Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದುಶ್ಚಟ ನಿರ್ಮೂಲನೆಗೆ ಉಲಮಾ ಉಮರಾ...

ದುಶ್ಚಟ ನಿರ್ಮೂಲನೆಗೆ ಉಲಮಾ ಉಮರಾ ಒಗ್ಗಟ್ಟಾಗಿ ಶ್ರಮಿಸಿ: ಸೈಯದ್ ಜಿಫ್ರಿ ಮುತ್ತುಕೋಯ ತಂಙಳ್ ಕರೆ

ಅಕ್ರಮ ಚಟುವಟಿಕೆಗಳ ವಿರುದ್ಧ ಜನಜಾಗೃತಿಗೆ 'ಉಲಮಾ ಉಮರಾ ಕಾನ್ಫರೆನ್ಸ್'

ವಾರ್ತಾಭಾರತಿವಾರ್ತಾಭಾರತಿ30 Aug 2022 4:57 PM IST
share
ದುಶ್ಚಟ ನಿರ್ಮೂಲನೆಗೆ ಉಲಮಾ ಉಮರಾ ಒಗ್ಗಟ್ಟಾಗಿ ಶ್ರಮಿಸಿ: ಸೈಯದ್ ಜಿಫ್ರಿ ಮುತ್ತುಕೋಯ ತಂಙಳ್ ಕರೆ

ಬಂಟ್ವಾಳ, ಆ.30: ತಮಗೆ ಅರಿವಿಲ್ಲದೆ ದುಶ್ಚಟಗಳ ದಾಸರಾಗಿ ಹಾದಿ ತಪ್ಪುತ್ತಿರುವ ಯುವ ಸಮುದಾಯವನ್ನು ಸರಿದಾರಿಗೆ ತರಲು ಉಲಮಾ, ಉಮರಾಗಳು ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ಸಮಸ್ತ ಕೇಂದ್ರ ಮುಶಾವರ ಅಧ್ಯಕ್ಷ ಸಯ್ಯದುಲ್ ಉಲಮಾ ಶೈಖುನಾ ಮುಹಮ್ಮದ್ ಜಿಫ್ರಿ ಮುತ್ತು ಕೋಯ ತಂಙಳ್ ಕರೆ ನೀಡಿದ್ದಾರೆ.

ಮಾದಕ ದ್ರವ್ಯಗಳ ಸಹಿತ ಅಕ್ರಮ ಚಟುವಟಿಕೆಗಳ ವಿರುದ್ಧ ಜನಜಾಗೃತಿ ಮೂಡಿಸುವ ಸಲುವಾಗಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕರ್ನಾಟಕ ಮುಶಾವರದ ವತಿಯಿಂದ ತಾಲೂಕಿನ ಜನಪ್ರಿಯ ಗಾರ್ಡನ್ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ 'ಉಲಮಾ ಉಮರಾ ಕಾನ್ಫರೆನ್ಸ್' ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಮನುಷ್ಯನನ್ನು ದಾರಿ ತಪ್ಪಿಸುವ ಕೆಲಸ ಆದಿ ಮಾನವನ ಕಾಲದಲ್ಲೇ ನಡೆದಿದ್ದು, ದಾರಿ ತಪ್ಪಿದವರನ್ನು ಸರಿದಾರಿಗೆ ತರುವ ಕೆಲಸ ಅಗತ್ಯವಾಗಿ ಆಗಬೇಕಿದೆ. ಜಾಗೃತಿ, ಅರಿವು, ಸಾದಕ ಬಾಧಕಗಳನ್ನು ಮನವರಿಕೆ ಮಾಡಿಕೊಡುವ ಮೂಲಕ ಯುವ ಸಮೂಹದಲ್ಲಿ ಬದಲಾವಣೆ ಸಾಧ್ಯ. ಈ ನಿಟ್ಟಿನಲ್ಲಿ ಉಲಮಾ ಉಮರಾಗಳು ಶಕ್ತಿ ಮೀರಿ ಕಾರ್ಯಪ್ರವೃತ್ತರಾಗಿ ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕರ್ನಾಟಕ ಮುಶಾವರ ಅಧ್ಯಕ್ಷ ಸೈಯದ್ ಎನ್.ಪಿ.ಎಂ. ಝೈನುಲ್ ಆಬಿದೀನ್ ತಂಙಳ್ ದುಗ್ಗಲಡ್ಕ ಮಾತನಾಡಿ, ಶಾಲಾ ಕಾಲೇಜಿಗೆ ಹೋಗುವ ತಮ್ಮ ಮಕ್ಕಳ ಮೇಲೆ‌ ಅವರಿಗೆ ಅರಿವಿಲ್ಲದಂತೆ ಪೋಷಕರು ನಿಗಾ ವಹಿಸಬೇಕು. ಅವರ ಬ್ಯಾಗ್ ಗಳನ್ನು ಪರಿಶೀಲಿಸುತ್ತಾ ಇರಬೇಕು. ಪ್ರತಿದಿನ ಶಾಲೆಗೆ ಸರಿಯಾಗಿ ತಲುಪಿದ್ದಾರೊ, ಸರಿಯಾದ ಸಮಯಕ್ಕೆ ಮನೆಗೆ ವಾಪಸ್ ಆಗಿದ್ದಾರೋ ಎಂಬುದನ್ನು ಖಚಿತ ಪಡಿಸಿ. ದುಶ್ಚಟಗಳ ದಾಸರಾಗದಂತೆ ಸರ್ವ ರೀತಿಯಲ್ಲಿ ಜಾಗೃತಿ ವಹಿಸಿ ಮಕ್ಕಳನ್ನು ಬೆಳೆಸಿ ಎಂದು ಹೇಳಿದರು.

ಕೆ.ಎಂ.ಇಬ್ರಾಹೀಂ ಬಾಖವಿ ಕೆ.ಸಿ.ರೋಡ್ ದ್ವಜಾರೋಹಣಗೈದರು. ಅಹ್ಮದ್ ಪೂಕೋಯ ತಂಙಳ್ ದುಆ ನೆರವೇರಿಸಿದರು. ಸಮಸ್ತ ಕರ್ನಾಟಕ ಮುಶಾವರ ಪ್ರಧಾನ ಕಾರ್ಯದರ್ಶಿ ಬಿ.ಕೆ.ಅಬ್ದುಲ್ ಖಾದಿರ್ ಅಲ್ ಖಾಸಿಮಿ ಬಂಬ್ರಾಣ ಪ್ರಾಸ್ತಾವಿಕ ಭಾಷಣ ಮಾಡಿದರು. ಸೈಯದ್ ಝೈನುಲ್ ಆಬಿದೀನ್ ತಂಙಳ್ ಬೆಳ್ತಂಗಡಿ ಕಾರ್ಯ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ರಫೀಬ್ ಝಕರಿಯಾ ಫೈಝಿ ಕೋಝಿಕ್ಕೋಡ್ ವಿಷಯ ಮಂಡನೆ ಮಾಡಿದರು.

ಕಾರ್ಯಕ್ರಮ ಸಂಘಟನೆಯ ಪ್ರಮುಖರಾದ ಕೆ.ಐ.ಅಬ್ದುಲ್ ಖಾದರ್ ದಾರಿಮಿ ಕುಕ್ಕಿಲ, ಅಬೂಬಕರ್ ಸಿದ್ದೀಕ್ ದಾರಿಮಿ ಕಡಬ, ಕೆ.ಎಲ್.ಉಮರ್ ದಾರಿಮಿ ಪಟ್ಟೋರಿ, ಖಾಸಿಂ ದಾರಿಮಿ ನಂದಾವರ ಉಪಸ್ಥಿತರಿದ್ದರು.

ಕೆ.ಎಂ.ಉಸ್ಮಾನ್ ಫೈಝಿ ತೋಡಾರ್ ಸ್ವಾಗತಿಸಿದರು. ಕೆ.ಪಿ‌.ಎಂ.ಶರೀಫ್ ಫೈಝಿ ಕಡಬ ವಂದಿಸಿದರು.


ಮದ್ರಸ ಶಿಕ್ಷಣದ ವಿರುದ್ಧ ನಿರಂತರವಾಗಿ ನಡೆಯುತ್ತಿರುವ ಅಪಪ್ರಚಾರ ಕೇವಲ ರಾಜಕೀಯ ಪ್ರಚಾರದ ಗಿಮಿಕ್ ಅಷ್ಟೇ. ಮದ್ರಸ ಶಿಕ್ಷಣ ಒಂದು ತೆರೆದ ಪುಸ್ತಕವಾಗಿದೆ. ಅದನ್ನು ಯಾರು ಬೇಕಾದರೂ ಓದಬಹುದು. ಅಧ್ಯಯನ, ಪರಿಶೀಲನೆ ಮಾಡಬಹುದು. ಈ ಸತ್ಯ ಬಹುಪಾಲು ಜನರಿಗೆ ತಿಳಿದಿದೆ. ಭಾರತ ಸರ್ವ ಜನಾಂಗ, ಜಾತಿ, ಧರ್ಮಗಳ ದೇಶವಾಗಿದ್ದು, ಪ್ರತಿಯೊಂದು ಧರ್ಮಗಳ ಜನರಿಂದ ದೇಶದ ಕಲ್ಯಾಣಕ್ಕೆ ಕೊಡುಗೆ ಇದೆ.

- ಜಿಫ್ರಿ ಮುತ್ತುಕೋಯ ತಂಙಳ್,

ಸಮಸ್ತ ಕೇಂದ್ರ ಮುಶಾವರ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X