ಮಡಿಕೇರಿ; ಕೋಳಿ ಸಾಗಾಟದ ಲಾರಿ ಪಲ್ಟಿ: ಚಾಲಕ ಸ್ಥಳದಲ್ಲೇ ಮೃತ್ಯು
ಮಡಿಕೇರಿ : ಕೋಳಿ ಸಾಗಾಟದ ಲಾರಿಯೊಂದು ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಕೊಡಗರಹಳ್ಳಿ ಬಳಿ ನಡೆದಿದೆ.
ಮಂಗಳೂರು ಮೂಲದ ನಾಗಭೂಷಣ್ ಮೃತರು ಎಂದು ಗುರುತಿಸಲಾಗಿದೆ.
ಲಾರಿ ಮಂಗಳೂರು ಕಡೆಗೆ ಹೋಗುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದ್ದು, ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story