ಮಂಗಳೂರು ಭೇಟಿಯ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿದ ಪ್ರಧಾನಿ ಮೋದಿ ಹೇಳಿದ್ದೇನು?

ಮಂಗಳೂರು(Mangaluru): ಪ್ರಧಾನಿ ನರೇಂದ್ರ ಮೋದಿ(Narendra Modi) ಸೆ. 2ರಂದು ಮಂಗಳೂರಿಗೆ ಆಗಮಿಸಲಿದ್ದು, ಈ ಕುರಿತು ಅವರು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ. ತಮ್ಮ ಅಧಿಕೃತ ಖಾತೆಯಲ್ಲಿ ಟ್ವೀಟ್ ಮಾಡಿದ ಅವರು, ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸದ ಕುರಿತು ಮಾಹಿತಿ ನೀಡಿದ್ದಾರೆ.
ಟ್ವೀಟ್ ನಲ್ಲಿ, ನಾಳೆ, ಸೆಪ್ಟೆಂಬರ್ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು ಎದುರು ನೋಡುತ್ತಿರುವೆ. 3,800 ಕೋಟಿ ರೂ. ಮೌಲ್ಯದ ಪ್ರಮುಖ ಯೋಜನೆಗಳ ಉದ್ಘಾಟನೆ ಅಥವಾ ಶಿಲಾನ್ಯಾಸ ನೆರವೇರಿಸಲಾಗುವುದು. ಈ ಮುಖ್ಯವಾದ ಯೋಜನೆಗಳು ಯಾಂತ್ರೀಕರಣ ಮತ್ತು ಕೈಗಾರಿಕೀಕರಣಕ್ಕೆ ಸಂಬಂಧಿಸಿದ್ದಾಗಿವೆ." ಎಂದು ಅವರು ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ಲೋಕಾರ್ಪಣೆ ಮಾಡುವ ಯೋಜನೆಗಳಲ್ಲಿ ಕಂಟೈನರ್ ಗಳು ಹಾಗೂ ಇತರ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14ರ ಯಾಂತ್ರೀಕರಣ (ರೂ. 281 ಕೋಟಿ), ಬಿಎಸ್ VI ಉನ್ನತೀಕರಣ ಯೋಜನೆ (ರೂ. 1829 ಕೋಟಿ), ಸಮುದ್ರ ನೀರಿನ ಸಂಸ್ಕರಣಾ ಘಟಕ (ರೂ. 677 ಕೋಟಿ) ಗಳು ಸೇರಿವೆ.
ಇದನ್ನೂ ಓದಿ: ಬಿಜೆಪಿ ಗೆಲುವಿಗಾಗಿ ಆರೆಸ್ಸೆಸ್ ದೇಶಾದ್ಯಂತ ಬಾಂಬ್ ಸ್ಫೋಟಗಳನ್ನು ನಡೆಸಿದೆ: ಮಾಜಿ ಪ್ರಚಾರಕ ಯಶವಂತ ಶಿಂಧೆ ಗಂಭೀರ ಆರೋಪ
ನಾಳೆ, ಸೆಪ್ಟೆಂಬರ್ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು ಎದುರು ನೋಡುತ್ತಿರುವೆ. 3,800 ಕೋಟಿ ರೂಪಾಯಿ ಮೌಲ್ಯದ ಪ್ರಮುಖ ಯೋಜನೆಗಳ ಉದ್ಘಾಟನೆ ಅಥವಾ ಶಿಲಾನ್ಯಾಸ ನೆರವೇರಿಸಲಾಗುವುದು. ಈ ಮುಖ್ಯವಾದ ಯೋಜನೆಗಳು ಯಾಂತ್ರೀಕರಣ ಮತ್ತು ಕೈಗಾರಿಕೀಕರಣಕ್ಕೆ ಸಂಬಂಧಿಸಿದ್ದಾಗಿವೆ.
— Narendra Modi (@narendramodi) September 1, 2022