Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪ್ರವಾಸಿ ಭಾರತೀಯ ಗರ್ಭಿಣಿ ಮೃತ್ಯು:...

ಪ್ರವಾಸಿ ಭಾರತೀಯ ಗರ್ಭಿಣಿ ಮೃತ್ಯು: ಪೋರ್ಚುಗಲ್‌ನ ಆರೋಗ್ಯ ಸಚಿವೆ ರಾಜೀನಾಮೆ

ವಾರ್ತಾಭಾರತಿವಾರ್ತಾಭಾರತಿ1 Sept 2022 9:16 AM IST
share
ಪ್ರವಾಸಿ ಭಾರತೀಯ ಗರ್ಭಿಣಿ ಮೃತ್ಯು: ಪೋರ್ಚುಗಲ್‌ನ ಆರೋಗ್ಯ ಸಚಿವೆ ರಾಜೀನಾಮೆ

ಲಿಸ್ಬನ್: ಪೋರ್ಚುಗಲ್‌ನ ಆರೋಗ್ಯ ಸಚಿವೆ ಮಾರ್ಟಾ ಟೆಮಿಡೊ(Portugal's Health Minister Marta Temido)ಅವರು ತುರ್ತು ಪ್ರಸೂತಿ ಸೇವೆಗಳನ್ನು ತಾತ್ಕಾಲಿಕವಾಗಿ ಮುಚ್ಚುವ ನಿರ್ಧಾರದ ಬಗ್ಗೆ ವ್ಯಾಪಕ ಟೀಕೆಗಳು ಬಂದ ನಂತರ ಮಂಗಳವಾರ ರಾಜೀನಾಮೆ( resigned)ನೀಡಿದರು.  

ಲಿಸ್ಬನ್‌ನ ಮುಖ್ಯ ಆಸ್ಪತ್ರೆ ಸಾಂತಾ ಮಾರಿಯಾದಿಂದ ರಾಜಧಾನಿಯ ಮತ್ತೊಂದು ಆಸ್ಪತ್ರೆಗೆ ಆಂಬ್ಯುಲೆನ್ಸ್ ವರ್ಗಾವಣೆಯ ಸಮಯದಲ್ಲಿ ಭಾರತದ  ಗರ್ಭಿಣಿ ಮಹಿಳೆಯೊಬ್ಬರು (Indian pregnant woman)ಹೃದಯ ಸ್ತಂಭನದಿಂದ ಶನಿವಾರ ಸಾವನ್ನಪ್ಪಿದ್ದಾರೆ ಎಂಬ ವರದಿಗಳು ಹೊರಬಂದ ಕೆಲವೇ ಗಂಟೆಗಳ ನಂತರ ಟೆಮಿಡೊ ರಾಜೀನಾಮೆ ನೀಡಿದ್ದಾರೆ.

ಟೆಮಿಡೊ ಅವರು ಸಚಿವ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ. ಏಕೆಂದರೆ ಅವರು "ಇನ್ನು ಮುಂದೆ ಕಚೇರಿಯಲ್ಲಿ ಉಳಿಯಲು ಪರಿಸ್ಥಿತಿ ಪೂರಕವಾಗಿಲ್ಲ ಎಂದು ಅರಿತುಕೊಂಡಿದ್ದಾರೆ’’ ಎಂದು ಆರೋಗ್ಯ ಸಚಿವಾಲಯ ಪ್ರಕಟನೆಯಲ್ಲಿ ತಿಳಿಸಿದೆ.

"ಟೆಮಿಡೊ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದೇನೆ. ಕೋವಿಡ್-19 ವಿರುದ್ಧ ಯಶಸ್ವಿ ವ್ಯಾಕ್ಸಿನೇಷನ್ ಅಭಿಯಾನವನ್ನು ಆಯೋಜಿಸುವುದನ್ನು ಒಳಗೊಂಡಂತೆ ಅವರ ಕೆಲಸಕ್ಕಾಗಿ ಧನ್ಯವಾದ ಅರ್ಪಿಸುವೆ'' ಎಂದು ಪ್ರತ್ಯೇಕ ಹೇಳಿಕೆಯಲ್ಲಿ ಪ್ರಧಾನ ಮಂತ್ರಿ ಆಂಟೋನಿಯೊ ಕೋಸ್ಟಾ ಹೇಳಿದ್ದಾರೆ.

ಬೇಸಿಗೆ ರಜೆಯಲ್ಲಿ ಹಲವಾರು ಆಸ್ಪತ್ರೆಗಳಲ್ಲಿ ಸಾಕಷ್ಟು ವೈದ್ಯರು ಇಲ್ಲದ ಕಾರಣ ತುರ್ತು ಪ್ರಸೂತಿ ಸೇವೆಗಳನ್ನು  ವಿಶೇಷವಾಗಿ ವಾರಾಂತ್ಯದಲ್ಲಿ ಮುಚ್ಚಲು ಸರಕಾರ ಈ ಕ್ರಮ ಕೈಗೊಂಡಿತ್ತು.

ಈ ಕ್ರಮಕ್ಕೆ ಪ್ರತಿಪಕ್ಷಗಳು ಮತ್ತು ಪುರಸಭೆಗಳು ಆರೋಗ್ಯ ಸಚಿವರನ್ನು ಟೀಕಿಸಿದ್ದವು. ಗರ್ಭಿಣಿಯರು ಕೆಲವೊಮ್ಮೆ ದೂರದ ಆಸ್ಪತ್ರೆಗಳಿಗೆ ತೆರಳಬೇಕಾದ ಅಪಾಯವನ್ನು ಎದುರಿಸುವಂತಾಗಿತ್ತು.

ಟೆಮಿಡೊ ಅಕ್ಟೋಬರ್  2018 ರಲ್ಲಿ ಆರೋಗ್ಯ ಸಚಿವರಾದರು ಹಾಗೂ  ಕಳೆದ ವರ್ಷ ಕೋವಿಡ್ ವಿರುದ್ದ ಲಸಿಕೆ ಅಭಿಯಾನದ ಯಶಸ್ಸಿಗೆ ಶ್ರಮಿಸಿದ ಅತ್ಯಂತ ಜನಪ್ರಿಯ ಸರಕಾರಿ ಸದಸ್ಯರಲ್ಲಿ ಒಬ್ಬರಾಗಿದ್ದರು ಎಂದು ಸಮೀಕ್ಷೆಗಳು ತಿಳಿಸಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X