ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ; ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಉಡುಪಿ, ಸೆ.3: ಡಿ.ದೇವರಾಜಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಡಿ.ದೇವರಾಜಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಮತ್ತು ೩ಬಿಗೆ ಸೇರಿದ ಅರ್ಹ ಫಲಾನುಭವಿಗಳಿಂದ - https://suvidha.karnataka.gov.in- ಸುವಿಧಾ ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ ೧೦ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗೆ - www.dbcdc.karnataka.gov.in- ನಿಗಮದ ವೆಬ್‌ಸೈಟ್ ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಉಡುಪಿ, ದೂರವಾಣಿ ಸಂಖ್ಯೆ: 0820- 2574882, 080-22374832, ಮೊ.ನಂ:9606066389 ಅನ್ನು ಸಂಪರ್ಕಿಸ ಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story