ತುಮಕೂರು; ವಿದ್ಯೋದಯ ಕಾನೂನು ಶಿಕ್ಷಣ ಸಂಸ್ಥೆಯ ಟ್ರಸ್ಟಿ ಪ್ರೊ. ಎಚ್.ಎಸ್.ಶೇಷಾದ್ರಿ ನಿಧನ
ಸಿಎಂ ಬೊಮ್ಮಾಯಿ ಸಂತಾಪ

ಬೆಂಗಳೂರು: ಹಿರಿಯ ವಕೀಲರು, ತುಮಕೂರಿನ ವಿದ್ಯೋದಯ ಕಾನೂನು ಶಿಕ್ಷಣ ಸಂಸ್ಥೆಯ ಟ್ರಸ್ಟಿ ಪ್ರೊ . ಎಚ್.ಎಸ್.ಶೇಷಾದ್ರಿಯವರು ವಯೋಸಹಜದಿಂದ ಇಂದು ನಿಧನ ಹೊಂದಿದ್ದಾರೆ.
ಅವರಿಗೆ 99 ವರ್ಷ ವಯಸ್ಸಾಗಿತ್ತು.
ವಿದ್ಯೋದಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಆಗಿದ್ದ ಎಚ್.ಎಸ್.ಶೇಷಾದ್ರಿ ಅವರ ಶಿಷ್ಯರ ಬಳಗ ಬಹಷ್ಟಿದ್ದು, ದೇಶದ ನಾನಾ ಭಾಗದಲ್ಲಿ ವಕೀಲರಾಗಿ, ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮುಖ್ಯಮಂತ್ರಿ ಸಂತಾಪ
ಹಿರಿಯ ವಕೀಲರು, ತುಮಕೂರಿನ ವಿದ್ಯೋದಯ ಕಾನೂನು ಶಿಕ್ಷಣ ಸಂಸ್ಥೆಯ ಟ್ರಸ್ಟಿ ಪ್ರೋ.ಎಚ್. ಎಸ್. ಶೇಷಾದ್ರಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ.
ತುಮಕೂರಿನಲ್ಲಿ ಶಿಕ್ಷಣ ಹಾಗೂ ವಲಯದಲ್ಲಿ ಶೇಷಾದ್ರಿ ಅವರು ತಮ್ಮದೇ ಕೊಡುಗೆ ನೀಡಿದ್ದಾರೆ. ವಿದ್ಯೋದಯ ಕಾನೂನು ವಿದ್ಯಾಲಯ ಹಾಗೂ ಕೆಂಪೇಗೌಡ ಪಟ್ಟಣ ಸಹಕಾರ ಬ್ಯಾಂಕಿನ ಸಂಸ್ಥಾಪಕರಾಗಿ ಅಪೂರ್ವ ಸೇವೆ ಸಲ್ಲಿಸಿದ್ದಾರೆ. ಲಯನ್ ಶೇಷಾದ್ರಿ ಎಂದೇ ಹೆಸರುವಾಸಿಯಾಗಿದ್ದರು.
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುವುದಾಗಿ ಸಿಎಂ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.







