Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದಲೇ...

ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದಲೇ ರಾಮನಗರದಲ್ಲಿ ಪ್ರವಾಹ: ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ1 Sept 2022 5:56 PM IST
share
ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದಲೇ ರಾಮನಗರದಲ್ಲಿ ಪ್ರವಾಹ: ಎಚ್.ಡಿ.ಕುಮಾರಸ್ವಾಮಿ

ರಾಮನಗರ, ಸೆ.1: ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡುತ್ತಿರುವ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮೋದಿ ಯಾಕೆ ಬರುತ್ತಾರೆ? ಯಾವ ಅನುದಾನ ಕೊಡುತ್ತಾರೆ? 2019ರಿಂದ ಕರ್ನಾಟಕದಲ್ಲಿ 35-40 ಸಾವಿರ ಕೋಟಿ ರೂ.ನಷ್ಟವಾಗಿದೆ. ಆದರೆ, ಎನ್‍ಡಿಆರ್‍ಎಫ್‍ನಿಂದ ಕೇವಲ 3 ಸಾವಿರ ಕೋಟಿ ರೂ.ಕೊಟ್ಟಿದ್ದಾರೆ. ಯಾವ ಪುರುಷಾರ್ಥಕ್ಕೆ ಅವರು ಬರುತ್ತಿದ್ದಾರೆ? ಎಂದು ಪ್ರಶ್ನಿಸಿದರು.

ಗುರುವಾರ ಚನ್ನಪಟ್ಟಣದಲ್ಲಿ ಮಳೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ವೇಳೆ ಹುಣಸನಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈಗ ಚುನಾವಣೆ ದೃಷ್ಟಿಯಿಂದ ರಾಜ್ಯಕ್ಕೆ ಬರುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರಕಾರವನ್ನು ತೆಗೆಯದಿದ್ದರೆ ಈ ಸಮಸ್ಯೆ ಪ್ರತಿವರ್ಷ ಬರುತ್ತದೆ. ಎರಡು ರಾಷ್ಟ್ರೀಯ ಪಕ್ಷಗಳು ರಾಜ್ಯಕ್ಕೆ ಅಪಾಯಕಾರಿ ಎಂದು ಕಿಡಿಗಾರಿದರು.

ಬೆಂಗಳೂರು ಮತ್ತು ಮೈಸೂರು ನಡುವೆ ನಿರ್ಮಾಣ ಆಗುತ್ತಿರುವ ಎಕ್ಸ್ ಪ್ರೆಸ್ ಹೈವೇ ಯೋಜನೆಯಲ್ಲಿ ಕೈಗೊಂಡಿರುವ ಅವೈಜ್ಞಾನಿಕ ಕಾಮಗಾರಿಗಳಿಂದಲೆ ರಾಮನಗರ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದೆ ಎಂದ ಅವರು, ಇದೇ ವೇಳೆ ಎಕ್ಸ್‍ಪ್ರೆಸ್ ಹೈವೇ ಹಾಗೂ ಪ್ರವಾಹದ ಬಗ್ಗೆ ಮನಸೋ ಇಚ್ಛೆ ಮಾತನಾಡುತ್ತಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದರು.

ಮೊದಲು ಒತ್ತುವರಿಯಾದ ನಾಲೆ, ಕಾಲುವೆ ತೆರವು ಮಾಡಲಿ ಎಂಬ ಪ್ರತಾಪ್ ಸಿಂಹ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಮುಖ್ಯಮಂತ್ರಿ ಅವರು ಬೆಂಗಳೂರು ನಗರದ ವಿವಿಧ ಕಡೆ ಭೇಟಿ ನೀಡಿದ್ದಾರೆ. ಅಲ್ಲಿಯೂ ಸಹ ಮನೆಗಳಲ್ಲಿ ನೀರು ನಿಂತಿದೆ. ಯಾಕೆ ಎನ್ನುವುದನ್ನು ಪ್ರತಾಪ್ ಸಿಂಹ ಅರ್ಥ ಮಾಡಿಕೊಳ್ಳಬೇಕು ಎಂದರು.

ಇದು ಈಗ ಆಗಿರುವ ತೊಂದರೆ ಅಲ್ಲ. ರಾಜಕೀಯ ಸ್ವೇಚ್ಛಾಚಾರದಿಂದ ಆಗಿರುವ ಅನಾಹುತಗಳಿವು. ಈ ಹಿಂದಿನ ಸರಕಾರಗಳಲ್ಲಿ ಆಗಿರುವ ತಪ್ಪು ತೀರ್ಮಾನಗಳಿವು. ಕುಮಾರಸ್ವಾಮಿ ಮಾಡಿರುವ ನಿರ್ಧಾರಗಳಲ್ಲ ಇವು ಎಂದು ಅವರು ಟೀಕಾ ಪ್ರಹಾರ ನಡೆಸಿದರು.

ರಸ್ತೆಗಳಲ್ಲಿ ನೀರು ನಿಂತಿದೆಯಲ್ಲ, ಅದಕ್ಕೆ ಕಾರಣ ಯಾರು? ಅಕ್ರಮವಾಗಿ ನಿರ್ಮಾಣ ಆಗಿರುವುದನ್ನು ನಾವು ತೆರವು ಮಾಡಿಸುತ್ತೇವೆ. ಅದು ಒಂದು ಭಾಗ. ಆದರೆ, ಎಕ್ಸ್‍ಪ್ರೆಸ್ ಹೈವೇ ಕಾಮಗಾರಿ ಪ್ರಾರಂಭ ಆದ ಮೇಲೆ ಈ ಸಮಸ್ಯೆ ಸೃಷ್ಟಿಯಾಗಿದೆ. ಪ್ರತಾಪ್ ಸಿಂಹ ಏನು ದೊಡ್ಡ ಎಂಜಿನಿಯರ್ ಏನ್ರೀ? ಎಂದು ಅವರು ಖಾರವಾಗಿ ಪ್ರತಿಕ್ರಿಯಿಸಿದರು.

ಅದೆಲ್ಲೋ ಬರವಣಿಗೆ ಮಾಡಿಕೊಂಡು ಇದ್ದ ವ್ಯಕ್ತಿ ಪ್ರತಾಪ್ ಸಿಂಹ ಈಗ ನರೇಂದ್ರ ಮೋದಿ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಅವರಿಂದ ನಾನು ಕಲಿಯಬೇಕಾ? ಅವರು ಸುಖಾ ಸುಮ್ಮನೆ ನನ್ನನ್ನು ಕೆರಳಿಸುವುದು ಬೇಡ. ಹೆದ್ದಾರಿಯಲ್ಲಿ ನೀರು ನಿಂತದ್ದು ಒತ್ತುವರಿಯಿಂದನಾ? ಅದು ಆಗಿರುವುದು ಕಳಪೆ ಕಾಮಗಾರಿಯಿಂದ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಎಕ್ಸ್ ಪ್ರೆಸ್ ಹೈವೇ ಅಂಡರ್ ಪಾಸ್‍ಗಳಲ್ಲಿ ನೀರು ನಿಂತಿದೆ. ಅದು ಯಾಕೆ ನಿಂತಿದೆ ಎನ್ನುವುದನ್ನು ಎಷ್ಟು ಸಲ ಹೇಳಲಿ. ಪ್ರತಾಪ್ ಸಿಂಹ ಎಷ್ಟು ಕಡೆ ಹೋಗಿದ್ದಾರೆ. ಫೋಟೋ ತೆಗೆಸಿಕೊಳ್ಳಲು ಬಂದಿದ್ದರಲ್ಲ ಈಗ ಎಷ್ಟು ಕಡೆ ಬಂದಿದ್ದಾರೆ? ಇವರ ಹತ್ತಿರ ನಾನು ರಾಜಕೀಯ ಕಲಿಯಬೇಕಿಲ್ಲ. ಜನರ ಬದುಕೇನು ಎಂದು ಈತನಿಂದ ಕಲಿಯಬೇಕಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಜನರ ಕಷ್ಟ ಸುಖಾ ನೋಡಿ ರಾಜಕೀಯ ಮಾಡಿದ್ದರೆ ವಸ್ತುಸ್ಥಿತಿ ಏನೆಂದು ಗೊತ್ತಾಗುತ್ತಿತ್ತು. ಕೇವಲ ಬಿಜೆಪಿ, ಮೋದಿ ಹೆಸರಿನಲ್ಲಿ ರಾಜಕೀಯ ಮಾಡಿ ಸಂಸದ ಆಗಿದ್ದಾರೆ. ಕಷ್ಟಪಟ್ಟು ಸಂಸದ ಸ್ಥಾನ ಪಡೆದಿಲ್ಲ ಎಂದು ಅವರು ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದರು.

ಕುಮಾರಸ್ವಾಮಿ ಯಾರಿಗಾದರೂ ದೂರು ನೀಡಲಿ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ನಾನು ಮುಖ್ಯಮಂತ್ರಿ ಅವರಿಗಲ್ಲದೆ ಯಾರಿಗೆ ಹೇಳಲಿ? ನಾನು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿಯವರ ಸಮಯ ಕೇಳಿದ್ದೇನೆ. ಎಕ್ಸ್  ಪ್ರೆಸ್ ಹೈವೇಯ ಎಲ್ಲ ವಿಡಿಯೋ ಮಾಡಿಸಿದ್ದೇನೆ. ಅದೆಲ್ಲವನ್ನು ಅವರಿಗೆ ತಲುಪಿಸುತ್ತೇನೆ, ಅವರು ತೀರ್ಮಾನ ಮಾಡಲಿ. ಮುಂದೆ ಜನ ರಸ್ತೆಗೆ ಬಂದು ದೊಣ್ಣೆ ಹಿಡಿದು ಕುಳಿತುಕೊಳ್ತಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X