Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೆಡವಲಾದ ಅವಳಿ ಗೋಪುರದ ಸ್ಥಳದಲ್ಲಿ...

ಕೆಡವಲಾದ ಅವಳಿ ಗೋಪುರದ ಸ್ಥಳದಲ್ಲಿ ಮತ್ತೊಂದು ವಸತಿ ಸಮುಚ್ಛಯ ನಿರ್ಮಾಣ; ಸೂಪರ್‌ಟೆಕ್‌ ಲಿಮಿಟೆಡ್

ವಾರ್ತಾಭಾರತಿವಾರ್ತಾಭಾರತಿ2 Sept 2022 8:03 PM IST
share
ಕೆಡವಲಾದ ಅವಳಿ ಗೋಪುರದ ಸ್ಥಳದಲ್ಲಿ ಮತ್ತೊಂದು ವಸತಿ ಸಮುಚ್ಛಯ ನಿರ್ಮಾಣ; ಸೂಪರ್‌ಟೆಕ್‌ ಲಿಮಿಟೆಡ್

ಹೊಸದಿಲ್ಲಿ: ನೋಯ್ಡಾದಲ್ಲಿ ಕೆಡವಲಾದ ಅವಳಿ ಗೋಪುರಗಳ ಸ್ಥಳವನ್ನು ಮತ್ತೊಂದು ವಸತಿ ಯೋಜನೆಗೆ ಬಳಸಲಾಗುವುದು ಎಂದು ಸೂಪರ್‌ಟೆಕ್ ಲಿಮಿಟೆಡ್ ಗುರುವಾರ ತಿಳಿಸಿದೆ ಎಂದು ಎಎನ್‌ಐ ವರದಿ ಮಾಡಿದೆ.

ಆಗಸ್ಟ್ 28 ರಂದು, ಖಾಸಗಿ ಡೆವಲಪರ್ ನಿರ್ಮಿಸಿದ ಅಪೆಕ್ಸ್ ಮತ್ತು ಸೆಯಾನ್ ಟವರ್‌ಗಳು ಬಹು ಮಹಡಿ ನಿರ್ಮಾಣ ನಿಯಮಗಳನ್ನು ಉಲ್ಲಂಘಿಸಿವೆ ಎಂದು ಸುಪ್ರೀಂ ಕೋರ್ಟ್ ಗಮನಿಸಿದ ನಂತರ ನೆಲಸಮಗೊಳಿಸಲಾಯಿತು. ನೋಯ್ಡಾದ ಸೆಕ್ಟರ್ 93A ನಲ್ಲಿರುವ ಎಮರಾಲ್ಡ್ ಕೋರ್ಟ್ ಎಂಬ ಸೂಪರ್‌ಟೆಕ್‌ನ ಬಹು-ಮಹಡಿ ಹೌಸಿಂಗ್ ಸೊಸೈಟಿಯ ಹಸಿರು ಪ್ರದೇಶದ ಮೇಲೆ ಈ ಕಟ್ಟಡವನ್ನು ನಿರ್ಮಿಸಲಾಗಿತ್ತು.

ನೋಯ್ಡಾ ಪ್ರಾಧಿಕಾರದಿಂದ ಅನುಮೋದನೆ ಮತ್ತು ಎಮರಾಲ್ಡ್ ಕೋರ್ಟ್‌ನ ಮನೆ ಖರೀದಿದಾರರಿಂದ ಒಪ್ಪಿಗೆ ಪಡೆದ ನಂತರ ಹೊಸ ವಸತಿ ಯೋಜನೆಗೆ ಭೂಮಿಯನ್ನು ಬಳಸಲಾಗುವುದು ಎಂದು ಸೂಪರ್‌ಟೆಕ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಆರ್‌ಕೆ ಅರೋರಾ ಗುರುವಾರ ಎಎನ್‌ಐಗೆ ತಿಳಿಸಿದ್ದಾರೆ.

ಆಗಸ್ಟ್ 31, 2021 ರಂದು, ಕಟ್ಟಡ ನಿರ್ಮಾನದ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವಳಿ ಗೋಪುರಗಳನ್ನು ಕೆಡವಲು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ಅವಳಿ ಗೋಪುರಗಳನ್ನು ಕೆಡವಲು ಸೂಪರ್‌ಟೆಕ್‌ಗೆ ನಿರ್ದೇಶನ ನೀಡಿದ ಅಲಹಾಬಾದ್ ಹೈಕೋರ್ಟ್ ನ ಏಪ್ರಿಲ್ 2014 ರ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿತ್ತು. ಅಗ್ನಿಶಾಮಕ ಸುರಕ್ಷತೆ ಮತ್ತು ಕಟ್ಟಡಗಳ ನಡುವೆ ಕಾಯ್ದುಕೊಳ್ಳಬೇಕಾದ ಅಂತರದ ಬಗ್ಗೆ ಸೂಪರ್‌ಟೆಕ್ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಹೈಕೋರ್ಟ್ ಗಮನಿಸಿತ್ತು.

40 ಅಂತಸ್ತಿನ ಟವರ್‌ಗಳಲ್ಲಿ ಫ್ಲಾಟ್‌ಗಳನ್ನು ಖರೀದಿಸಿದ ಎಲ್ಲರಿಗೂ ವಾರ್ಷಿಕ 12% ಬಡ್ಡಿದರದಲ್ಲಿ ಎರಡು ತಿಂಗಳೊಳಗೆ ಮರುಪಾವತಿ ಮಾಡುವಂತೆ ಸುಪ್ರೀಂ ಕೋರ್ಟ್ ಸೂಪರ್‌ಟೆಕ್‌ಗೆ ಆದೇಶಿಸಿತ್ತು.

"ನಾವು ಸೆಯಾನೆ ಅವಳಿ ಟವರ್‌ಗಳ 95% ರಷ್ಟು ಮನೆ ಖರೀದಿದಾರರಿಗೆ ಮರುಪಾವತಿ ಮಾಡಿದ್ದೇವೆ" ಎಂದು ಅರೋರಾ ಗುರುವಾರ ANI ಗೆ ತಿಳಿಸಿದರು. ಸೂಪರ್‌ಟೆಕ್ ಆಸ್ತಿಯನ್ನು ನೀಡುತ್ತಿದೆ ಅಥವಾ ಉಳಿದವರಿಗೆ ಬಡ್ಡಿಯೊಂದಿಗೆ ಅದರ ಹಣವನ್ನು ಹಿಂದಿರುಗಿಸುತ್ತದೆ ಎಂದು ಅವರು ಹೇಳಿದರು.

ಎರಡು ಗೋಪುರ ಕಟ್ಟಡಗಳನ್ನು ಕೆಡವಲು ಕಟ್ಟಡದ ವಿವಿಧ ಭಾಗದಲ್ಲಿ 9,640 ರಂಧ್ರಗಳನ್ನು ಕೊರೆದು ಸುಮಾರು 3,700 ಕಿಲೋಗ್ರಾಂಗಳಷ್ಟು ಸ್ಫೋಟಕಗಳನ್ನು ಬಳಸಲಾಗಿದೆ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X