Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕ್ಷೇತ್ರದ ಬಹುಕಾಲದ ಬೇಡಿಕೆಗಳು...

ಕ್ಷೇತ್ರದ ಬಹುಕಾಲದ ಬೇಡಿಕೆಗಳು ಸಾಕಾರಗೊಳ್ಳುತ್ತಿದೆ: ಶಾಸಕ ರಾಜೇಶ್ ನಾಯ್ಕ್

ಪಾಣೆಮಂಗಳೂರು-ನಂದಾವರ ನೂತನ ರಸ್ತೆ ಕಾಮಗಾರಿಗೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ1 Sept 2022 10:48 AM IST
share
ಕ್ಷೇತ್ರದ ಬಹುಕಾಲದ ಬೇಡಿಕೆಗಳು ಸಾಕಾರಗೊಳ್ಳುತ್ತಿದೆ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ, ಸೆ.1: ಜನರ ಬಹು ಕಾಲದ ಬೇಡಿಕೆಯಂತೆ ಪಾಣೆಮಂಗಳೂರಿನಿಂದ ನಂದಾವರ ದೇವಸ್ಥಾನಕ್ಕೆ ನೂತನ ರಸ್ತೆ ನಿರ್ಮಾಣಕ್ಕೆ 9.75 ಕೋಟಿ ರೂ. ವೆಚ್ಚದಲ್ಲಿ ನೂತನ ಸೇತುವೆ ನಿರ್ಮಿಸಲಾಗುವುದು. ಹೆಚ್ಚುವರಿ ನಾಲ್ಕೈದು ಕೋಟಿ ರೂ. ಅನುದಾನವನ್ನು ಬಳಕೆ ಮಾಡಿ ಪೂರ್ಣ ಪ್ರಮಾಣದ ಅತೀ ಸಮೀಪ ಸಂಪರ್ಕ ರಸ್ತೆ ಕ್ಷೇತ್ರಕ್ಕೆ ಲಭ್ಯವಾಗಲಿದೆ. ಈ ಮೂಲಕ ಕ್ಷೇತ್ರದ ಬಹುಕಾಲದ ಬೇಡಿಕೆಗಳು ಈಡೇರುತ್ತಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದ್ದಾರೆ.

9.75 ಕೋಟಿ ರೂ. ವೆಚ್ಚದಲ್ಲಿ ನಂದಾವರ ವಿನಾಯಕ ಶಂಕರನಾರಾಯಣ ದುರ್ಗಾಂಭ ಕೇತ್ರಕ್ಕೆ ನೂತನ ಸೇತುವೆ ನಿರ್ಮಾಣ ಕಾಮಗಾರಿಕ್ಕೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡುತ್ತಿದ್ದರು.

ಶಾಸಕನಾಗಿ ಆಯ್ಕೆಯಾದ ಪ್ರಾರಂಭದಲ್ಲಿ ಹಿರಿಯರಾದ ಡಾ.ಪ್ರಭಾಕರ್ ಭಟ್ ಕಲ್ಲಡ್ಕ, ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿಯವರ ಆಶಯದಂತೆ ರಸ್ತೆ ನಿರ್ಮಿಸಲು ಸರಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದ್ದು, ಪ್ರಸಕ್ತ ಲೋಕೋಪಯೋಗಿ ಇಲಾಖೆಯ ಮೂಲಕ ಕಾಮಗಾರಿ ಅನುಷ್ಠಾನಗೊಳ್ಳುತ್ತಿದೆ ಎಂದರು.

ನೇತ್ರಾವತಿ ನದಿಯ ಬದಿ ರಮಣೀಯ ಸ್ಥಳದಲ್ಲಿ ದೇವಸ್ಥಾನ ಇರುವುದರಿಂದ ಇಲ್ಲಿಗೆ ಬರುವ ಭಕ್ತರಿಗೆ ಹೆಚ್ಚಿನ ಅನುಕೂಲವಾಗಬೇಕು ಎಂಬ ನಿಟ್ಟಿನಲ್ಲಿ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ‌. ಈ ರಸ್ತೆ ನಿರ್ಮಾಣದಿಂದ ದೇವಸ್ಥಾನಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಕೂಡ ಹೆಚ್ಚಳವಾಗಬೇಕು ಹಾಗೂ ಕಾಮಗಾರಿ ಯಾವುದೇ ವಿಘ್ನವಿಲ್ಲದೆ ಕ್ಲಪ್ತ ಸಮಯದಲ್ಲಿ ಜನರ ಉಪಯೋಗಕ್ಕೆ ಸಿಗಲಿ ಎಂದರು.

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಲ್ಲಡ್ಕ ಡಾ.ಪ್ರಬಾಕರ್ ಭಟ್ ಮಾತನಾಡಿ, ದೇವಸ್ಥಾನ ಎಂದರೆ ಧರ್ಮದ ಸಂಪರ್ಕ ಸೇತುವೆ ಇದ್ದಂತೆ. ದೇವಸ್ಥಾನಕ್ಕೆ ಬರುವ ಭಕ್ತರಿಗೆ ಅನುಕೂಲವಾಗುವ ರೀತಿಯಲ್ಲಿ ಶಾಸಕ ರಾಜೇಶ್ ನೇತೃತ್ವದಲ್ಲಿ ಉತ್ತಮ ಯೋಜನೆ ‌ರೂಪುಗೊಂಡಿದ್ದು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳ್ಳಲಿ ಎಂದು ಹಾರೈಸಿದರು.

ದೇವಸ್ಥಾನಕ್ಕೆ ಬರಬೇಕಾದರೆ ಸುತ್ತು ಬಳಸಿ ಬರಬೇಕಾದ ಪರಿಸ್ಥಿತಿ ಇತ್ತು‌. ಜನರ ಬೇಡಿಕೆಯ ಹಿನ್ನೆಲೆಯಲ್ಲಿ ಭಕ್ತರ ಅನುಕೂಲವಾಗುವ ರೀತಿಯಲ್ಲಿ ನೂತನ ಸೇತುವೆ ನಿರ್ಮಾಣಗೊಳ್ಳಲಿದೆ ಎಂದು ಅವರು ಹೇಳಿದರು.

ಸಜೀಪ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್ ವೈದಿಕ ವಿಧಿವಿಧಾನಗಳನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ರುಕ್ಮಯ ಪೂಜಾರಿ, ಕಿಯೋನಿಕ್ಸ್ ನಿಕಟಪೂರ್ವ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ತಾಪಂ ಮಾಜಿ ಅಧ್ಯಕ್ಷ ಯಶವಂತ ದೇರಾಜೆ, ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅರವಿಂದ ಭಟ್, ನಿಕಟಪೂರ್ವ ಅಧ್ಯಕ್ಷ ಎ.ಸಿ.ಭಂಡಾರಿ ಬಂಟ್ವಾಳ ಬಿಜೆಪಿ ಮಂಡಲದ ಪ್ರಮುಖರು, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು, ಊರಿನ ಪ್ರಮುಖರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X