Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ...

ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ: ಮಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿಗೆ ಸಿದ್ದರಾಮಯ್ಯ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ2 Sept 2022 10:05 AM IST
share
ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ: ಮಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿಗೆ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು, ಸೆ.2: ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಅವರಿಗೆ ಸ್ವಾಗತ ಕೋರಿರುವ ಕರ್ನಾಟಕ ವಿಧಾನಸಭೆಯ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, "ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ?" ಎಂಬುದಕ್ಕೆ ಇಂದಿನ ಭಾಷಣದಲ್ಲಿ ಉತ್ತರಿಸಿ ಎಂದು ಸವಾಲೆಸೆದಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟಿ ಮಾಡಿರುವ ಸಿದ್ದರಾಮಯ್ಯ, #AnswerMadiModi ಎಂಬ ಹ್ಯಾಷ್ ಟ್ಯಾಗ್ ನಡಿ ಸರಣಿ ಟ್ವೀಟ್ ಮೂಲಕ ಹಲವು ಪ್ರಶ್ನೆಗಳನ್ನು ಪ್ರಧಾನಿ ಮುಂದಿಟ್ಟಿದ್ದಾರೆ.

ವಿಲೀನ ಪ್ರಕ್ರಿಯೆಯ ಮೂಲಕ ದ.ಕ. ಜಿಲ್ಲೆಯ ಉದ್ಯಮಶೀಲ ಹಿರಿಯರು ಹುಟ್ಟುಹಾಕಿದ್ದ ಕಾರ್ಪೊರೇಷನ್ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್ ಹಾಗೂ ವಿಜಯಾ ಬ್ಯಾಂಕುಗಳನ್ನು ನಾಮಾವಶೇಷ ಮಾಡಿದ್ದೀರಿ. ಇದು ವಿಕಾಸವೋ? ವಿನಾಶವೋ ಎಂದು ಪ್ರಶ್ನಿಸಿದ್ದಾರೆ. ಸಂಸದ ಯು.ಶ್ರೀನಿವಾಸ ಮಲ್ಯರ ಪ್ರಯತ್ನದ ಫಲವಾಗಿ ಅಂದಿನ ಪ್ರಧಾನಿ ನೆಹರೂ ಕೊಡುಗೆಯಾಗಿರುವ ಬಜ್ಪೆ ವಿಮಾನ ನಿಲ್ದಾಣವನ್ನು ಉದ್ಯಮಿ ಮಿತ್ರ ಅದಾನಿಗೆ ನೀಡಿದ್ದೀರಿ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಕೊಡುಗೆಯಾಗಿರುವ ನವಮಂಗಳೂರು ಬಂದರನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಹಂತಹಂತವಾಗಿ ಮಾರುತ್ತಿದ್ದೀರಿ. ಇದು ವಿಕಾಸವೋ? ವಿನಾಶವೋ? ಎಂದು ಸರಣಿ ಪ್ರಶ್ನೆಗಳನ್ನು ಮುಂದಿಟ್ಟು #AnswerMadiModi ಹ್ಯಾಶ್ ಟ್ಯಾಗ್ ನೊಂದಿಗೆ ಟ್ವೀಟ್ ಮಾಡಿದ್ದಾರೆ.

ಇದೇವೇಳೆ ದ.ಕ. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರನ್ನು 'ವಿನಾಶ ಪುರುಷ' ಎಂದು ಟೀಕಿಸಿರುವ ಸಿದ್ದರಾಮಯ್ಯ, ಬಜ್ಪೆ ವಿಮಾನ ನಿಲ್ದಾಣ, ಎನ್ ಎಂಪಿಟಿ, ಎನ್ ಎಚ್-66, ರೀಜನಲ್ ಎಂಜನಿಯರಿಂಗ್ ಕಾಲೇಜ್, ಎಂಸಿಎಫ್- ಇವೆಲ್ಲ ಕಾಂಗ್ರೆಸ್ ಸಂಸದರ ಕೊಡುಗೆ. ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲು ಕೊಡುಗೆ ಏನು? ಮಳೆಯಲ್ಲಿ ಮುಳುಗುವ ಮಂಗಳೂರು? ಅಥವಾ ಕೋಮುದ್ವೇಷದ ಬೆಂಕಿಯಲ್ಲಿ ಬೇಯುತ್ತಿರುವ ಮಂಗಳೂರು? ಇದು ವಿಕಾಸವೋ? ವಿನಾಶನೋ ಎಂದು ಪ್ರಧಾನಿಯನ್ನು ಪ್ರಶ್ನಿಸಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಕಡಲ್ಕೊರೆತ ತಡೆಗೆ ರಾಜ್ಯ ಬಿಜೆಪಿ ಸರಕಾರ ಖರ್ಚು ಮಾಡಿರುವ ಹಣ ಅಂದಾಜು ರೂ.250 ಕೋಟಿ. ಇದರಲ್ಲಿ 40% ಜನಪ್ರತಿನಿಧಿಗಳ ಜೇಬಿಗೆ, 60% ಕಡಲ ನೀರಿಗೆ. ಕಡಲ್ಕೊರೆತ ಮುಂದುವರಿದಿದೆ. ಇದು ವಿಕಾಸವೋ? ವಿನಾಶನೋ ಈ ರೀತಿ ದ.ಕ. ಜಿಲ್ಲೆಗೆ ಸಂಬಂಧಿಸಿ ಹಲವು ಪ್ರಶ್ನೆಗಳನ್ನು ಮುಂದಿಟ್ಟು ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಕುಟುಕಿದ್ದಾರೆ.


"ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮಂಗಳೂರಿಗೆ ಸ್ವಾಗತ. ನಿಮ್ಮ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ? ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ.

ದಕ್ಷಿಣ ಕನ್ನಡದ ಉದ್ಯಮಶೀಲ ಹಿರಿಯರು ಸಿಂಡಿಕೇಟ್, ಕಾರ್ಪೊರೇಷನ್, ವಿಜಯಾ, ಕೆನರಾ ಮತ್ತು ಕರ್ಣಾಟಕ ಹೀಗೆ ಐದು ಬ್ಯಾಂಕ್ ಗಳನ್ನು ಹುಟ್ಟುಹಾಕಿದ್ದರು. ನೀವು ಇವುಗಳಲ್ಲಿ ಮೂರು ಬ್ಯಾಂಕುಗಳ ನಾಮಾವಶೇಷ ಮಾಡಿದ್ದೀರಿ. ಇದು ವಿಕಾಸವೋ? ವಿನಾಶವೋ ?

ಕಾರ್ಪೊರೇಷನ್ ಬ್ಯಾಂಕ್ ಸ್ಥಾಪಕರು- ಹಾಜಿ ಅಬ್ದುಲ್ಲಾ (1906), ಸಿಂಡಿಕೇಟ್ ಬ್ಯಾಂಕ್ ಸ್ಥಾಪಕರು ಟಿಎಂಎ ಪೈ, ಉಪೇಂದ್ರ ಪೈ, ವಾಮನ್ ಕುಡ್ವಾ (1925) ವಿಜಯಾ ಬ್ಯಾಂಕ್ ಸ್ಥಾಪಕರು- ಎ.ಬಿ.ಶೆಟ್ಟಿ (1931) ಪ್ರಧಾನಿ ನರೇಂದ್ರ ಮೋದಿಯವರೇ, ನಿಮ್ಮ ನಡೆ ಈ ಅಮರವೀರರಿಗೆ ಬಗೆದ ದ್ರೋಹವಲ್ಲವೇ?

ಬಜ್ಪೆ ವಿಮಾನ ನಿಲ್ದಾಣ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಕೊಡುಗೆ(25-12-1971). ಇದು ಸಂಸದ ಯು.ಶ್ರೀನಿವಾಸ ಮಲ್ಯರ ಪ್ರಯತ್ನದ ಫಲ. ಈ ವಿಮಾನ ನಿಲ್ದಾಣವನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಅರ್ಪಿಸಿದ್ದು (20-10-2020) ಪ್ರಧಾನಿ ನರೇಂದ್ರ ಮೋದಿ. ಇದು ವಿಕಾಸವೋ? ವಿನಾಶವೋ?

ನವಮಂಗಳೂರು ಬಂದರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕೊಡುಗೆ (1975). ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ. ನವಮಂಗಳೂರು ಬಂದರನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಹಂತಹಂತವಾಗಿ ಮಾರುತ್ತಿರುವುದು ಪ್ರಧಾನಿ ನರೇಂದ್ರ ಮೋದಿ. ಇದು ವಿಕಾಸನೋ? ವಿನಾಶನೋ?

ಬಜ್ಪೆ ವಿಮಾನ ನಿಲ್ದಾಣ, ಎನ್ ಎಂಪಿಟಿ, ಎನ್ ಎಚ್-66, ರೀಜನಲ್ ಎಂಜನಿಯರಿಂಗ್ ಕಾಲೇಜ್, ಎಂಸಿಎಫ್- ಇವೆಲ್ಲ ಕಾಂಗ್ರೆಸ್ ಸಂಸದರ ಕೊಡುಗೆ. ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲು ಕೊಡುಗೆ ಏನು? ಮಳೆಯಲ್ಲಿ ಮುಳುಗುವ ಮಂಗಳೂರು? ಕೋಮುದ್ವೇಷದ ಬೆಂಕಿಯಲ್ಲಿ ಬೇಯುತ್ತಿರುವ ಮಂಗಳೂರು? ಇದು ವಿಕಾಸವೋ? ವಿನಾಶನೋ ಪ್ರಧಾನಿ ನರೇಂದ್ರ ಮೋದಿ?

ದಕ್ಷಿಣ ಕನ್ನಡದ ವಿಕಾಸ ಪುರುಷರು ಕಾಂಗ್ರೆಸ್ ಸಂಸದರಾಗಿದ್ದ ಉಳ್ಳಾಲ ಶ್ರೀನಿವಾಸ ಮಲ್ಯ, ಕೆಮ್ತೂರು ಕಾಂತಪ್ಪ ಶೆಟ್ಟಿ ಮತ್ತು ಬೋಳಾರ ಜನಾರ್ದನ ಪೂಜಾರಿ. ದಕ್ಷಿಣ ಕನ್ನಡದ ವಿನಾಶ ಪುರುಷ- ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲು. ಇದು ವಿಕಾಸವೋ? ವಿನಾಶವೋ ?

ಜೂನ್ ತಿಂಗಳೊಂದರಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದುವರೆ ಕೋಟಿ ಬೆಲೆಯ ಮಾದಕದ್ರವ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾದಕದ್ರವ್ಯ ಸೇವನೆಯಲ್ಲಿ ದೇಶದಲ್ಲಿಯೇ ದಕ್ಷಿಣ ಕನ್ನಡ ಎರಡನೇ ಸ್ಥಾನದಲ್ಲಿದೆ. ಇದು ವಿಕಾಸನೋ? ವಿನಾಶನೋ ?

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾಖಲೆಯ ಮಳೆಯಾಗಿದೆ. ಹೆಜ್ಜೆಹೆಜ್ಜೆಗೂ ಗುಂಡಿಬಿದ್ದ ರಸ್ತೆಗಳು, ಕುಸಿದು ಬಿದ್ದಿರುವ ಮನೆಗಳು, ನೆರೆಯಲ್ಲಿ ಕೊಚ್ಚಿಹೋದ ರೈತರ ಬೆಳೆಗಳು.. ಭೇಟಿಗಾಗಿ ಮಳೆ ಹುಳುಕನ್ನು ಮುಚ್ಚಿಟ್ಟು ರಸ್ತೆಗಳಿಗೆ ತೇಪೆ ಹಾಕಲಾಗಿದೆ. ಇದು ವಿಕಾಸನೋ? ವಿನಾಶನೋ ?

ಕಳೆದ ಮೂರು ವರ್ಷಗಳಲ್ಲಿ ಕಡಲ್ಕೊರೆತ ತಡೆಗೆ ರಾಜ್ಯ ಬಿಜೆಪಿ ಸರಕಾರ ಖರ್ಚು ಮಾಡಿರುವ ಹಣ ಅಂದಾಜು ರೂ.250 ಕೋಟಿ. ಇದರಲ್ಲಿ 40% ಜನಪ್ರತಿನಿಧಿಗಳ ಜೇಬಿಗೆ, 60% ಕಡಲ ನೀರಿಗೆ. ಕಡಲ್ಕೊರೆತ ಮುಂದುವರಿದಿದೆ. ಇದು ವಿಕಾಸವೋ? ವಿನಾಶನೋ

ಕರಾವಳಿ ಮೀನುಗಾರರ ಮೇಲೆ ಸಿಆರ್ ಜೆಡ್, ಸಿಎಂ ಜೆಡ್ ನಿಯಮಾವಳಿಗಳ ಹೇರಿಕೆ. ಪ್ರವಾಸೋದ್ಯಮದ ಹೆಸರಲ್ಲಿ ರೆಸಾರ್ಟ್, ಥೀಮ್ ಪಾರ್ಕ್ ಗಳಿಗೆ ಮುಕ್ತ ಪರವಾನಿಗೆ. ಇದು ವಿಕಾಸನೋ? ವಿನಾಶನೋ ?

48 ಕಿ.ಮೀ. ಅಂತರದಲ್ಲಿ ಬ್ರಹ್ಮರಕೂಟ್ಲು, ಸುರತ್ಕಲ್, ತಲಪಾಡಿ ಮತ್ತು ಹೆಜಮಾಡಿಗಳಲ್ಲಿ 4 ನಿಯಮಬಾಹಿರ ಟೋಲ್ ಗೇಟ್ ಗಳು. ವಾಹನ ಸಂಚಾರಿಗಳ ಜೇಬು ಖಾಲಿ, ಅಕ್ರಮದ ರೂವಾರಿಗಳಾದ ಬಿಜೆಪಿಯ ಸಂಸದರು ಮತ್ತು ರಾಜ್ಯ ಬಿಜೆಪಿ ಶಾಸಕರ ಜೇಬು ಭರ್ತಿ. ಇದು ವಿಕಾಸನೋ? ವಿನಾಶನೋ ?"
ಇದನ್ನೂ ಓದಿ: 

ಎದೆನೋವು: ಮುರುಘಾಶ್ರೀಯನ್ನು ಆಸ್ಪತ್ರೆಗೆ ದಾಖಲಿಸಿದ ಪೊಲೀಸರು

ಸನ್ಮಾನ್ಯ ಪ್ರಧಾನ ಮಂತ್ರಿ @narendramodi ಯವರಿಗೆ ಮಂಗಳೂರಿಗೆ ಸ್ವಾಗತ.
ನಿಮ್ಮ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ?
ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ. 1/12
#AnswerMadiModi

— Siddaramaiah (@siddaramaiah) September 2, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X