ಮಂಗಳೂರು; ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಸಿದ್ಧಗೊಂಡ ವೇದಿಕೆ

ಮಂಗಳೂರು, ಸೆ. 2: ಬೃಹತ್ ರಂಗೋಲಿ ಹಾಗು ಬೃಹತ್ ಪೆಂಡಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ವೇದಿಕೆ ಸಿದ್ಧಗೊಂಡಿದೆ.
ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಇಂದು ಮಧ್ಯಾಹ್ನ ನಡೆಯಲಿರುವ ಕಾರ್ಯಕ್ರಮದಲ್ಲಿ 3,800 ಕೋಟಿ ರೂ.ಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನಡೆಯಲಿದೆ.
ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಸಕಲ ಸಿದ್ಧತೆಯನ್ನು ಜಿಲ್ಲಾಡಳಿತ ನಡೆಸಿದೆ. ಕಾರ್ಯಕ್ರಮ ನಡೆಯಲಿರುವ ಬೃಹತ್ ವೇದಿಕೆ ಎದುರು ಬೃಹತ್ ಆದ ಹೂವಿನ ರಂಗೋಲಿ ಕೂಡ ರಚಿಸಲಾಗಿದೆ.