Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಭಿವೃದ್ಧಿಗೆ ಅನುದಾನದಷ್ಟೇ ಶಾಂತಿ,...

ಅಭಿವೃದ್ಧಿಗೆ ಅನುದಾನದಷ್ಟೇ ಶಾಂತಿ, ಸೌಹಾರ್ದ ಮುಖ್ಯ: ಯು.ಟಿ.ಖಾದರ್

ಫರಂಗಿಪೇಟೆ ರಿಕ್ಷಾ ಪಾರ್ಕ್ ನ ಮೇಲ್ಛಾವಣಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ30 Aug 2022 6:38 PM IST
share
ಅಭಿವೃದ್ಧಿಗೆ ಅನುದಾನದಷ್ಟೇ ಶಾಂತಿ, ಸೌಹಾರ್ದ ಮುಖ್ಯ: ಯು.ಟಿ.ಖಾದರ್

ಬಂಟ್ವಾಳ, ಆ.30: ಎಲ್ಲಿ ಶಾಂತಿ, ಸೌಹಾರ್ದ, ಕಾನೂನು ಸುವ್ಯವಸ್ಥೆ ಇರುತ್ತದೆಯೋ ಆ ಪ್ರದೇಶ ಅತೀ ವೇಗವಾಗಿ ಅಭಿವೃದ್ಧಿಯಾಗುತ್ತದೆ. ಆದ್ದರಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನದಷ್ಟೇ ಶಾಂತಿ, ನೆಮ್ಮದಿ ಮುಖ್ಯವಾಗಿದ್ದು, ಶಾಂತಿ ಸುವ್ಯವಸ್ಥೆಯನ್ನು ನೀವು ನಮ್ಮ ಕೈಗೆ ನೀಡಿದರೆ ನಿಮ್ಮ ಕಾಲ ಬುಡಕ್ಕೆ ನಾವು ಅಭಿವೃದ್ಧಿಯನ್ನು ತಲುಪಿಸುತ್ತೇವೆ ಎಂದು ಶಾಸಕ ಯು.ಟಿ.ಖಾದರ್ ಹೇಳಿದರು. 

ತನ್ನ ಅನುದಾನದಲ್ಲಿ ಫರಂಗಿಪೇಟೆ ಕರಾವಳಿ ರಿಕ್ಷಾ ಪಾರ್ಕ್ ಗೆ ನಿರ್ಮಿಸಿದ ಮೇಲ್ಛಾವಣಿ, ಫಾದರ್ ಮುಲ್ಲರ್ ಆಸ್ಪತ್ರೆಯಿಂದ ರಿಕ್ಷಾ ಪಾರ್ಕ್ ಗೆ ಕೊಡುಗೆಯಾಗಿ ನೀಡಿದ ಕುಡಿಯುವ ನೀರಿನ ಡ್ರಮ್ ಅನ್ನು ಉದ್ಘಾಟಿಸಿದ ಬಳಿಕ ಫರಂಗಿಪೇಟೆ ಮತ್ತು ಮೇರಮಜಲು ಕರಾವಳಿ ರಿಕ್ಷಾ ಪಾರ್ಕ್ ಅಸೋಸಿಯೇಶನ್ ನಿಂದ ಹಮ್ಮಿಕೊಂಡ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಫರಂಗಿಪೇಟೆ ಅಮ್ಮೆಮ್ಮಾರ್ ರೈಲು ಹಳಿಯ ಪಕ್ಕದ ರಸ್ತೆ, ಕುಂಪನಮಜಲು ಮುಖ್ಯ ರಸ್ತೆಗೆ ಒಂದು ಕೋಟಿ ರೂ. ಅನುದಾನದಲ್ಲಿ ಶೀಘ್ರದಲ್ಲೇ ಕಾಂಕ್ರಿಟ್ ಆಗಲಿದೆ. ಈ ಬೇಡಿಕೆ ಸಹಿತ ಗ್ರಾಮಸ್ಥರ ಪ್ರತಿಯೊಂದು ಅಭಿವೃದ್ಧಿ ಕೆಲಸದ ಬೇಡಿಕೆಯನ್ನು ಹಂತ ಹಂತವಾಗಿ ಈಡೇರಿಸಲಾಗುವುದು. ಅಭಿವೃದ್ಧಿಯಲ್ಲಿ ಪುದು ಗ್ರಾಮ ರಾಜ್ಯದಲ್ಲಿಯೇ ಮಾದರಿಯಾಗಿದೆ. ಇದಕ್ಕೆ ಈ ಗ್ರಾಮದ ಜನರ ಸೌಹಾರ್ದ, ಶಾಂತಿ, ಪ್ರೀತಿ, ಸಹೋದರತೆಯೇ ಕಾರಣವಾಗಿದೆ ಎಂದು ಅವರು ಹೇಳಿದರು. 

ಎಲ್ಲಾ ಧರ್ಮದ ಜನರು ಒಟ್ಟು ಸೇರಿ ಕಾರ್ಯಕ್ರಮ ಆಯೋಜಿಸುವುದನ್ನು ನಾವು ಪುದು ಗ್ರಾಮದಲ್ಲಿ ಕಾಣಬಹುದು. ಇದು ಇಂದಿನ ಸಮಾಜಕ್ಕೆ ಅತೀ ಮುಖ್ಯವಾಗಿ ಬೇಕಾಗಿದೆ. ಭಾರತ ಒಂದು ಭಾರತೀಯರು ನಾವು ಎಂಬ ಪರಿಕಲ್ಪಣೆಯಲ್ಲಿ ಎಲ್ಲರೂ ಒಟ್ಟು ಸೇರಿ ಬದುಕಿದರೆ ಮಾತ್ರ ದೇಶ ಅಭಿವೃದ್ಧಿ ಹೊಂದಲಿದೆ ಎಂದು ಅವರು ನುಡಿದರು. 

ಅತೀ ಪ್ರಾಮಾಣಿಕ ಮತ್ತು ಸ್ವಾಭಿಮಾನದಿಂದ ಬದುಕುವ ವರ್ಗಗಳಲ್ಲಿ ರಿಕ್ಷಾ ಚಾಲಕರು ಒಂದು. ಫರಂಗಿಪೇಟೆಯ ಎರಡು ರಿಕ್ಷಾ ಪಾರ್ಕ್ ಗಳ ಚಾಲಕರ ಬೇಡಿಕೆಯಂತೆ ಪಾರ್ಕ್ ಗೆ ಮೇಲ್ಛಾವಣಿ ನಿರ್ಮಿಸಿಕೊಡಲಾಗಿದೆ. ಮುಂದೆಯೂ ರಿಕ್ಷಾ ಚಾಲಕರ ಬೇಡಿಕೆಯನ್ನು ಈಡೇರಿಸಲು ತಾನು ಬದ್ಧನಾಗಿದ್ದೇನೆ. ರಿಕ್ಷಾ ಚಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡುವ ಕೆಲಸವನ್ನು ಮಾಡಬೇಕು ಎಂದು ಅವರು ಹೇಳಿದರು. 

ಜಿಪಂ ಮಾಜಿ ಸದಸ್ಯ ಉಮ್ಮರ್ ಫಾರೂಕ್ ಮಾತನಾಡಿ, ಪುದು ಗ್ರಾಮ ಶಾಸಕ ಯು.ಟಿ.ಖಾದರ್ ಅವರ ಕ್ಷೇತ್ರಕ್ಕೆ ಒಳಪಟ್ಟ ಬಳಿಕ ಗ್ರಾಮದಲ್ಲಿ ರಸ್ತೆ, ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಭಾರೀ ಬದಲಾವಣೆಯಾಗಿದೆ. ಗ್ರಾಮದ ಪ್ರತಿಯೊಂದು ರಸ್ತೆಗಳು ಕಾಂಕ್ರಿಟ್ ಆಗಿದೆ. ಗ್ರಾಮದಿಂದ ಯಾವುದೇ ಬೇಡಿಕೆ ನೀಡಿದ ಕೂಡಲೇ ಶಾಸಕರಿಂದ ಸ್ಪಂದನೆ ದೊರೆಯುತ್ತಿದ್ದು, ಈಗಾಗಲೇ ನೂರಾರು ಕೊಟಿ ರೂ. ಅನುದಾನ ಗ್ರಾಮಕ್ಕೆ ನೀಡಿದ್ದಾರೆ ಎಂದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಮಾತನಾಡಿ,ತುರ್ತು ಸಂದರ್ಭ ಹಾಗೂ ಆಪತ್ಕಾಲದಲ್ಲಿ ಆಂಬುಲೆನ್ಸ್ ಗೂ ಮೊದಲು ಜನರ ಸಹಾಯಕ್ಕೆ ಬರುವವರು ರಿಕ್ಷಾ ಚಾಲಕರು. ಶ್ರಮ ಜೀವಿಗಳಾದ ರಿಕ್ಷಾ ಚಾಲಕರು ಇಡೀ ದಿನ ತಮ್ಮ ರಿಕ್ಷಾದೊಂದಿದೆ ಬಿಸಿಲು, ಮಳೆಯಲ್ಲಿ ನಿಲ್ಲಬೇಕಾದ ಪರಿಸ್ಥಿತಿ. ಅವರಿಗೆ ನೆರಳಾಗಲು ಇಲ್ಲಿನ ರಿಕ್ಷಾ ಪಾರ್ಕ್ ಗೆ ಮೇಲ್ಛಾವಣಿ ನಿರ್ಮಿಸುವ ಬೇಡಿಕೆ ಇಟ್ಟಾಗ ಶಾಸಕರು ಕೂಡಲೇ ಸ್ಪಂದಿಸಿ ಅನುದಾನ ನೀಡಿದ್ದಾರೆ ಎಂದು ತಿಳಿಸಿದರು. 

ವೇದಿಕೆಯಲ್ಲಿ ಗ್ರಾಪಂ ಉಪಾಧ್ಯಕ್ಷೆ ಲಿಡಿಯಾ ಪಿಂಟೊ, ಅಭಿವೃದ್ಧಿ ಅಧಿಕಾರಿ ಹರೀಶ್ ಕೆ.ಎ., ತಾಪಂ ಮಾಜಿ ಸದಸ್ಯ ಅಸೀಫ್ ಇಕ್ಬಾಲ್, ಮೇರಮಜಲು ಗ್ರಾಪಂ ಸದಸ್ಯೆ ವೃಂದಾ ಪೂಜಾರಿ, ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ.ಕೃಷ್ಣಕುಮಾರ್ ಪೂಂಜ, ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ನಿರ್ದೇಶಕ ದೇವದಾಸ್ ಹೆಗ್ಡೆ, ಸಮಾಜ ಸೆವಕ ಇಸ್ಮಾಯೀಲ್ ಕೆ.ಎಲ್., ಗ್ರಾಪಂ ಸದಸ್ಯ ಮುಹಮ್ಮದ್ ಮೋನು, ರಿಕ್ಷಾ ಪಾರ್ಕ್ ಗೌರವಾಧ್ಯಕ್ಷ ದಿನೇಶ್ ಶೆಟ್ಟಿ ಕೊಟ್ಟಿಂಜ, ಶಾಹುಲ್ ಹಮೀದ್ ಮೋನು, ಕರಾವಳಿ ರಿಕ್ಷಾ ಪಾರ್ಕ್ ಅಸೋಸಿಯೇಶನ್ ಅಧ್ಯಕ್ಷ ಮುಹಮ್ಮದ್ ಹನೀಫ್, ನಂ.೧ ರಿಕ್ಷಾ ಪಾರ್ಕ್ ಅಧ್ಯಕ್ಷ ಇನ್ಶಾದ್ ಮಾರಿಪಳ್ಳ, ಉದ್ಯಮಿಗಳಾದ ವಸಂತ ಸಾಲಿಯಾನ್, ಸುಕುಮಾರ್, ಜೀವನ್ ಎಂ.ಶೆಟ್ಟಿ ದೇವಸ್ಯ, ನಾರಾಯಣ ಮೂಲ್ಯ, ಮಸೀದಿಯ ಅಧ್ಯಕ್ಷ ಅಬ್ದುಲ್ ಖಾದರ್, ಗ್ರಾಪಂ ಮಾಜಿ ಅಧ್ಯಕ್ಷ ಮುಹಮ್ಮದ್ ಹನೀಫ್ ಉಪಸ್ಥಿತರಿದ್ದರು. 

ನಂ.1 ರಿಕ್ಷಾ ಪಾರ್ಕ್ ಸದಸ್ಯ ಅಶ್ರಫ್ ಮಲ್ಲಿ ಸ್ವಾಗತಿಸಿದರು. ಇರಾ ಗ್ರಾಪಂ ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X