Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಾಜ್‌ಮಹಲ್‌ಗೆ ತೇಜೋಮಹಾಲಯವೆಂದು...

ತಾಜ್‌ಮಹಲ್‌ಗೆ ತೇಜೋಮಹಾಲಯವೆಂದು ಮರುನಾಮಕರಣ?: ಪ್ರಸ್ತಾವದ ಕುರಿತು ಚರ್ಚಿಸಲಿರುವ ಆಗ್ರಾ ಮು. ಕಾರ್ಪೊರೇಷನ್

ವಾರ್ತಾಭಾರತಿವಾರ್ತಾಭಾರತಿ31 Aug 2022 4:13 PM IST
share
ತಾಜ್‌ಮಹಲ್‌ಗೆ ತೇಜೋಮಹಾಲಯವೆಂದು ಮರುನಾಮಕರಣ?: ಪ್ರಸ್ತಾವದ ಕುರಿತು ಚರ್ಚಿಸಲಿರುವ ಆಗ್ರಾ ಮು. ಕಾರ್ಪೊರೇಷನ್

ಹೊಸದಿಲ್ಲಿ: ವಿಶ್ವಪ್ರಸಿದ್ಧ ಪ್ರೇಮ ಸ್ಮಾರಕವಾದ ತಾಜ್‌ಮಹಲ್‌ಗೆ(Tajmahal) ತೇಜೋ ಮಹಾಲಯ ಎಂದು ಮರುನಾಮಕರಣ ಮಾಡುವ ಕುರಿತು ಬಿಜೆಪಿ ಕೌನ್ಸಿಲರ್ ಮಂಡಿಸಿದ ಪ್ರಸ್ತಾವವನ್ನು ಆಗ್ರಾ ಮುನ್ಸಿಪಲ್ ಕಾರ್ಪೊರೇಷನ್(Agra muncipal corporation) ಚರ್ಚಿಸುವ ನಿರೀಕ್ಷೆಯಿದೆ. ಬಿಜೆಪಿ ಕೌನ್ಸಿಲರ್ ಶೋಭರಾಮ್ ರಾಥೋಡ್ ಪ್ರಸ್ತಾವನೆ ಸಿದ್ಧಪಡಿಸಿದ್ದಾರೆ. ಬುಧವಾರ ಆಗ್ರಾ ಮುನ್ಸಿಪಲ್ ಕಾರ್ಪೊರೇಷನ್ ಮುಂದೆ ಚರ್ಚೆ ಮತ್ತು ಹೆಚ್ಚಿನ ಪರಿಗಣನೆಗೆ ಮಂಡಿಸಲಾಗುವುದು ಎಂದು ವರದಿಗಳು ತಿಳಿಸಿವೆ.

ಪ್ರಸ್ತಾವವಯನ್ನು ಮಂಡಿಸಿದ ನಂತರ, ಆಗ್ರಾ ಮುನ್ಸಿಪಲ್ ಕಾರ್ಪೊರೇಷನ್ ಸದಸ್ಯರು ಈ ನಿಟ್ಟಿನಲ್ಲಿ ಮುಂದಿನ ಪ್ರಕ್ರಿಯೆಗಳ ಕುರಿತು ಗಮನ ಹರಿಸಲಿದ್ದಾರೆ ಮತ್ತು ಇತರ ಎಲ್ಲ ಅಂಶಗಳನ್ನು ಪರಿಗಣಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೊಘಲ್ ಚಕ್ರವರ್ತಿ ಷಹಜಹಾನ್(Shajahan) ಮತ್ತು ಅವರ ಪತ್ನಿ ಮುಮ್ತಾಝ್ ಮಹಲ್(Mumtaz Mahal) ಅವರ ರಾಜಮನೆತನದ ವಿಶ್ರಾಂತಿ ಸ್ಥಳವಾದ ತಾಜ್ ಮಹಲ್‌ನಲ್ಲಿ ಕಮಲದ ಕಲಶವಿದೆ ಎಂಬುದಕ್ಕೆ ತನ್ನ ಬಳಿ "ಪುರಾವೆ" ಇದೆ ಎಂದು ರಾಥೋರ್ ತನ್ನ ಪ್ರಸ್ತಾವನೆಯಲ್ಲಿ ಹೇಳಿಕೊಂಡಿದ್ದಾರೆ.

ತಾಜ್ ಮಹಲ್‌ನಲ್ಲಿನ 22 ಬೀಗ ಹಾಕಿದ ಕೋಣೆಗಳ ಹಿಂದಿನ “ಸತ್ಯವನ್ನು ಕಂಡುಕೊಳ್ಳಲು” ನಿರ್ದೇಶನವನ್ನು ಕೋರಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಅಲಹಾಬಾದ್ ಉಚ್ಚ ನ್ಯಾಯಾಲಯವು ವಜಾಗೊಳಿಸಿದ ಹಲವಾರು ತಿಂಗಳ ನಂತರ ತಾಜ್ ಮಹಲ್ ಅನ್ನು ಮರುನಾಮಕರಣ ಮಾಡುವ ಪ್ರಸ್ತಾಪವು ಸ್ಮಾರಕದ ಮೂಲದ ಸುತ್ತಲಿನ ವಿವಾದವನ್ನು ಮತ್ತೊಮ್ಮೆ ಗರಿಗೆದರಿಸಿದೆ.

ತಾಜ್‌ಮಹಲ್‌ ಅನ್ನು ಮರುನಾಮಕರಣ ಮಾಡಬೇಕೆಂಬ ಬೇಡಿಕೆಗಳು ಬಂದಿರುವುದು ಇದೇ ಮೊದಲೇನಲ್ಲ. ಹಲವಾರು ಬಲಪಂಥೀಯ ಕಾರ್ಯಕರ್ತರು, ವಾಸ್ತವಕ್ಕೆ ದೂರವಾದ ASI ಸಂಶೋಧನೆಗಳು ಮತ್ತು ಪುರಾತನ ಗ್ರಂಥಗಳನ್ನು ಉಲ್ಲೇಖಿಸಿ, ತಾಜ್ ಮಹಲ್ ಶಿವನ ದೇವಾಲಯ ಎಂದು ಪ್ರತಿಪಾದಿಸಿದ್ದರು.

ಇತ್ತೀಚೆಗೆ, ಉತ್ತರ ಪ್ರದೇಶದ ಬಲ್ಲಿಯಾದಿಂದ ಭಾರತೀಯ ಜನತಾ ಪಕ್ಷದ ಶಾಸಕ ಸುರೇಂದ್ರ ಸಿಂಗ್ ಅವರು ಆಗ್ರಾದ ಐತಿಹಾಸಿಕ ಸ್ಮಾರಕ ತಾಜ್ ಮಹಲ್ ಅನ್ನು ಶೀಘ್ರದಲ್ಲೇ ಯೋಗಿ ಆದಿತ್ಯನಾಥ್ ಸರ್ಕಾರವು ‘ರಾಮ್ ಮಹಲ್’ ಎಂದು ಮರುನಾಮಕರಣ ಮಾಡಲಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X