ಸುಳ್ಯ | ಕೆಎಸ್ಸಾರ್ಟಿಸಿ ಬಸ್ ಸಂಚಾರದಲ್ಲಿ ಭಾರೀ ವ್ಯತ್ಯಯ: ಪ್ರಯಾಣಿಕರಿಗೆ ಸಂಕಷ್ಟ!
ಮಂಗಳೂರಿಗೆ ಪ್ರಧಾನಿ ಆಗಮನ ಹಿನ್ನೆಲೆ

ಸುಳ್ಯ, ಸೆ.2: ಮಂಗಳೂರಿನಲ್ಲಿಂದು ನಡೆಯುವ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ಸರಕಾರದ ಯೋಜನೆಗಳ ಫಲಾನುಭವಿಗಳನ್ನು ಕರೆದೊಯ್ಯಲು ಕೆಎಸ್ಸಾರ್ಟಿಸಿ ಬಸ್‌ಗಳನ್ನು ಬಳಸುತ್ತಿರುವ ಕಾರಣ ಸುಳ್ಯ ತಾಲೂಕಿನಲ್ಲಿ ಸರಕಾರಿ ಬಸ್ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಇದರಿಂದ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬಸ್‌ಗಳು ಇಲ್ಲದೆ ಸುಳ್ಯ ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ.
ಸುಳ್ಯ ಕೆಎಸ್ಸಾರ್ಟಿಸಿ ಡಿಪೋದಿಂದ 50 ಬಸ್‌ಗಳು ಪ್ರಧಾನಿ ಕಾರ್ಯಕ್ರಮಕ್ಕೆ ಜನರನ್ನು ಕರೆದೊಯ್ದಿದೆ. ಇದರಿಂದ ತಾಲೂಕಿನ ವಿವಿಧ ಗ್ರಾಮೀಣ ಭಾಗ ಹಾಗೂ ನಗರದಲ್ಲೂ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಸಾರ್ವಜನಿಜರು, ವಿದ್ಯಾರ್ಥಿಗಳು ಬಸ್ ಇಲ್ಲದೆ ಸಂಕಷ್ಟಕ್ಕೊಳಗಾಗಿದ್ದಾರೆ. ವಿದ್ಯಾರ್ಥಿಗಳಿಗೆ ಸುಳ್ಯ ಹಾಗೂ ಇತರ ಭಾಗಗಳ ಶಾಲಾ ಕಾಲೇಜುಗಳಿಗೆ ಬರಲು ಸಾಧ್ಯವಾಗಿಲ್ಲ. ಬಸ್ ಇಲ್ಲದೆ ವಿದ್ಯಾರ್ಥಿಗಳು ಅಲ್ಲಲ್ಲಿ ಬಾಕಿ ಆಗಿರುವ ಬಗ್ಗೆ ವರದಿಯಾಗಿದೆ.
ಇದನ್ನೂ ಓದಿ: ಸ್ವದೇಶಿ ನಿರ್ಮಿತ ವಿಮಾನವಾಹಕ ನೌಕೆ INS ವಿಕ್ರಾಂತ್ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ
ಸುಳ್ಯ, ಪುತ್ತೂರು, ಮಂಗಳೂರು ಮತ್ತಿತರ ಕಡೆಗಳಿಗೆ ತೆರಳುವ ಸಾರ್ವಜನಿಕರಿಗೆ, ಉದ್ಯೋಗಿಗಳಿಗೆ ಕೂಡ ಪ್ರಯಾಣಿಸಲು ಬಸ್ ಇಲ್ಲದೆ ಸಮಸ್ಯೆ ಎದುರಿಸಿದರು. ಕೆಲವು ಮಂದಿ ಖಾಸಗಿ ವಾಹನಗಳಲ್ಲಿ ತೆರಳಿದರು.
ಮಂಗಳೂರಿನ ಕಾರ್ಯಕ್ರಮಕ್ಕೆ ತೆರಳಲು ಸುಳ್ಯ ಡಿಪೊ ಮಾತ್ರವಲ್ಲದೆ ಹಾಸನ, ಮಡಿಕೇರಿ ಡಿಪೊಗಳಿಂದಲೂ ಬಸ್ ಗಳನ್ನು ತರಲಾಗಿದೆ.








