ಕಾರ್ಕಳ; ಲಾರಿ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಕಾರ್ಕಳ : ಕುಕ್ಕುಂದೂರು ರಂಗನಪಲ್ಕೆ ರಸ್ತೆಯ ನಕ್ರೆ ಎಂಬಲ್ಲಿ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.
ಉತ್ತರ ಪ್ರದೇಶ ಮೂಲದ ಸಲ್ಮಾನ್ ಎಂಬವರು ಸ್ಥಳದಲ್ಲೇ ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ.
ಲಾರಿ ಚಾಲಕ ಸಿದ್ದೀಕ್ ಎಂಬಾತ ಕಾರ್ಕಳದಿಂದ ರಂಗನಪಲ್ಕೆ ಕಡೆಗೆ ಲಾರಿಯನ್ನು ಚಲಾಯಿಸಿಕೊಂಡು ಹೋಗುತ್ತಿರುವಾಗ ನಕ್ರೆ ಸಮೀಪದ ಬೋಪಾಡಿ ಎಂಬಲ್ಲಿ ಬೈಕ್‌ಗೆ ಡಿಕ್ಕಿಯಾಗಿದೆ. ಸವಾರ ಸಲ್ಮಾನ್ ಬೈಕ್‌ನೊಂದಿಗೆ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Next Story





