ಉಡುಪಿ; ಪಿಪಿಸಿಯಿಂದ ಸ್ವಚ್ಛ ಸಾಗರ, ಸುರಕ್ಷಿತ ಸಾಗರ ಅಭಿಯಾನ

ಉಡುಪಿ, ಸೆ.3: ಕೇಂದ್ರ ಸರಕಾರದ ಭೂವಿಜ್ಞಾನ ಸಚಿವಾಲಯ, ಹೊಸದಿಲ್ಲಿಯ ವಿಜ್ಞಾನ ಪ್ರಸಾರ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ಮಂಗಳೂರು ಮತ್ತು ಪೂರ್ಣಪ್ರಜ್ಞ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛ ಸಾಗರ, ಸುರಕ್ಷಿತ ಸಾಗರ ಅಭಿಯಾನವನ್ನು ಇತ್ತೀಚೆಗೆ ಮಲ್ಪೆ ಕಡಲ ಕಿನಾರೆಯಲ್ಲಿ ಆಯೋಜಿಸಲಾಗಿತ್ತು.
ಕಡಲತೀರದ ಸ್ವಚ್ಛತಾ ಕಾರ್ಯಕ್ರಮದ ಉದ್ಘಾಟನೆಯನ್ನು ಮಲ್ಪೆಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದು, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ ಅಧಿಕೃತವಾಗಿ ಉದ್ಘಾಟಿಸಿದರು. ಅಧ್ಯಕ್ಷತೆ ಯನ್ನು ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲ ಡಾ.ರಾಘವೇಂದ್ರ ಎ. ವಹಿಸಿದ್ದರು.
ಮೀನುಗಾರಿಕೆ ಎಂಬುದು ಕರಾವಳಿ ಪ್ರದೇಶದ ಜನರ ಜೀವನಾಡಿಯಾಗಿದೆ. ಈ ಸಂಪತ್ತನ್ನು ನಮ್ಮ ಮುಂದಿನ ಪೀಳಿಗೆಗೆ ಉಳಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಉದ್ಘಾಟಕ ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದರು. ಮುಖ್ಯ ಅತಿಥಿಯಾ ಯಶ್‌ಪಾಲ್ ಸುವರ್ಣ ಭಾಗವಹಿಸಿದ್ದರು.
ಕಾರ್ಯಕ್ರಮದ ಸಂಯೋಜಕಿ ಸುಪರ್ಣ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಸಂದೀಪ್ ವಂದಿಸಿದರು. ಬಳಿಕ ಕಾಲೇಜಿನ ವಿದ್ಯಾರ್ಥಿ ಗಳು ಮಲ್ಪೆ ಕಡಲತೀರದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸರಿ ಸುಮಾರು 200 ಕೆ.ಜಿ.ಯಷ್ಟು ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿದರು.







