Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ...

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉಪಯುಕ್ತ ಯೋಜನೆ: ಸಚಿವ ಕೆ. ಗೋಪಾಲಯ್ಯ

ವಾರ್ತಾಭಾರತಿವಾರ್ತಾಭಾರತಿ3 Sept 2022 7:51 PM IST
share
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉಪಯುಕ್ತ ಯೋಜನೆ: ಸಚಿವ ಕೆ. ಗೋಪಾಲಯ್ಯ

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಒಳ್ಳೆಯ ಉದ್ದೇಶ ಹೊಂದಿರುವ ಉಪಯುಕ್ತ ಯೋಜನೆಯಾಗಿದ್ದು, ಇರುವ ಸಣ್ಣ ಪುಟ್ಟ ನೂನ್ಯತೆಗಳನ್ನು ಸರಿಪಡಿಸಲಾಗುವುದು ಎಂದು ಅಬಕಾರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ  ಕೆ.ಗೋಪಾಲಯ್ಯ ಅವರು ತಿಳಿಸಿದರು‌.

ಅವರು ಇಂದು ಹೆದ್ದಾರಿ ರಸ್ತೆ ಪರಿಶೀಲನೆ ನಡೆಸಿ ಮಾತನಾಡಿದರು. ಹೆದ್ದಾರಿ ಕಾಮಗಾರಿಯಲ್ಲಿ ಯಾವುದೇ ತೊಂದರೆ ಇಲ್ಲ. ಸರ್ವಿಸ್ ರಸ್ತೆಯಲ್ಲಿ  ತೊಂದರೆ ಇದೆ ಅದಕ್ಕೆ ಪರ್ಯಾಯ ವ್ಯವಸ್ಥೆ ಹಾಗೂ ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಮೈಸೂರಿನಿಂದ ಬೆಂಗಳೂರಿಗೆ ರಾಷ್ಟ್ರೀಯ ಹೆದ್ದಾರಿ 118 ಕಿ.ಮೀ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ. ಬೆಂಗಳೂರು ನೈಸ್ ರಸ್ತೆಯಿಂದ ನಿಡಘಟ್ಟದವರೆಗೆ ಹಾಗೂ ನಿಡಘಟ್ಟದಿಂದ ಮೈಸೂರಿನ ಮಣಿಪಾಲ್ ಆಸ್ಪತ್ರೆಯ ವರೆಗೆ ಎರಡು ಹಂತದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ ಎಂದರು.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ  ಒಂದು ಒಳ್ಳೆಯ ಯೋಜನೆಯಾಗಿದ್ದು, ಕಾಮಗಾರಿ ಮುಗಿದ ನಂತರ ಈ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರು ನೈಸ್ ರಸ್ತೆಯಿಂದ ಮೈಸೂರಿಗೆ ತಲುಪುವವರು ಒಂದು ಗಂಟೆ ಹದಿನೈದು ನಿಮಿಷದಲ್ಲಿ ತಲುಪಬಹುದು ಸುಮಾರು ಒಂದು ಮುಕ್ಕಾಲು ಗಂಟೆ ಉಳಿತಾಯವಾಗಲಿದೆ ಎಂದರು.

ಗ್ರಾಮಸ್ಥರು ಕೆಲವು ತೊಂದರೆಗಳ ಬಗ್ಗೆ ಪರಿಶೀಲನೆಯ ಸಂದರ್ಭದಲ್ಲಿ ತಿಳಿಸಿದ್ದಾರೆ. 4 ರಿಂದ 5 ಕಡೆ ಜನರು ಓಡಾಡಲು ಅಂಡರ್ ಪಾಸ್ ರಸ್ತೆ ಅವಶ್ಯಕತೆ ಕಂಡುಬಂದಿದೆ. ಈ ಬಗ್ಗೆ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಅನುಮೋದನೆ ಪಡೆದುಕೊಳ್ಳಲು ತಿಳಿಸಲಾಗಿದೆ.ಮಾನ್ಯ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರ ಗಮನಕ್ಕೆ ತರಲಾಗುವುದು ಎಂದರು.

ನಿಡಘಟ್ಟ ಹಾಗೂ ಮದ್ದೂರು ಬಸ್ ಸ್ಟಾಂಡ್ ರಸ್ತೆಯ ಕೆಲವು ನ್ಯೂನತೆ. ಸರ್ವಿಸ್ ರಸ್ತೆಯಲ್ಲಿ ಚರಂಡಿ ವ್ಯವಸ್ಥೆಯ ಬಗ್ಗೆ ಕಾಮಗಾರಿ ಪ್ರಾರಂಭಿಸಿ ಬೇಗ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಇದೇ ವೇಳೆ ವಿಧಾನಸಭಾ ಶಾಸಕರಾದ ಎಂ.ಶ್ರೀನಿವಾಸ್  ಸಂಸದೆ ಸುಮಲತಾ ಅಂಬರೀಶ್, ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿ.ಪಂ. ಸಿಇಒ ಶಾಂತ ಎಲ್.ಹುಲ್ಮನಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಅಪರ ಪೊಲೀಸ್ ವರಿಷ್ಠಾಧಿಕಾರಿ ವೇಣುಗೋಪಾಲ್, ಉಪವಿಭಾಗಾಧಿಕಾರಿಗಳಾದ ಆರ್.ಐಶ್ವರ್ಯ , ಬಿ.ಸಿ ಶಿವಂದಮೂರ್ತಿ, ತಹಶೀಲ್ದಾರ್ ನರಸಿಂಹಮೂರ್ತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು  ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X