Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹುಬ್ಬಳ್ಳಿ ಈದ್ಗಾ ವಿವಾದ ರಾಜಕೀಯ...

ಹುಬ್ಬಳ್ಳಿ ಈದ್ಗಾ ವಿವಾದ ರಾಜಕೀಯ ಪ್ರೇರಿತ: ಸಿಪಿಐ ಖಂಡನೆ

ಬಿಜೆಪಿ, ಸಂಘ ಪರಿವಾರದ ಹುನ್ನಾರ ಅರ್ಥ ಮಾಡಿಕೊಂಡು ಸಂಯಮದಿಂದ ಹಬ್ಬ ಆಚರಿಸಲು ಕರೆ

ವಾರ್ತಾಭಾರತಿವಾರ್ತಾಭಾರತಿ1 Sept 2022 11:32 AM IST
share
ಹುಬ್ಬಳ್ಳಿ ಈದ್ಗಾ ವಿವಾದ ರಾಜಕೀಯ ಪ್ರೇರಿತ: ಸಿಪಿಐ ಖಂಡನೆ

ಬೆಂಗಳೂರು, ಸೆ.1: ಉತ್ತರ ಕರ್ನಾಟಕದಲ್ಲಿ ಈದ್ಗಾ ವಿವಾದ, ದಕ್ಷಿಣ ಕರ್ನಾಟಕದಲ್ಲಿ ಬಾಬಾ ಬುಡನ್‌ಗಿರಿ ವಿವಾದ ಸೃಷ್ಟಿಸಿ ಬಿಜೆಪಿ ರಾಜಕೀಯ ಲಾಭವನ್ನು ಈಗಾಗಲೇ ಮಾಡಿಕೊಂಡಿದೆ. ಸಂಘ ಪರಿವಾರದ ಸಂಘಟನೆಗಳು ಸದಾ ಇಂತಹ ಸೂಕ್ಷ್ಮ ಮತ್ತು ಭಾವನಾತ್ಮಕ ವಿಷಯಗಳನ್ನು ಮುನ್ನೆಲೆಗೆ ತಂದು ಜನರ ಮೂಲಭೂತ ಸಮಸ್ಯೆಗಳನ್ನು ಮರೆಮಾಚಿ ಜನರಿಗೆ ಮೋಸ ಮಾಡುವ ಹುನ್ನಾರ ನಡೆಸುತ್ತಿರುವುದು ಸಾಮಾನ್ಯವಾಗಿದೆ ಎಂದು ಸಿಪಿಐ ಆರೋಪಿಸಿದೆ.

 ಹುಬ್ಬಳ್ಳಿಯ ಈದ್ಗಾ ವಿವಾದ ಬಗೆಹರಿದು ಹುಬ್ಬಳ್ಳಿ ಶಾಂತವಾಗಿತ್ತು, ಆದರೆ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗಳು ಮುಂದಿರುವ ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೂಲಕ ಮತ್ತೆ ಈದ್ಗಾ ವಿವಾದವನ್ನು ಮುನ್ನೆಲೆಗೆ ತರಲಾಗಿದೆ. ಮಹಾನಗರ ಪಾಲಿಕೆಗಾಗಲೀ ಬಿಜೆಪಿ ಸರ್ಕಾರಕ್ಕಾಗಲೀ ಗಣೇಶನ ಮೇಲಿನ ಭಕ್ತಿ ಮುಖ್ಯವಲ್ಲ. ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಮೆಯನ್ನಿಟ್ಟು ಇನ್ನೊಂದು ಧರ್ಮದವರನ್ನು ಪ್ರಚೋದಿಸುವುದು, ಸಂಘರ್ಷ ಹುಟ್ಟುಹಾಕುವುದು. ಆ ಮೂಲಕ ರಾಜಕೀಯ ಲಾಭ ಪಡೆಯುವುದು ಅವರ ಉದ್ದೇಶವಾಗಿದೆ ಎಂದು ಸಿಪಿಐ ರಾಜ್ಯ ಮಂಡಳಿಯ ಕಾರ್ಯದರ್ಶಿ ಸಾತಿ ಸುಂದರೇಶ್ ಟೀಕಿಸಿದ್ದಾರೆ.

ನಗರದ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಮೂರು ದಿನ ಗಣೇಶೋತ್ಸವ ಆಚರಿಸಲು ಅನುಮತಿ ಪಡೆದಿರುವ ಗಜಾನನ ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಮಂಡಳಿ ಸದಸ್ಯರು ಪೊಲೀಸರ ವಿರೋಧದ ಮಧ್ಯೆಯೇ ಪೆಂಡಾಲ್ ಎದುರಿನ ದ್ವಾರದಲ್ಲಿ ವಿ.ಡಿ.ಸಾವರ್ಕರ್, ಭಗತ್ ಸಿಂಗ್ ಮತ್ತು ಶಿವಾಜಿ ಭಾವಚಿತ್ರವಿರುವ ಪ್ಲೆಕ್ಸ್ ಗಳನ್ನು ಅಳವಡಿಸಿದ್ದಾರೆ. ಪಾಲಿಕೆ ಗಣೇಶ ಮೂರ್ತಿಯನ್ನು ಬಿಟ್ಟು ಯಾವುದೇ ಮೂರ್ತಿ, ಪ್ಲೆಕ್ಸ್, ಭಾವಚಿತ್ರ ಮತ್ತು ಜಾಹೀರಾತು ಪ್ರದರ್ಶಿಸುವಂತಿಲ್ಲ ಎಂಬ ಒಂಭತ್ತು ಷರತ್ತುಗಳನ್ನು ವಿಧಿಸಿದೆ. ಹೀಗಿದ್ದರೂ ಷರತ್ತುಗಳನ್ನು ಉಲ್ಲಂಘಿಸಿ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡುತ್ತಿರುವ ಸಂಘ ಪರಿವಾರದ ಕ್ರಮ ಖಂಡನೀಯ.. ಷರತ್ತುಗಳನ್ನು ಉಲ್ಲಂಘಿಸಿ ಹಾಕಿರುವ ಎಲ್ಲ ಪ್ಲೆಕ್ಸ್ ಬ್ಯಾನರ್‌ಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಅವರು ನಗರದ ಪೊಲೀಸರನ್ನು ಒತ್ತಾಯಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡದ ಜನತೆ ಕೋಮುವಾದಿ ಬಿಜೆಪಿ ಮತ್ತು ಸಂಘ ಪರಿವಾರದ ಹುನ್ನಾರವನ್ನು ಅರ್ಥ ಮಾಡಿಕೊಂಡು ಸಹನೆ ಸಂಯಮದಿಂದ ಧಾರ್ಮಿಕ ಆಚರಣೆಗಳನ್ನು ನಡೆಸಿಕೊಂಡು ಹೋಗಬೇಕು, ಈದ್ಗಾ ಮೈದಾನದ ಸುತ್ತಲೂ ಸಾಕಷ್ಟು ಸ್ಥಳವಿದೆ. ಹಿಂದೂ-ಮುಸ್ಲಿಮ್ ಎರಡೂ ಧರ್ಮಗಳ ಪ್ರಮುಖರು ಸೇರಿ ಸೌಹಾರ್ದಯುತವಾಗಿ ಸಮಸ್ಯೆಯನ್ನು ಪರಿಹರಿಸಿಕೊಳ್ಳಬೇಕು. ಯಾವುದೇ ಧರ್ಮದ ಹಬ್ಬಗಳು ಸಂತೋಷದ ಸಂಕೇತವಾಗಬೇಕೇ ಹೊರತು ಸಂಘರ್ಷದ ಮಾರ್ಗ ಹಿಡಿಯಬಾರದು ಎಂದವರು ಹೇಳಿಕೆಯ ಮೂಲಕ ಮನವಿ ಮಾಡಿದ್ದಾರೆ.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X