ಉಡುಪಿ; ರಸ್ತೆ ಬದಿಯ ಚರಂಡಿಗೆ ಬಿದ್ದ ಬೈಕ್: ಸವಾರ ಮೃತ್ಯು

ಉಡುಪಿ : ಬೈಕೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಸವಾರ ಮೃತಪಟ್ಟ ಘಟನೆ ಅಂಬಲಪಾಡಿ- ಕಿನ್ನಿಮುಲ್ಕಿ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಯಲ್ಲಿ ಇಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ಮಲ್ಪೆ ಕೊಡವೂರಿನ ಲಿಂಡನ್ ಅಮ್ಮನ್ನ ಎಂಬವರ ಮಗ ಲಿಯಾನ್ ವಿಲ್ಸನ್ ಅಮ್ಮನ್ನ (19) ಎಂದು ಗುರುತಿಸಲಾಗಿದೆ.
ಇವರು ಸರ್ವಿಸ್ ರಸ್ತೆಯಲ್ಲಿ ಅಂಬಲಪಾಡಿ ಕಡೆಯಿಂದ ಕಿನ್ನಿಮುಲ್ಕಿ ಕಡೆಗೆ ಬೈಕಿನಲ್ಲಿ ಹೋಗುತ್ತಿರುವಾಗ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯ ಚರಂಡಿಗೆ ಬಿತ್ತೆನ್ನಲಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಸವಾರ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ವೇಳೆ ಮೃತಪಟ್ಟರು. ಇವರು ಮಣಿಪಾಲದಲ್ಲಿ ಬಿಬಿಎಂ ವಿದ್ಯಾರ್ಥಿಯಾಗಿದ್ದರು.
ಈ ಬಗ್ಗೆ ಉಡುಪಿ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






.jpeg)

.jpeg)


