Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 4,244 ಅಂಗನವಾಡಿ ಕೇಂದ್ರಗಳ ಪ್ರಾರಂಭಕ್ಕೆ...

4,244 ಅಂಗನವಾಡಿ ಕೇಂದ್ರಗಳ ಪ್ರಾರಂಭಕ್ಕೆ ಅಧಿಕೃತ ಆದೇಶ: ಸಚಿವ ಹಾಲಪ್ಪ ಆಚಾರ್‌

ನಗರ ಪ್ರದೇಶದಲ್ಲಿ 2,589 ಅಂಗನವಾಡಿ ಕೇಂದ್ರಗಳ ಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ3 Sept 2022 4:40 PM IST
share
4,244 ಅಂಗನವಾಡಿ ಕೇಂದ್ರಗಳ ಪ್ರಾರಂಭಕ್ಕೆ ಅಧಿಕೃತ ಆದೇಶ: ಸಚಿವ ಹಾಲಪ್ಪ ಆಚಾರ್‌

ಬೆಂಗಳೂರು ಆಗಸ್ಟ್‌ 03: 'ರಾಜ್ಯದ ಸುಮಾರು 16 ಲಕ್ಷ ಕುಟುಂಬಗಳ ಮಕ್ಕಳ ಪೌಷ್ಟಿಕಾಂಶ ಮತ್ತು ಶಾಲಾ ಪೂರ್ವ ಶಿಕ್ಷಣದ ಪ್ರಯೋಜನ ಪಡೆಯುವ ಹಾಗೂ 8100 ಮಹಿಳೆಯರಿಗೆ ಉದ್ಯೋಗಾವಕಾಶ ನೀಡುವಂತಹ 4244 ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಇದಕ್ಕಾಗಿ 268.98 ಕೋಟಿ ರೂಪಾಯಿಗಳ ಅನುದಾನವನ್ನು ಮೀಸಲಿಡಲಾಗಿದ್ದು, ಶೀಘ್ರದಲ್ಲಿ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು' ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವ ಹಾಲಪ್ಪ ಆಚಾರ್‌ ತಿಳಿಸಿದ್ದಾರೆ. 

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಯವರ ಪೋಷಣ್‌ ಮಾಸಾಚರಣೆಯ ಘೋಷಣೆಯ ಬೆನ್ನಲ್ಲೇ ಈ ಅಧಿಕೃತ ಆದೇಶ ಹೊರಡಿಸಿರುವುದು ಬಹಳ ಸಂತಸದ ವಿಷಯವಾಗಿದೆ. ಕರ್ನಾಟಕ ಅಂಗನವಾಡಿ ಮತ್ತು ಪೋಷನ್‌ ಅಭಿಯಾನ 2.0 ಎಂದು ಮರುನಾಮಾಂಕಿತಗೊಂಡಿರುವ ಸಮಗ್ರ ಮಕ್ಕಳ ಅಭಿವೃದ್ದಿ ಯೋಜನೆಯನ್ನು 1975 ರಲ್ಲಿ ಪ್ರಾರಂಭಿಸಲಾಗಿತ್ತು. ಪ್ರಸ್ತುತ ರಾಜ್ಯದಲ್ಲಿ ಈ ಯೋಜನೆಯ ಅಡಿಯಲ್ಲಿ ಒಟ್ಟು 66,361 ಅಂಗನವಾಡಿ ಕೇಂದ್ರಗಳು ಸ್ಥಾಪಿತವಾಗಿದ್ದು, ಅವುಗಳ ಮೂಲಕ ರಾಜ್ಯದ ಮಕ್ಕಳಿಗೆ, ಕಿಶೋರಿಯರಿಗೆ, ಗರ್ಭಿಣಿ ಸ್ತ್ರೀಯರಿಗೆ ಹಾಗೂ ಬಾಣಂತಿಯರಿಗೆ ಪೂರಕ ಪೌಷ್ಟಿಕ ಆಹಾರ, ಶಾಲಾ ಪೂರ್ವ ಶಿಕ್ಷಣ, ಪೌಷ್ಟಿಕತೆ ಮತ್ತು ಆರೋಗ್ಯ ಶಿಕ್ಷಣ ಮುಂತಾದ 6 ಸೇವೆಗಳನ್ನು ಒದಗಿಸಲಾಗುತ್ತಿದೆ' ಎಂದರು.

ಪ್ರಸ್ತುತ ಈ ಯೋಜನೆಯ ಅಡಿ ಶೇಕಡಾ 56 ರಷ್ಟು ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ನೀಡಲು ಸಾಧ್ಯವಾಗಿದೆ. ಈ ಯೋಜನೆಯಿಂದ ಹೊರಗಿರುವ ಕಡಿಮೆ ಆದಾಯದ ಜನಸಂಖ್ಯೆಯು ವಾಸಿಸುವ ಪ್ರದೇಶಗಳು ಹೆಚ್ಚಾಗಿದ್ದು, ಅವರಿಗೆ 6 ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮಹತ್ವದ ನಿರ್ಧಾರ ತಗೆದುಕೊಂಡಿದೆ ಎಂದು ಹೇಳಿದ್ದಾರೆ. 

ರಾಜ್ಯ ಸರಕಾರ ತನ್ನ ಅನುದಾನದಲ್ಲಿಯೇ ಈ ಹೊಸ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸುತ್ತಿದೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್‌ ಬೊಮ್ಮಾಯಿ ಅವರು ತಮ್ಮ 76 ನೇ ವರ್ಷದ ಸ್ವಾತಂತ್ರೋತ್ಸವ ಭಾಷಣದಲ್ಲಿ ಘೋಷಿಸಿದ ಒಂದು ತಿಂಗಳ ಒಳಗಾಗಿಯೇ ಅನುಷ್ಠಾನದತ್ತ ಸ್ಪಷ್ಟ ಹೆಜ್ಜೆಯನ್ನು ಇಟ್ಟಿರುವುದು ಬಹಳ ಸಂತಸದ ವಿಷಯವಾಗಿದೆ. ಈ ಅಂಗನವಾಡಿ ಕೇಂದ್ರಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X