Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಾರಿಗೆ ನೌಕರರ ಆತ್ಮಹತ್ಯೆ ಪ್ರಕರಣ: ಸಚಿವ...

ಸಾರಿಗೆ ನೌಕರರ ಆತ್ಮಹತ್ಯೆ ಪ್ರಕರಣ: ಸಚಿವ ಶ್ರೀರಾಮುಲು ರಾಜೀನಾಮೆಗೆ ಆಪ್ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ2 Sept 2022 9:19 PM IST
share
ಸಾರಿಗೆ ನೌಕರರ ಆತ್ಮಹತ್ಯೆ ಪ್ರಕರಣ: ಸಚಿವ ಶ್ರೀರಾಮುಲು ರಾಜೀನಾಮೆಗೆ ಆಪ್ ಒತ್ತಾಯ

ಬೆಂಗಳೂರು, ಸೆ.2: ಮೂವರು ಸಾರಿಗೆ ನೌಕರರ ಆತ್ಮಹತ್ಯೆಯ ನೈತಿಕ ಹೊಣೆ ಹೊತ್ತು ರಾಜ್ಯ ಸಾರಿಗೆ ಸಚಿವ ಸ್ಥಾನಕ್ಕೆ ಶ್ರೀರಾಮುಲು ರಾಜೀನಾಮೆ ನೀಡಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಆಗ್ರಹಿಸಿದರು.

ಶುಕ್ರವಾರ ನಗರದಲ್ಲಿರುವ ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಭಾಸ್ಕರ್ ರಾವ್, ಸಾರಿಗೆ ಸಚಿವ ಶ್ರೀರಾಮುಲು ಅಧಿಕಾರಾವಧಿಯಲ್ಲಿ ಸಾರಿಗೆ ಇಲಾಖೆಯಲ್ಲಿ ಭ್ರಷ್ಟಾಚಾರ ಹಾಗೂ ಅಕ್ರಮ ಚಟುವಟಿಕೆಗಳು ಮಿತಿ ಮೀರಿವೆ. ಇಲಾಖೆಯ ಉನ್ನತ ಅಧಿಕಾರಿಗಳು ನೌಕರರಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದರು.

ಸರಕಾರವು ಅಗತ್ಯ ಸೌಲಭ್ಯಗಳನ್ನು ಕಲ್ಪಿಸದೇ ಸಾರಿಗೆ ನೌಕರರನ್ನು ಶತ್ರುಗಳಂತೆ ಕಾಣುತ್ತಿದೆ. ನೌಕರರ ಹಿತ ಕಾಪಾಡುವುದರಲ್ಲಿ ವಿಫಲರಾದ ಸಚಿವ ಶ್ರೀರಾಮುಲು ತಕ್ಷಣವೇ ರಾಜೀನಾಮೆ ನೀಡಿ, ಆ ಸ್ಥಾನಕ್ಕೆ ಸಮರ್ಥರು ನೇಮಕಗೊಂಡರೆ ಮಾತ್ರ ಇಲಾಖೆಯಲ್ಲಿನ ಸಾಲುಸಾಲು ಸಮಸ್ಯೆಗಳು ಬಗೆಹರಿಯಲಿವೆ ಎಂದು ಭಾಸ್ಕರ್ ರಾವ್ ಹೇಳಿದರು.

ಇದುವರೆವಿಗೂ 30ಕ್ಕೂ ಹೆಚ್ಚು ನೌಕರರ ಆತ್ಮಹತ್ಯೆಗೆ ಕಾರಣರಾದ ಡಿಪೋ ಮ್ಯಾನೇಜರ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಆಮ್ ಆದ್ಮಿ ಪಾರ್ಟಿಯು ಪ್ರತಿಭಟನೆ ನಡೆಸಿದ್ದರೂ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಜಿಗಣಿ, ಬನಶಂಕರಿ ಹಾಗೂ ಚನ್ನಸಂದ್ರ ಡಿಪೆÇೀಗಳ ಮೂವರ ಆತ್ಮಹತ್ಯೆ ವಿಚಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಶ್ರೀರಾಮುಲು ಮೌನ ತಾಳಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಅವರು ತಿಳಿಸಿದರು.

ಆತ್ಮಹತ್ಯೆ ಮಾಡಿಕೊಂಡ ನೌಕರರ ಕುಟುಂಬಗಳಿಗೆ ಪರಿಹಾರ ನೀಡುವ ಸೌಜನ್ಯವನ್ನೂ ಸರಕಾರ ತೋರದಿರುವುದು ದುರಂತ, ಕೊರೋನ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ಜನ ಮೃತಪಟ್ಟಿದ್ದು ಅವರ ಕುಟುಂಬಕ್ಕೂ ಸಹ ಪರಿಹಾರ ನೀಡದ ಬೇಜವಾಬ್ದಾರಿ ಸರಕಾರ ಎಂದು ಭಾಸ್ಕರ್ ರಾವ್ ಹೇಳಿದರು.

ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರ ಸಂಘಟನಾ ಕಾರ್ಯದರ್ಶಿ ಸುರೇಶ್ ರಾಥೋಡ್ ಮಾತನಾಡಿ, ಸಾರಿಗೆ ಇಲಾಖೆಯ ಪುನಶ್ಚೇತನ ಹಾಗೂ ನೌಕರರ ಹಿತ ಕಾಪಾಡಲು ವಿಫಲರಾಗಿರುವ ಶ್ರೀರಾಮುಲುರವರಿಗೆ ಆ ಸ್ಥಾನದಲ್ಲಿ ಮುಂದುವರಿಯುವ ಯೋಗ್ಯತೆಯಿಲ್ಲ ಎಂದರು.

ಬಸವರಾಜ ಬೊಮ್ಮಾಯಿಯವರು ಕೂಡಲೇ ಶ್ರೀರಾಮುಲುರವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು. ಆತ್ಮಹತ್ಯೆ ಮಾಡಿಕೊಂಡ ನೌಕರ ಹೊಳೆ ಬಸಪ್ಪರವರು ಡಿಪೋ ಮ್ಯಾನೇಜರ್ ವಿರುದ್ಧ ಡೆತ್ ನೋಟ್ ಬರೆದಿಟ್ಟಿದ್ದರೂ ಪೊಲೀಸರು ಕ್ರಮ ಕೈಗೊಳ್ಳಲು ಮೀನಮೇಷ ಎಣಿಸುತ್ತಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ತನ್ನ ತಪ್ಪನ್ನು ಮುಚ್ಚಿಕೊಳ್ಳಲು ವಿನಾಕಾರಣ ಆಮ್ ಆದ್ಮಿ ಪಕ್ಷವನ್ನು ದೂಷಿಸುತ್ತಿರುವುದು ಅವರಿಗಿರುವ ನೌಕರರ ಮೇಲಿನ ನಿರ್ಲಕ್ಷ್ಯ, ಬೇಜವಾಬ್ದಾರಿ,  ಮತ್ತು ಲಂಚಬಾಕತನಕ್ಕೆ ಸಾಕ್ಷಿ ಎಂದು ಕಿಡಿಗಾರಿದ ಸುರೇಶ್ ರಾಥೋಡ್, ಸರಕಾರ ಶೀಘ್ರ ಕ್ರಮ ತೆಗೆದುಕೊಳ್ಳದಿದ್ದಲ್ಲಿ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರ ಮನೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಆಮ್ ಆದ್ಮಿ ಪಾರ್ಟಿ ಹಾಗೂ ಬಿಎಂಟಿಸಿ ನೌಕರರ ಸಂಘದ ಮುಖಂಡ ಆನಂದ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X