Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕ್ ನಲ್ಲಿ ಭೀಕರ ಪ್ರವಾಹ: ಟೊಮೆಟೊ...

ಪಾಕ್ ನಲ್ಲಿ ಭೀಕರ ಪ್ರವಾಹ: ಟೊಮೆಟೊ ಕಿ.ಗ್ರಾಂಗೆ 500 ರೂ, ಈರುಳ್ಳಿ 400 ರೂ. ಭಾರತದಿಂದ ಆಮದಿಗೆ ಚಿಂತನೆ ?

ವಾರ್ತಾಭಾರತಿವಾರ್ತಾಭಾರತಿ29 Aug 2022 11:47 PM IST
share
ಪಾಕ್ ನಲ್ಲಿ ಭೀಕರ ಪ್ರವಾಹ: ಟೊಮೆಟೊ ಕಿ.ಗ್ರಾಂಗೆ 500 ರೂ, ಈರುಳ್ಳಿ 400 ರೂ. ಭಾರತದಿಂದ ಆಮದಿಗೆ ಚಿಂತನೆ ?

ಇಸ್ಲಮಾಬಾದ್, ಆ.29: ಭೀಕರ ಪ್ರವಾಹದಿಂದಾಗಿ ಲಾಹೋರ್ ಹಾಗೂ ಪಂಜಾಬ್ ಪ್ರಾಂತದ ಇತರ ಪ್ರಮುಖ ಮಾರುಕಟ್ಟೆಗಳಲ್ಲಿ ತರಕಾರಿ ಹಾಗೂ ಹಣ್ಣುಹಂಪಲುಗಳ ದರ ಗಗನಕ್ಕೇರಿರುವ ಹಿನ್ನೆಲೆಯಲ್ಲಿ, ಪಾಕಿಸ್ತಾನದ ಸರಕಾರ ಭಾರತದಿಂದ ಈರುಳ್ಳಿ ಮತ್ತು ಟೊಮೆಟೊವನ್ನು ಆಮದು ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.

ರವಿವಾರ ಲಾಹೋರ್ ಮಾರುಕಟ್ಟೆ ಹಾಗೂ ಸಮೀಪದ ಇತರ ಮಾರುಕಟ್ಟೆಗಳಲ್ಲಿ ಒಂದು ಕಿ.ಗ್ರಾಂ ಟೊಮೆಟೋದ ದರ 500 ರೂ, ಈರುಳ್ಳಿಯ ದರ 400 ರೂ.ಗೆ ಏರಿಕೆಯಾಗಿತ್ತು. ಆದರೆ ರವಿವಾರದ ಮಾರುಕಟ್ಟೆ(ವಾರಾಂತ್ಯ ಬೀದಿ ಬದಿಯ ಮಾರಾಟ)ಯಲ್ಲಿ ಇವೆರಡೂ ಕ್ರಮವಾಗಿ 400 ರೂ. ಮತ್ತು 300 ರೂ.ಗೆ ಲಭ್ಯವಿತ್ತು. ಬಲೋಚಿಸ್ತಾನ, ಸಿಂಧ್ ಮತ್ತು ದಕ್ಷಿಣ ಪಂಜಾಬ್‌ನಲ್ಲಿ ಪ್ರವಾಹದಿಂದ ಕೃಷಿ ಹಾನಿಯಾಗಿರುವುದರಿಂದ ಪೂರೈಕೆ ಸ್ಥಗಿತಗೊಂಡಿದ್ದು ಮುಂದಿನ ದಿನಗಳಲ್ಲಿ ತರಕಾರಿ ಮತ್ತು ಹಣ್ಣುಹಂಪಲಿನ ದರ ಇನ್ನಷ್ಟು ಏರುವ ಸಾಧ್ಯತೆಯಿದೆ. ಟೊಮೆಟೊ ಮತ್ತು ಈರುಳ್ಳಿ ದರ ಕಿ.ಗ್ರಾಂಗೆ 700 ರೂ.ಗೆ,ಬಟಾಟೆಯ ದರ ಕಿ.ಗ್ರಾಂಗೆ 120 ರೂ.ಗೆ(ಈಗ ಕಿ.ಗ್ರಾಂಗೆ 40 ರೂ.) ಹೆಚ್ಚುವ ನಿರೀಕ್ಷೆಯಿದೆ ಎಂದು ಲಾಹೋರ್ ಮಾರುಕಟ್ಟೆಯ ಸಗಟು ವ್ಯಾಪಾರಿ ಜವಾದ್ ರಿಝ್ವಿಯನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

 ಪ್ರಸ್ತುತ, ಪಂಜಾಬ್ ಪ್ರಾಂತಕ್ಕೆ ಅಫ್ಘಾನ್‌ನಿಂದ ಪ್ರತೀ ದಿನ 100 ಕಂಟೈನರ್ ಟೊಮೆಟೊ ಮತ್ತು 30 ಕಂಟೈನರ್ ಈರುಳ್ಳಿ ಆಮದಾಗುತ್ತಿದೆ. ಆದರೆ ಇದು ಸಾಕಾಗುತ್ತಿಲ್ಲ. ಇರಾನ್ ಸರಕಾರ ಆಮದು ಮತ್ತು ರಫ್ತಿನ ಮೇಲಿನ ತೆರಿಗೆಯನ್ನು ಹೆಚ್ಚಿಸುವುದರಿಂದ ಆ ದೇಶದಿಂದ ಆಮದು ಮಾಡಿಕೊಳ್ಳುವುದು ಕಾರ್ಯಸಾಧ್ಯವಲ್ಲ. ಈ ಹಿನ್ನೆಲೆಯಲ್ಲಿ ಭಾರತದಿಂದ ಆಮದು ಮಾಡಿಕೊಳ್ಳುವ ಪ್ರಸ್ತಾವನೆಯನ್ನು ಫೆಡರಲ್ ಸರಕಾರ ಪರಿಶೀಲಿಸುತ್ತಿದೆ ಎಂದು ಲಾಹೋರ್ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಶೆಹ್ಝಾದ್ ಚೀಮಾ ಹೇಳಿದ್ದಾರೆ.

 ಕ್ಯಾಪ್ಸಿಕಂ(ದೊಣ್ಣೆ ಮೆಣಸಿನಕಾಯಿ)ನ ಕೊರತೆ ತೀವ್ರವಾಗಿದೆ. ಸಿಂಧ್‌ನಲ್ಲಿ ಬಹುತೇಕ ತೋಟಗಳು ಪ್ರವಾಹದಿಂದ ನಾಶವಾಗಿರುವುದರಿಂದ ಮುಂದಿನ ದಿನದಲ್ಲಿ ಖರ್ಜೂರ ಮತ್ತು ಬಾಳೆಹಣ್ಣಿನ ದರವೂ ಹೆಚ್ಚಲಿದೆ. ಬಲೋಚಿಸ್ತಾನದಿಂದ ಸೇಬುಗಳ ಪೂರೈಕೆಗೂ ತಡೆಯಾಗಿದೆ ಎಂದು ಚೀಮಾ ಹೇಳಿದ್ದಾರೆ. ಪಾಕಿಸ್ತಾನದಲ್ಲಿ ಸುರಿಯುತ್ತಿರುವ ಭಾರೀ ಮಳೆ ಮತ್ತು ಭೀಕರ ಪ್ರವಾಹದಿಂದ ಇದುವರೆಗೆ 1,030 ಮಂದಿ ಮೃತರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X