Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ನ್ಯಾಯದ ನಿರೀಕ್ಷೆಯಲ್ಲಿ...

ನ್ಯಾಯದ ನಿರೀಕ್ಷೆಯಲ್ಲಿ...

ರೂಪ ಹಾಸನರೂಪ ಹಾಸನ2 Sept 2022 12:42 PM IST
share
ನ್ಯಾಯದ ನಿರೀಕ್ಷೆಯಲ್ಲಿ...

ಮಠದ ಪ್ರೌಢಶಾಲೆಯಲ್ಲಿ ಓದುತ್ತಾ, ಅಲ್ಲಿನದೇ ಹೆಣ್ಣುಮಕ್ಕಳ ವಸತಿನಿಲಯದಲ್ಲಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದ ಪೀಠಾಧ್ಯಕ್ಷರು ಹಾಗೂ ಇನ್ನಿತರ ನಾಲ್ವರ ವಿರುದ್ಧ ಪೊಕ್ಸೊ ಪ್ರಕರಣ ದಾಖಲಾಗಿ ಈಗ ಐದಾರು ದಿನಗಳೇ ಕಳೆದಿದೆ. ಆದರೆ ಪೊಕ್ಸೊ ಕಾಯ್ದೆಯ ಅನೇಕ ವಿಶೇಷ ನಿಯಮಗಳನ್ನು ಚಿತ್ರದುರ್ಗದ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಹಾಗೂ ಪೊಲೀಸ್ ಇಲಾಖೆ ತಕ್ಷಣಕ್ಕೆ ಅನುಷ್ಠಾನಗೊಳಿಸದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಇದೊಂದು ಸಂಜ್ಞೇಯ ಮತ್ತು ಜಾಮೀನುರಹಿತ ಅಪರಾಧವಾದ್ದರಿಂದ ಪೊಕ್ಸೊ ಪ್ರಕರಣ ದಾಖಲಾದ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಬೇಕು. ಆದರೆ ಅದಕ್ಕೆ ಬದಲಾಗಿ ಪ್ರಕರಣದ ಪ್ರಮುಖ ಆರೋಪಿಯನ್ನು ತಮ್ಮ ವಾಸ ಸ್ಥಳ ಬಿಟ್ಟು ಇತರ ಜಿಲ್ಲೆಗಳ ಅಜ್ಞಾತ ಸ್ಥಳಗಳಲ್ಲಿ ಅಡ್ಡಾಡಲು ಬಿಟ್ಟಿರುವುದು, ‘ಲೈಂಗಿಕ ದೌರ್ಜನ್ಯ ಪ್ರಕರಣದ ಅಗತ್ಯ ಸಾಕ್ಷಿಗಳು ಸಿಕ್ಕ ನಂತರ ಆರೋಪಿಗಳನ್ನು ಬಂಧಿಸುತ್ತೇವೆ’ ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿಕೆ ನೀಡಿರುವುದು ಹಾಗೂ ಆರೋಪಿಗಳು ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ಮಠದಲ್ಲಿಯೇ ಇರುವ ಸಂದರ್ಭದಲ್ಲಿಯೇ ಸಂತ್ರಸ್ತ ಹೆಣ್ಣುಮಕ್ಕಳನ್ನು ಅಲ್ಲಿಗೆ ಕರೆದೊಯ್ದು ಸ್ಥಳ ಮಹಜರು ಮಾಡಿಸಿದ್ದು... ಈ ಎಲ್ಲವೂ ಅಸಹಾಯಕ ಸ್ಥಿತಿಯಲ್ಲಿರುವ ಸಂತ್ರಸ್ತ ಬಾಲಕಿಯರಿಗೆ ಬೆಂಬಲವಾಗಿ ನಿಲ್ಲಬೇಕಾದ ಸರಕಾರಿ ವ್ಯವಸ್ಥೆ ಆರೋಪಿಗಳಿಗೆ ಬೆಂಬಲವಾಗಿ ನಿಂತಿರುವುದರ ಆತಂಕಕಾರಿ ನಡೆಯಾಗಿದೆ.

ಪೊಕ್ಸೊ ಕಾಯ್ದೆಯನ್ವಯ ಆರೋಪಿಗಳನ್ನು ತಕ್ಷಣಕ್ಕೆ ಬಂಧಿಸದಿರುವ ಹಾಗೂ ಸೆಕ್ಷನ್ 164ರ ಅಡಿಯಲ್ಲಿ ತುರ್ತಾಗಿ ಸಂತ್ರಸ್ತರ ಹೇಳಿಕೆ ದಾಖಲಿಸದೆ ಇರುವ ಮೂಲಕ, ಪ್ರಕರಣದ ಪ್ರಮುಖ ಆರೋಪಿಯು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿರುವುದು ಅಕ್ಷಮ್ಯ. ಜೊತೆಗೆ ಈ ಪ್ರಕರಣದ ಪ್ರಮುಖ ಆರೋಪಿಯು ಪ್ರಕರಣ ದಾಖಲಾದ ದಿನದಿಂದ ತನ್ನ ಸಾವಿರಾರು ಬೆಂಬಲಿಗರೊಂದಿಗೆ ಸಭೆ ನಡೆಸಲು, ಸಂಧಾನ ಪ್ರಯತ್ನಗಳನ್ನು ನಡೆಸಲು, ಸಾವಿರಾರು ಜನರನ್ನು ಉದ್ದೇಶಿಸಿ ಬಹಿರಂಗವಾಗಿ ಭಾಷಣ ಮಾಡಲು ಅವಕಾಶ ನೀಡಿರುವುದು- ಇದು ಅಪ್ರಾಪ್ತ ವಯಸ್ಕ ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಿಸಲು ಇರುವ ಪೋಕ್ಸೋದಂತಹ ಗಂಭೀರ ಕಾಯ್ದೆಯ ಮಹತ್ವವನ್ನೇ ನಾಶ ಮಾಡುತ್ತಿರುವುದು ಅಸಹನೀಯ.

ಈ ಎಲ್ಲ ಪೊಕ್ಸೊ ಕಾಯ್ದೆ ಅನುಷ್ಠಾನ ಲೋಪಗಳು ಹಾಗೂ ಆರೋಪಿಗಳಿಗೆ ಬೆಂಬಲವಾದ ಸರಕಾರಿ ವ್ಯವಸ್ಥೆಯ ನಡೆಗಳು ಖಂಡನೀಯ. ಹೀಗಾಗಿ ಆರೋಪಿಗಳು ಪ್ರತಿಷ್ಠಿತರೂ, ಪ್ರಭಾವಶಾಲಿಗಳೂ ಆಗಿರುವುದರಿಂದ ಹಾಗೂ ಸಂತ್ರಸ್ತ ಬಾಲಕಿಯರು ಈಗಾಗಲೇ ತಿಳಿಸಿರುವಂತೆ ಮಠದ ವಸತಿ ನಿಲಯದ ಇನ್ನಷ್ಟು ಹೆಣ್ಣುಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಈಡಾಗಿರುವ ಸಾಧ್ಯತೆ ಇರುವುದರಿಂದ ತಕ್ಷಣವೇ ರಾಜ್ಯ ಉಚ್ಚನ್ಯಾಯಾಲಯ ಮಧ್ಯ ಪ್ರವೇಶಿಸಿ, ಈ ಪ್ರಕರಣದ ತನಿಖೆಯನ್ನು ಹೊರ ರಾಜ್ಯದಲ್ಲಿ ನಡೆಸಲು ಆದೇಶ ನೀಡಬೇಕು.

share
ರೂಪ ಹಾಸನ
ರೂಪ ಹಾಸನ
Next Story
X