Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕರಾವಳಿಯ ಆರ್ಥಿಕತೆ, ಪ್ರವಾಸೋದ್ಯಮದ...

ಕರಾವಳಿಯ ಆರ್ಥಿಕತೆ, ಪ್ರವಾಸೋದ್ಯಮದ ಅಭಿವೃದ್ಧಿಗೆ ಪೂರಕ: ಸಿಎಂ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ2 Sept 2022 6:40 PM IST
share
ಕರಾವಳಿಯ ಆರ್ಥಿಕತೆ, ಪ್ರವಾಸೋದ್ಯಮದ ಅಭಿವೃದ್ಧಿಗೆ ಪೂರಕ: ಸಿಎಂ ಬಸವರಾಜ ಬೊಮ್ಮಾಯಿ

ಮಂಗಳೂರು : ಕರ್ನಾಟಕದ ಸಿಆರ್ ಝೆಡ್ ಮಾಸ್ಟರ್ ಪ್ಲಾನ್ ಕೇಂದ್ರ ಸರ್ಕಾರ ಅನುಮೋದನೆ  ನೀಡಿ ಆದೇಶ ಮಾಡಿದೆ. ಕರ್ನಾಟಕದ 30 ವರ್ಷದ ಹೋರಾಟಕ್ಕೆ ಜಯ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು  ಇಂದು ಮಂಗಳೂರಿನಲ್ಲಿ ಆಯೋಜಿಸಿರುವ 3,800 ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಪಾಲ್ಗೊಂಡು ಮಾತನಾಡಿದರು.

ರಾಜ್ಯದ ಕರಾವಳಿ ಭಾಗದ ಆರ್ಥಿಕತೆ, ಪ್ರವಾಸೋದ್ಯಮದ ಅಭಿವೃದ್ಧಿಗೆ ಈ ಯೋಜನೆ ಪೂರಕವಾಗಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಅಭಿನಂದನೆ ಸಲ್ಲಿಸಿದರು.

ಕರ್ನಾಟಕ ಹಾಗೂ ಕೇಂದ್ರದಲ್ಲಿ ಡಬಲ್ ಇಂಜಿನ್ ಸರ್ಕಾರವಿದ್ದು, ಇಂದು ಸಾಗರ್ ಮಾಲಾ ಯೋಜನೆಯಲ್ಲಿ 18 ಯೋಜನೆಗಳನ್ನು ಪೂರ್ಣಗೊಳಿಸಿ, 14 ಯೋಜನೆಗಳನ್ನು ಇದೇ ವರ್ಷ  950 ಕೋಟಿ ರೂ.ಗಳ  ಯೋಜನೆಗೆ  ಜಲಸಾರಿಗೆ ಮತ್ತು ಬಂದರು ಇಲಾಖೆ ಅನುಮೋದನೆ ನೀಡಿ, ಮೋದಿಯವರ ನೇತೃತ್ವದಲ್ಲಿ ದೊಡ್ಡ ಪ್ರಮಾಣದಲ್ಲಿ  ಕರಾವಳಿ ಪ್ರದೇಶದ ಅಭಿವೃದ್ಧಿಗೆ ನರೇಂದ್ರ ಮೋದಿಯವರ ಆಶೀರ್ವಾದವೇ  ಕಾರಣ ಎಂದರು. 

ರಾಜ್ಯದ ಅಭಿವೃದ್ಧಿಗೆ ಪೂರಕವಾದ ಯೋಜನೆಗಳಿಗೆ ಅನುಮೋದನೆ ನೀಡಿದ ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಕಾರವಾರದ ಮಾಜಾಳಿ ಬಂದರು ಅಭಿವೃದ್ಧಿಯ 350 ಕೋಟಿ ರೂ. ಗಳ ಯೋಜನೆಗೆ ಅನುಮೋದನೆ ದೊರೆತಿದೆ. ಇದು ಡಬಲ್ ಇಂಜಿನ್ ಸರ್ಕಾರದ ಸಾಧನೆ. ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಮೀನುಗಾರರಿಗೆ ಅನುಕೂಲವಾಗಲು ಆಳಸಮುದ್ರ ಮೀನುಗಾರಿಕೆಗಾಗಿ 100 ಹೈಸ್ಪೀಡ್ ದೋಣಿಗಳನ್ನು ನೀಡುವ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.  ಈ ಎಲ್ಲ ಯೋಜನೆಗಳಿಂದ ಕರಾವಳಿ ಭಾಗದ ಸಮಗ್ರ ಅಭಿವೃಧ್ಧಿ ಆಗುತ್ತದೆ ಎಂದರು.

ನವಕರ್ನಾಟಕದಿಂದ ನವಭಾರತದ ಅಭಿವೃದ್ಧಿ ಸಾಧ್ಯವಾಗಲಿದೆ

ಸರ್ಕಾರದಿಂದ 2 ಬಂದರುಗಳ ಅಭಿವೃದ್ಧಿ  ಜೊತೆಗೆ ನವ ಮಂಗಳೂರು ಬಂದರು, ಕಾರವಾರ ಬಂದರುಗಳ ವಿಸ್ತರಣೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಪ್ರಧಾನಿಯವರ ಆತ್ಮನಿರ್ಭರ ಭಾರತಕ್ಕೆ ಶಕ್ತಿ ತುಂಬಲು ಈ ಬಂದರುಗಳು ಸಹಕರಿಸಲಿದೆ ಎಂದು ನುಡಿದರು.

ಮೀನುಗಾರರ ಮಕ್ಕಳಿಗೆ ವಿದ್ಯಾನಿಧಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ. 2 ಲಕ್ಷ ಮೀನುಗಾರರ ಮಕ್ಕಳಿಗೆ ಅನುಕೂಲವಾಗಲಿದೆ. 5 ಸಾವಿರ ಮನೆಗಳನ್ನು 64 ಕೋಟಿ ರೂ.ಗಳಲ್ಲಿ ನಿರ್ಮಿಸಲಾಗುತ್ತಿದೆ. ಕಾರವಾರದಲ್ಲಿ ಜಲಸಾರಿಗೆ ಮತ್ತು ಮೀನುಗಾರಿಕಾ ಸಂಸ್ಥೆಯನ್ನು ಸ್ಥಾಪಿಸಲಾಗುತ್ತಿದೆ. ಡಬಲ್ ಇಂಜಿನ್ ಸರ್ಕಾರ ಕರ್ನಾಟಕವನ್ನಷ್ಟೇ ಅಲ್ಲ, ಭಾರತವನ್ನೂ ಮುನ್ನಡೆಸುತ್ತಿದೆ. ನವಕರ್ನಾಟಕದಿಂದ ನವಭಾರತದ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ತಿಳಿಸಿದರು.

ಕರಾವಳಿ ಅಭಿವೃದ್ಧಿಯ ಮೂಲಕ ಸಮಗ್ರ  ಕರ್ನಾಟಕದ ಅಭಿವೃದ್ಧಿ

ಇಂದು ಕರಾವಳಿ ಅಭಿವೃದ್ಧಿಯಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡಬೇಕಾದ ದಿನ. ಪ್ರಧಾನಮಂತ್ರಿಯವರ ದೂರದೃಷ್ಟಿಯಿಂದ ಇದು ಸಾಧ್ಯವಾಗಿದೆ. ವಿದೇಶ ವಿನಿಮಯ ಹೆಚ್ಚಾಗಬೇಕಾದರೆ ಆಮದು, ರಫ್ತು ಹೆಚ್ಚಾಗಲು ನಮ್ಮ ಬಂದರುಗಳ ನಿರ್ವಹಣಾ ಸಾಮರ್ಥ್ಯ  ಹೆಚ್ಚಾಗಬೇಕು. ಇಷ್ಟು ವರ್ಷದ ಯೋಜನೆ ಇಂದು ಪ್ರತಿಫಲ ನೀಡುತ್ತಿದೆ.  ಈ ಹಿನ್ನೆಲೆಯಲ್ಲಿ 3800 ಕೋಟಿ ರೂ.ಗಳ ವೆಚ್ಚದಲ್ಲಿ ನವ ಮಂಗಳೂರು ಬಂದರಿನ ದೊಡ್ಡ ಅನುಕೂಲ ಕಲ್ಪಿಸಲಿದ್ದು, 8 ವರ್ಷದ ಯೋಜನೆ ಇಂದು ಫಲಪ್ರದವಾಗಿದೆ. ನವ ಮಂಗಳೂರು ಬಂದರು ಅಭಿವೃದ್ಧಿ ಆಗುತ್ತಿದೆ. ಇದರ ಸರಕು ನಿರ್ವಹಣೆ 4 ಪಟ್ಟು ಹೆಚ್ಚಾಗಿದೆ. ಎಲ್.ಪಿ.ಜಿ ಟರ್ಮಿನಲ್ ಸ್ಥಾಪನೆಯಾಗುತ್ತಿದೆ. ತೈಲ ಸಂಸ್ಕರಣಾಗಾರವೂ ನಿರ್ಮಾಣವಾಗುತ್ತಿದ್ದು, ಬರುವ ದಿನಗಳಲ್ಲಿ  ಈ ಕರಾವಳಿ ಪ್ರದೇಶದ ಅಭಿವೃದ್ಧಿಯ ಮೂಲಕ ಸಮಗ್ರ  ಕರ್ನಾಟಕದ ಅಭಿವೃದ್ಧಿಯಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X