್ನು ಮಾಡಿರುತ್ತಾರೆ. ಅಲ್ಲಿ ಒಳಚರಂಡಿ ವ್ಯವಸ್ಥೆಯನ್ನು ದೊಡ್ಡದಾಗಿಸಬೇಕು ಹಾಗೂ ಒಳಚರಂಡಿಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಮಂಡ್ಯ, ರಾಮನಗರ, ಚೆನ್ನಪಟ್ಟಣದಲ್ಲಿ ಇದೇ ಸಮಸ್ಯೆ ತಲೆದೋರಿದ್ದು, ಕೇಂದ್ರ ಹೆದ್ದಾರಿ ಪ್ರಾಧಿಕಾರದೊಂದಿಗೆ ಸಭೆ ನಡೆಸಿ, ನೀರು ನಿಲ್ಲುತ್ತಿರುವ ಹೆದ್ದಾರಿಯ ಮರುವಿನ್ಯಾಸ  ಸರಾಗವಾಗಿ ನೀರು ಹರಿಯುವಿಕೆ ಕಾರ್ಯವನ್ನು ಮಾಡಿಸಲಾಗುವುದು. ಈ ಮಧ್ಯೆ ಹೆದ್ದಾರಿಯಲ್ಲಿ ನಿಂತಿರುವ ನೀರು ಹರಿದುಹೋಗಲು ಅನುಕೂಲವಾಗುವಂತೆ ಮುಚ್ಚಿರುವ ಚರಂಡಿಗಳನ್ನು ತೆರೆಸಲು ಶೀಘ್ರ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೇಂದ್ರ ಸಾರಿಗೆ ಸಚಿವರೇ ಸಧ್ಯದಲ್ಲಿಯೇ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಹೆದ್ದಾರಿಗಳ ಸಮಸ್ಯೆಗಳ ಬಗ್ಗೆ ಖುದ್ದಾಗಿ ಮನವರಿಕೆ ಮಾಡಿಕೊಡಲಾಗುವುದು ಎಂದರು.

ಆನೆ ದಾಳಿ ತಡೆಯಲು ಕ್ರಮ: ರಾಮನಗರ ಜಿಲ್ಲೆಯಲ್ಲಿ ಆನೆ ತುಳಿತಕ್ಕೆ ಸಿಲುಕಿ ಜನರು ಜೀವಕಳೆದುಕೊಳ್ಳುತ್ತಿದ್ದು, ಇದಕ್ಕೆ ಪರಿಹಾರವನ್ನು ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಭಾಗದಲ್ಲಿ ದೊಡ್ಡ ಸಮಸ್ಯೆಯಾಗಿದೆ. ಇತ್ತೀಚೆಗಷ್ಟೇ ಒಂದು ಆನೆಯನ್ನು ಸೆರೆಹಿಡಿಯಲಾಗಿದೆ.  ಆನೆಗಳ ದಾಳಿಯನ್ನು ತಡೆಯಲು ರೈಲ್ವೆ ಕಂಬಿಗಳ ತಡೆಗೋಡೆಯನ್ನು ನಿರ್ಮಿಸಲು 100 ಕೋಟಿ ರೂ.ಗಳನ್ನು ನೀಡಲಾಗಿದೆ.  ರಾಮನಗರದ ಜನಪ್ರತಿನಿಧಿಗಳು, ಅರಣ್ಯ ಸೇರಿದಂತೆ ಇತರ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಸರಕಾರದಿಂದ ನೀಡಲಾಗುವ ಯಾವುದೇ ಪರಿಹಾರವನ್ನು ತಡಮಾಡದೇ ತಕ್ಷಣವೇ ಬಿಡುಗಡೆ ಮಾಡಲಾಗುತ್ತಿದೆ. 700ಕ್ಕಿಂತ ಹೆಚ್ಚು ಜನ ಕಾಳಜಿ ಕೇಂದ್ರಗಳಲಿದ್ದಾರೆ. ಉಳಿದವರಿಗೆ ಪಡಿತರ ಇತರ ಸವಲತ್ತುಗಳನ್ನು ನೀಡಲು ಸೂಚಿಸಲಾಗಿದೆ. ಟಿಪ್ಪುನಗರ ಸೇರಿದಂತೆ ಕೆಲವು ನೀರುನುಗ್ಗಿರುವ ಪ್ರದೇಶದ ಮನೆಯವರಿಗೆ ಒಂದು ತಿಂಗಳಿಗಾಗುಷ್ಟು ಪಡಿತರ ಕಿಟ್‍ನ್ನು ನೀಡಲು ಸೂಚನೆ ನೀಡಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X