Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾಮೀನು ನಿರಾಕರಿಸಲು ಯಾವುದೇ ಕಾರಣವಿಲ್ಲ:...

ಜಾಮೀನು ನಿರಾಕರಿಸಲು ಯಾವುದೇ ಕಾರಣವಿಲ್ಲ: ತೀಸ್ತಾ ಸೆಟಲ್ವಾಡ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಹೇಳಿಕೆ

ಗುಜರಾತ್‌ ಸರ್ಕಾರಕ್ಕೆ ನ್ಯಾಯಾಧೀಶರಿಂದ ತರಾಟೆ

ವಾರ್ತಾಭಾರತಿವಾರ್ತಾಭಾರತಿ1 Sept 2022 10:23 PM IST
share
ಜಾಮೀನು ನಿರಾಕರಿಸಲು ಯಾವುದೇ ಕಾರಣವಿಲ್ಲ: ತೀಸ್ತಾ ಸೆಟಲ್ವಾಡ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಹೇಳಿಕೆ

ಹೊಸದಿಲ್ಲಿ: ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ ವಿರುದ್ಧ ಯಾವ ಸಾಕ್ಷ್ಯ ಮತ್ತು ವಸ್ತುಗಳನ್ನು ಸಂಗ್ರಹಿಸಲಾಗಿದೆ, ಪೊಲೀಸ್ ಕಸ್ಟಡಿಯಿಂದ ಯಾವುದೇ ಪ್ರಯೋಜನವಾಗಿದೆಯೇ ಮತ್ತು ಪ್ರಕರಣದ ತನಿಖೆ ಎಲ್ಲಿಗೆ ತಲುಪಿತು ಎಂದು ಗುಜರಾತ್ ಸರ್ಕಾರವನ್ನು ಸುಪ್ರೀಂ ಕೋರ್ಟ್ ಕೇಳಿದೆ.

ಸೆಟಲ್ವಾಡ್ ಅವರನ್ನು ಎರಡು ತಿಂಗಳಿಗೂ ಹೆಚ್ಚು ಕಾಲ ಗುಜರಾತ್‌ನಲ್ಲಿ ಬಂಧನದಲ್ಲಿ ಇರಿಸಿರುವ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಆರು ವಾರಗಳ ಬಳಿಕ ಉತ್ತರ ನೀಡುವಂತೆ ಗುಜರಾತ್ ಹೈಕೋರ್ಟ್ ನೋಟಿಸ್ ನೀಡಿದ್ದು ಹೇಗೆ ಎಂದು ಪ್ರಶ್ನಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ನೇತೃತ್ವದ ಪೀಠವು "ಈ ಪ್ರಕರಣದಲ್ಲಿ ಜಾಮೀನು ನೀಡಲಾಗದ ಯಾವುದೇ ಅಪರಾಧವಿಲ್ಲ. ಅದು ಕೂಡ ಮಹಿಳೆಗೆ" ಎಂದು ಗಮನಿಸಿದೆ, ಸೆಟಲ್ವಾಡ್ ಎರಡು ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದರೂ ಯಾವುದೇ ಆರೋಪಪಟ್ಟಿ ಸಲ್ಲಿಸಿಲ್ಲ ಎಂದು ನ್ಯಾಯಾಧೀಶರು ಹೇಳಿದರು.

ಇಲ್ಲಿಯವರೆಗೆ ಎಫ್‌ಐಆರ್ ಅನ್ನು ನ್ಯಾಯಾಲಯದ ಆದೇಶದ ಮೇರೆಗೆ ಪ್ರಾರಂಭಿಸಲಾಗಿದೆ.  ಜಾಮೀನು ನೀಡದಿರುವ ಯಾವುದೇ ಯುಎಪಿಎ ರೀತಿಯ ಆರೋಪ ತೀಸ್ತಾ ವಿರುದ್ಧವಿಲ್ಲ, ಇವು ಸರಳ CrPC ಷರತ್ತುಗಳಾಗಿವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

2002ರ ಗುಜರಾತ್ ಗಲಭೆಯಲ್ಲಿ ಅಂದಿನ ಸಿಎಂ ನರೇಂದ್ರ ಮೋದಿ ವಿರುದ್ಧ ಸುಳ್ಳು ಸಾಕ್ಷ್ಯವನ್ನು ಸೃಷ್ಟಿಸಿದ ಆರೋಪದ ಮೇಲೆ ತೀಸ್ತಾ ಸೆಟಲ್ವಾಡ್ ಅವರ ಜಾಮೀನು ಅರ್ಜಿಯ ವಿಚಾರಣೆಯು ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದೆ. ಸಿಜೆಐ ಯು ಯು ಲಲಿತ್, ನ್ಯಾಯಮೂರ್ತಿ ಎಸ್ ರವೀಂದ್ರ ಭಟ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರ ಪೀಠವು ಇದನ್ನು ಆಲಿಸುತ್ತಿದೆ. ತೀಸ್ತಾ ಜಾಮೀನಿಗೆ ಗುಜರಾತ್ ಸರ್ಕಾರ ವಿರೋಧ ವ್ಯಕ್ತಪಡಿಸಿದ್ದು, ಹಿರಿಯ ರಾಜಕೀಯ ನಾಯಕರೊಬ್ಬರ ಸೂಚನೆ ಮೇರೆಗೆ ಸೆಟಲ್ವಾಡ್ ಸಂಚು ರೂಪಿಸಿದ್ದು, ಅದಕ್ಕಾಗಿ ಭಾರೀ ಮೊತ್ತವನ್ನು ಪಡೆದಿದ್ದಾರೆ ಎಂದು ಹೇಳಿದೆ. ಸುಪ್ರೀಂ ಕೋರ್ಟ್ ಪೀಠದ ವಿಚಾರಣೆಗೆ ಒಂದು ದಿನ ಮೊದಲು ಅವರ ವಿರುದ್ಧ ಅಫಿಡವಿಟ್ ಸಲ್ಲಿಸಲಾಗಿದೆ.

ಗುಜರಾತ್ ಸರ್ಕಾರವು 2002 ರ ಗುಜರಾತ್ ಗಲಭೆಗೆ ಸಂಬಂಧಿಸಿದ ಸುಳ್ಳು‌ ಸಾಕ್ಷ್ಯವನ್ನು ಮಾಡಿದ್ದಕ್ಕಾಗಿ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ವಿರುದ್ಧದ ಎಫ್‌ಐಆರ್ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

''ನನ್ನ ವಿರುದ್ಧ ದೊಡ್ಡ ಷಡ್ಯಂತ್ರದ ಬಗ್ಗೆ ಮಾತನಾಡಲಾಗಿದೆ ಎಂದು ಪ್ರಕರಣ ದಾಖಲಿಸಲಾಗಿದೆ. ಸುಪ್ರೀಂ ಕೋರ್ಟ್‌ನ ಉಪಕ್ರಮದ ಮೇರೆಗೆ ಎಸ್‌ಐಟಿ ಕೂಡ ರಚಿಸಲಾಗಿದೆ ಆದರೆ ಎಸ್‌ಐಟಿ ದಾಖಲೆಗಳ ಬಗ್ಗೆ ತನಿಖೆ ನಡೆಸುತ್ತಿಲ್ಲ. ಆ ದಾಖಲೆಗಳು ತೆಹಲ್ಕಾ ಟೇಪ್‌ಗಳಿಂದ ಪರಿಶೀಲಿಸಲಾಗುತ್ತಿಲ್ಲ, ಸಿಬಿಐ ಕೂಡ ಆ ಟೇಪ್‌ಗಳ ವಿಶ್ವಾಸಾರ್ಹತೆಯನ್ನು ದೃಢಪಡಿಸಿದೆ” ಎಂದು ತೀಸ್ತಾ ಪರವಾಗಿ  ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದ್ದಾರೆ.

  

ಸೆಟಲ್ವಾಡ್ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯವು ನಾಳೆ ಮಧ್ಯಾಹ್ನ 2 ಗಂಟೆಗೆ ಮತ್ತೆ ಕೈಗೆತ್ತಿಕೊಳ್ಳಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X