Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಒತ್ತಾಯಪೂರ್ವಕವಾಗಿ ಜನರನ್ನು...

ಒತ್ತಾಯಪೂರ್ವಕವಾಗಿ ಜನರನ್ನು ಕರೆತರುತ್ತಿರುವುದು ಮೋದಿ ಜನಪ್ರಿಯತೆ ಕುಗ್ಗುತ್ತಿರುವುದಕ್ಕೆ ಸಾಕ್ಷಿ: ವಸಂತ ಬಂಗೇರ

ವಾರ್ತಾಭಾರತಿವಾರ್ತಾಭಾರತಿ1 Sept 2022 10:16 AM IST
share
ಒತ್ತಾಯಪೂರ್ವಕವಾಗಿ ಜನರನ್ನು ಕರೆತರುತ್ತಿರುವುದು ಮೋದಿ ಜನಪ್ರಿಯತೆ ಕುಗ್ಗುತ್ತಿರುವುದಕ್ಕೆ ಸಾಕ್ಷಿ: ವಸಂತ ಬಂಗೇರ

ಬೆಳ್ತಂಗಡಿ, ಸೆ.1: ಉಚಿತ ಬಸ್ ವ್ಯವಸ್ಥೆ ಕಲ್ಪಿಸಿ, ಜನರನ್ನು ಒತ್ತಾಯಪೂರ್ವಕವಾಗಿ ಸೆ.2ರಂದು ಮಂಗಳೂರಿಗೆ ಕರೆದುಕೊಂಡು ಹೋಗಲು ಕಾರ್ಯಾರಂಭವಾಗಿದೆ.‌ ಇದು ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಕುಗ್ಗುತ್ತಿದೆ ಎಂಬುದಕ್ಕೆ ಸಾಕ್ಷಿ ಎಂದು ಬೆಳ್ತಂಗಡಿ‌ ಮಾಜಿ‌ ಶಾಸಕ ವಸಂತ ಬಂಗೇರ ಹೇಳಿದ್ದಾರೆ.

ಬೆಳ್ತಂಗಡಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತವನ್ನು ದುರುಪಯೋಗಪಡಿಸಿ, ಉಚಿತ ಬಸ್ ಗಳ ಮೂಲಕ ಕೇಂದ್ರ ಸರಕಾರದ ವಿವಿಧ ಫಲಾನುಭವಿಗಳನ್ನು, ವಿವಿಧ ಸಂಘ ಸಂಸ್ಥೆಗಳ ಜನರನ್ನು ಒತ್ತಾಯ ಪೂರ್ವಕವಾಗಿ, ಬಲಾತ್ಕಾರವಾಗಿ ಕರೆದುಕೊಂಡು ಹೋಗಲಾಗುತ್ತಿದೆ. ಇದು ಅತ್ಯಂತ ಖಂಡನೀಯ. ಜೊತೆಗೆ ಮೋದಿಯವರ ಜನಪ್ರಿಯತೆ ಕುಗ್ಗಿರುವುದಕ್ಕೆ ಇದು ಸಾಕ್ಷಿ ಅವರು ಅಭಿಪ್ರಾಯಿಸಿದರು.

ಸೆಪ್ಟೆಂಬರ್ 2 ರ ಕಾರ್ಯಕ್ರಮಕ್ಕೆ ಕೇಂದ್ರ ಸರಕಾರದ ಫಲಾನುಭವಿಗಳನ್ನು ಕರೆದುಕೊಂಡು ಹೋಗುವುದಕ್ಕೆ ನಮ್ಮ ಸ್ಪಷ್ಟ ವಿರೋಧವಿದೆ. ಒತ್ತಾಯಪೂರ್ವಕವಾಗಿ, ಬಲಾತ್ಕಾರವಾಗಿ ಜನರನ್ನು ಕರೆದುಕೊಂಡು ಹೋಗುವುದು ಯಾವುದೇ ಕಾರಣಕ್ಕೂ ಸರಿಯಲ್ಲ. ಜಿಲ್ಲಾಡಳಿತದ ಈ ನಿರ್ಧಾರವನ್ನು ತಕ್ಷಣ ಕೈಬಿಡಬೇಕು, ತಪ್ಪಿದಲ್ಲಿ ತೀವ್ರ ರೀತಿಯ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.

ಸೆ.2ರಂದು ಎನ್‌ಎಂಪಿಟಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ ಬಳಿಕ ಕೂಳೂರು ಗೋಲ್ಡ್ ಫಿಂಚ್ ಮೈದಾನದಲ್ಲಿ ಸಾರ್ವಜನಿಕ ಸಭೆ ಏರ್ಪಡಿಸಲಾಗಿದೆ. ಇದು ಮುಂದಿನ ವಿಧಾನಸಭಾ ಚುನಾವಣೆಗೆ ಪೂರ್ವತಯಾರಿಯಾಗಿ ನಡೆಯುತ್ತಿರುವ ಸಭೆಯಾಗಿದೆ. ಆದರ ಕಾರ್ಯಕ್ರಮದಲ್ಲಿ ಜನರು ಭಾಗವಹಿಸುವುದು ಅನುಮಾನವಾಗಿದೆ. ಸಂಸದ, ಶಾಸಕರುಗಳ ವಿರುದ್ಧದ ಅಸಮಾಧಾನದಿಂದ ಜನರು ಆಗಮಿಸಲಾರರು ಎಂದು ಬಿಜೆಪಿ ಮುಖಂಡರುಗಳಿಗೆ ಗೊತ್ತಾಗಿದೆ. ಇದರಿಂದ ವಿಚಲಿತರಾದ ಬಿಜೆಪಿಯು ಜಿಲ್ಲಾಡಳಿತದ ಮೂಲಕ ಸ್ತ್ರೀ ಶಕ್ತಿ ಹಾಗೂ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯರು ಸೇರಿದಂತೆ ವಿವಿಧ ಇಲಾಖೆಯ ಕೇಂದ್ರ ಸರ್ಕಾರದ ಫಲಾನುಭವಿಗಳನ್ನು ಸಭೆಗೆ ಕರೆತರಲು ಮುಂದಾಗಿದೆ. ಅದಕ್ಕಾಗಿ ಜಿಲ್ಲಾಡಳಿತವೇ ಉಚಿತ ಬಸ್ ಗಳನ್ನು ವ್ಯವಸ್ಥೆ ಮಾಡಿದೆ. ಕಡ್ಡಾಯವಾಗಿ ಫಲಾನುಭವಿಗಳನ್ನು ಕರೆದುಕೊಂಡು ಬರಲು ಎಲ್ಲಾ ಇಲಾಖೆಗಳಿಗೂ ಆದೇಶಿಸಲಾಗಿದೆ. ಇಷ್ಟು ಕಷ್ಟಪಟ್ಟು ಪ್ರಧಾನಿಯವರ ಸಭೆಗೆ ಜನ ಸೇರಿಸಬೇಕಾಗಿ ಬಂದಿರುವುದು ಬಿಜೆಪಿಯ ಈಗಿನ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದರು.

ದಿನಬಳಕೆಯ ವಸ್ತುಗಳ, ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಸೇರಿದಂತೆ ನಿರುದ್ಯೋಗ ಸಮಸ್ಯೆ, ರೈತರ ಸಮಸ್ಯೆ, ಸಾರ್ವಜನಿಕ ಸಂಸ್ಥೆಗಳ ಖಾಸಗೀಕರಣ ಸೇರಿದಂತೆ ಕೇಂದ್ರ ಸರಕಾರದ ಜನವಿರೋಧಿ ನೀತಿಗಳಿಂದ ದೇಶದ ಜನತೆ ಆಕ್ರೋಶ ಭರಿತರಾಗಿದ್ದು, ನರೇಂದ್ರ ಮೋದಿಯವರ ಸಭೆಗಳಲ್ಲಿ ಭಾಗವಹಿಸುತ್ತಿಲ್ಲ. ಈ ಕಾರಣಕ್ಕಾಗಿ ಇದೀಗ ಫಲಾನುಭವಿಗಳನ್ನು ಸೇರಿಸಲು ಮುಂದಾಗಿದೆ. ಒಂದೆರಡು ಬಾರಿ ಜನರನ್ನು ಮೋಸ ಮಾಡಬಹುದು, ಆದರೆ ಯಾವಾಗಲೂ ಸುಳ್ಳು ಹೇಳಿ ಜನರನ್ನು ಮೋಸ ಮಾಡಲು ಸಾಧ್ಯವಿಲ್ಲ ಎಂಬುದನ್ನು ಬಿಜೆಪಿ ಇನ್ನಾದರು ಅರಿತುಕೊಂಡರೆ ಉತ್ತಮ ಎಂದು ವಸಂತ ಬಂಗೇರ ಹೇಳಿದರು.

ಧರ್ಮ, ದೇವರ, ಹಿಂದುತ್ವದ ಹೆಸರಿನಲ್ಲಿ ಮತ ಸೆಳೆಯುವ ಆಟ ಯಾವಾಗಲೂ ನಡೆಯುವುದಿಲ್ಲ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧರ್ಮದ ಹೆಸರಿನಲ್ಲಿ ಮತ ಪಡೆಯಬಹುದು ಎಂದುಕೊಂಡಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಪ್ರಜ್ಞಾವಂತರಾದ ಯುವಕರು ಬಿಜೆಪಿ, ಸಂಘ ಪರಿವಾರದಿಂದ ಹೊರ ಬರುತ್ತಿದ್ದಾರೆ, ಇದರಿಂದಾಗಿ ಬಿಜೆಪಿ ನರೇಂದ್ರ ಮೋದಿಯವರ ಎದುರು ಶಕ್ತಿ ಪ್ರದರ್ಶನ ಮಾಡಲು ಕೇಂದ್ರ ಸರ್ಕಾರದ ಫಲಾನುಭವಿಗಳನ್ನು ಸೇರಿಸಲು ಮುಂದಾಗಿದೆ ಎಂದು ಅವರು ಆರೋಪಿಸಿದರು.

ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್ ಕುರ್ತೋಡಿ ಮಾತನಾಡಿ, 8 ವರ್ಷಗಳ ಹಿಂದೆ ಅಚ್ಚೇ ದಿನ್ ಹೇಳಿಕೆ‌ ನೀಡಿ ಆಕಾಶ ತೋರಿಸಿದ್ದ ಮೋದಿ ಅವರ ಜನಪ್ರಿಯತೆ ಸಂಪೂರ್ಣ ಕುಗ್ಗಿದೆ. ಜನರಿಗೆ ಯಾವತ್ತೂ ಮೋಸ ಮಾಡಲು ಸಾಧ್ಯವಿಲ್ಲ. ಅವರು ಹೇಳಿದ ಅಚ್ಚೇ ದಿನ್, ಅದಾನಿ ಅವರು ಇಂದು‌ ವಿಶ್ವದ ಮೂರನೇ ಅತೀ ಶ್ರೀಮಂತ ಎಂದ ಮಾಧ್ಯಮದಲ್ಲಿ ಬಹಿರಂಗವಾಗುತ್ತಿದ್ದು, ಮೋದಿ ಮತ್ತು ಅಮಿತ್ ಶಾ ಕಪ್ಪುಹಣ ಈಗ ಯಾರಲ್ಲಿದೆ ಎಂದು ಜಗಜ್ಜಾಹೀರಾಗಿದೆ ಎಂದರು.

ಸಿಪಿಎಂ ತಾಲೂಕು ಸಮಿತಿ ಸದಸ್ಯ ಶೇಖರ್ ಲಾಯಿಲ ಮಾತನಾಡಿ, ಪ್ರಧಾನಿ ಎನ್.ಎಂ.ಪಿ.ಟಿ ಯ ಕಾರ್ಯಕ್ರಮಕ್ಕೆ ಬರುತ್ತಿದ್ದು ಅದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮವಾಗಿ ಪರಿವರ್ತಿಸಿಕೊಂಡಿದೆ. ಕೇಂದ್ರ ಸರಕಾರದ ಫಲಾನುಭವಿಗಳನ್ನು ಆಶಾ ಕಾರ್ಯಕರ್ತೆಯರ ಮೂಲಕ, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಆಯುಷ್ಮಾನ್, ಸಂಜೀವಿನಿ, ಸ್ರ್ತೀ ಶಕ್ತಿ ಯೋಜನೆಯಂತಹಾ ಫಲಾನುಭವಿಗಳನ್ನು ಬಲಾತ್ಕಾರವಾಗಿ ಸಭೆಗೆ ಕರೆದುಕೊಂಡು‌ ಹೋಗುವ ವ್ಯವಸ್ಥೆ ಮಾಡಿರುವುದು ಖಂಡನೀಯ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಬಳಿಕ ಸಾಲು ಸಾಲು ಕಾರ್ಯಕರ್ತರು‌ ಬಿಜೆಪಿಗೆ ರಾಜೀನಾಮೆ ನೀಡಿರುವುದನ್ನು ಸಮಾಧಾನಪಡಿಸಲು ಈ ಕಾರ್ಯಕ್ರಮ ಆಯೋಜಿಸಿದೆ ಎಂದು ಆರೋಪಿಸಿದರು.‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X