Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕರಾವಳಿ ಕರ್ನಾಟಕದ ಮೂಲಭೂತ ಸೌಕರ್ಯಗಳ...

ಕರಾವಳಿ ಕರ್ನಾಟಕದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯೊಂದಿಗೆ ದೇಶದ ಅಭಿವೃದ್ಧಿ: ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ2 Sept 2022 5:10 PM IST
share
ಕರಾವಳಿ ಕರ್ನಾಟಕದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯೊಂದಿಗೆ ದೇಶದ ಅಭಿವೃದ್ಧಿ: ಪ್ರಧಾನಿ ಮೋದಿ

ಮಂಗಳೂರು, ಸೆ.2: ಕರಾವಳಿ ಕರ್ನಾಟಕದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯೊಂದಿಗೆ ದೇಶದ ಅಭಿವೃದ್ಧಿಯ ಗುರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಮಂಗಳೂರಿನ  ಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿಂದು  ಹಮ್ಮಿಕೊಂಡಿದ್ದ  ಕಾರ್ಯಕ್ರಮದಲ್ಲಿ ಅವರು 3,800 ಕೋಟಿ ರೂ. ಮೊತ್ತದ 3 ಯೋಜನೆಗಳ ಲೋಕಾರ್ಪಣೆ ಮತ್ತು 5 ಯೋಜನೆಗಳ ಶಿಲಾನ್ಯಾಸ ನೆರವೇರಿಸಿ ಮಾತನಾಡುತ್ತಿದ್ದರು.

ಕಳೆದ ಎಂಟು ವರ್ಷಗಳಲ್ಲಿ ಮೂಲಸೌಕರ್ಯ ಕ್ಷೇತ್ರದಲ್ಲಿ ಮಾಡಲಾಗಿರುವ ಪ್ರಗತಿಯಲ್ಲಿ ದೊಡ್ಡ ಪಾಲು ಕರ್ನಾಟಕಕ್ಕೆ ಲಭಿಸಿದೆ. ಸಾಗರ ಮಾಲಾ ಯೋಜನೆ, ರಾಷ್ಷ್ರೀಯ  ಹೆದ್ದಾರಿಗಳ ಅಭಿವೃದ್ಧಿ, ರೈಲ್ವೇ ಹಳಿಗಳ ವಿದ್ಯುದ್ದೀಕರಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ನಾಲ್ಕು ಪಟ್ಟು ಹೆಚ್ಚಿನ ಸಾಧನೆ ಮಾಡಲು ಸಾಧ್ಯವಾಗಿದೆ. ಜಲಜೀವನ್ ಮಿಷನ್ ಯೋಜನೆಯಡಿ ರಾಜ್ಯದಲ್ಲಿ 30ಲಕ್ಷ ಮನೆಗಳಿಗೆ ನೇರವಾಗಿ ಕುಡಿಯುವ ನೀರು ಪೂರೈಕೆ ಮಾಡಲಾಗಿದೆ. ಪ್ರಧಾನಮಂತ್ರಿ ಆಯುಷ್ಮಾನ್ ಯೋಜನೆಯಡಿ 30ಲಕ್ಷ ಫಲಾನುಭಿಗಳಿಗೆ 4ಸಾವಿರ ಕೋಟಿ ರೂ.ಮೊತ್ತದ ವೈದ್ಯಕೀಯ ಸೇವೆಯನ್ನು ಉಚಿತವಾಗಿ ನೀಡಲು ಸಾಧ್ಯವಾಗಿದೆ ಎಂದು ಹೇಳಿದರು.

ದೇಶದ ಪ್ರಥಮ ಸ್ವದೇಶಿ ಏರ್‌ಕ್ರಾಫ್ಟ್ ವಾಹಕ ನೌಕೆಯನ್ನು ಇಂದು ಕೊಚ್ಚಿಯಲ್ಲಿ ಲೋಕಾರ್ಪಣೆ ಮಾಡಲಾಗಿದ್ದು, ಕೇಂದ್ರ ಸರ್ಕಾರ ದೇಶದ ಸೇನಾ ಸುರಕ್ಷತೆಗೆ ಹಾಗೂ ಆರ್ಥಿಕ ಸುರಕ್ಷತೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ನವ ಮಂಗಳೂರು ಬಂದರಿನಲ್ಲಿ ಮೂಲಸೌಲಭ್ಯಗಳ ಅಭಿವೃದ್ಧಿಗೆ 3800 ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಾಗಿದ್ದು, ಇದರಿಂದ ದೇಶದ ಆರ್ಥಿಕತೆಗೆ ಮಾತ್ರವಲ್ಲದೆ ಸ್ಥಳೀಯವಾಗಿ ಹೆಚ್ಚಿನ ಉದ್ಯೋಗವಕಾಶ ಸೃಷ್ಟಿ ಸಾಧ್ಯವಾಗಲಿದೆ. ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಸ್ಥಳೀಯ ಕೃಷಿಕರಿಗೆ ಹಾಗೂ ಮೀನುಗಾರರಿಗೆ ತಮ್ಮ ಉತ್ಪನ್ನಗಳನ್ನು ರಫ್ತು ಮಾಡಲು ಸುಲಭವಾಗಲಿದೆ.  ಕಡಿಮೆ ವೆಚ್ಚದಲ್ಲಿ ಉತ್ಪನ್ನಗಳ ರಫ್ತು ಸಾಧ್ಯವಾಗಲಿದ್ದು, ನವ ಮಂಗಳೂರು ಬಂದರಿನ ಸಾಮರ್ಥ್ಯ ದ್ವಿಗುಣಳ್ಳಲಿದೆ ಎಂದು ಹೇಳಿದರು.

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರಾಣಿ ಅಬ್ಬಕ್ಕ ಮತ್ತು ರಾಣಿ ಚೆನ್ನಭೈರಾದೇವಿ ಅವರು ನಮಗೆ ಸ್ಪೂರ್ತಿಯಾಗಿದ್ದಾರೆ ಎಂದು ಪ್ರಧಾನಿ ಅವರು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಡಬಲ್ ಇಂಜಿನ್ ಸರ್ಕಾರದಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಿದೆ. ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ 3800 ಕೋಟಿ ರೂ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಪ್ರಧಾನಿ ಅವರು ಚಾಲನೆ ನೀಡಿದ್ದು, ಈ ಮೂಲಕ ಕರಾವಳಿಯ ಅಭಿವೃದ್ಧಿಗೆ ವೇಗ ದೊರಕಲಿದೆ. ಬಂದರಿನ ವಹಿವಾಟು ಸಾಮರ್ಥ್ಯ ನಾಲ್ಕು ಪಟ್ಟು ಹೆಚ್ಚಾಗಲಿದ್ದು, ದೇಶದ ಆರ್ಥಿಕತೆಗೆ ಬಲ ತುಂಬಲಿದೆ. ಇದರಿಂದ ಮುಂದಿನ ದಿನಗಳಲ್ಲಿ ಕರಾವಳಿ ಮಾತ್ರವಲ್ಲದೆ, ರಾಜ್ಯದ ಅಭಿವೃದ್ಧಿ ಸಾಧ್ಯವಾಗಲಿದೆ. ನವಭಾರತದ ನಿರ್ಮಾಣದಲ್ಲಿ ನಮ್ಮ ಕರ್ನಾಟಕ ಮಹತ್ವದ ಪಾತ್ರ ವಹಿಸಲಿದೆ ಎಂದು ಹೇಳಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಷಿ ಸರ್ಬಾನಂದ್ ಸೊನೊವಾಲ, ಶ್ರೀಪಾದ್ ನಾಯಕ್, ಶಾಂತನು ಠಾಕೂರ್, ಶೋಭಾ ಕರಂದ್ಲಾಜೆ, ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ, ಸುನೀಲ್ ಕುಮಾರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X