ಮಾಜಿ ಸಿಎಂ ಯಡಿಯೂರಪ್ಪ ಉಡುಪಿಗೆ ಭೇಟಿ

ಉಡುಪಿ, ಸೆ.2: ಬಿಜೆಪಿ ಪಕ್ಷದ ಕೇಂದ್ರೀಯ ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣಾ ಸಮಿತಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಕ್ರವಾರ ಉಡುಪಿಗೆ ಭೇಟಿ ನೀಡಿದರು.
ಯಡಿಯೂರಪ್ಪರನ್ನು ಭೇಟಿ ಮಾಡಿದ ಶಾಸಕರಾದ ಕೆ.ರಘುಪತಿ ಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ ಉಭಯ ಕುಶಲೊಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನ ಗಣೇಶ್ ಮೊದಲಾದವರು ಉಪಸ್ಥಿತರಿದ್ದರು.
Next Story





