ಕರಾಟೆ: ರಾಜ್ಯಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.2: ಉಡುಪಿ ಜಿಪಂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶ್ರೀ ಅನಂತೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸ್ನೇಹ ಎಚ್. ಕೋಟ್ಯಾನ್, ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಕಟೀಲಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾಳೆ.
ಇವಳು ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯ ಕುಮಿಟೆ ವಿಭಾಗದಲ್ಲಿ ಪ್ರಥಮ ಹಾಗೂ ಕಟಾದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಸ್ನೇಹ ಕೋಟ್ಯಾನ್ ಪರ್ಕಳದ ಪ್ರವೀಣಾ ಸುವರ್ಣರ ಶಿಷ್ಯೆ ಮತ್ತು ನಿಟ್ಟೂರು ನಾಗವೇಣಿ ಹರೀಶ್ ದಂಪತಿಗಳ ಪುತ್ರಿ.
Next Story





