ಮಹಿಳೆ ಜೊತೆ ಅನುಚಿತ ವರ್ತನೆ ವಿಚಾರ: ಆಕೆಯನ್ನು ರೇಪ್ ಮಾಡಿದ್ದೀನಾ? ಎಂದು ಪ್ರಶ್ನಿಸಿದ ಬಿಜೆಪಿ ಶಾಸಕ ಲಿಂಬಾವಳಿ

ಬೆಂಗಳೂರು, ಸೆ.3: ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮಳೆಯಿಂದ ಆಗಿರುವ ಅನಾಹುತಗಳ ಬಗ್ಗೆ ಪರಿಶೀಲಿಸಲು ತೆರಳಿದ್ದ ಶಾಸಕ ಅರವಿಂದ ಲಿಂಬಾವಳಿ, ಮಹಿಳೆಯೊಬ್ಬರ ಜೊತೆ ಅನುಚಿತವಾಗಿ ವರ್ತಿಸಿದ್ದರ ಕುರಿತು ಪ್ರಶ್ನಿಸಿದ ಮಾಧ್ಯಮ ಪ್ರತಿನಿಧಿಗಳ ಎದುರು ತಮ್ಮ ನಾಲಗೆ ಹರಿಬಿಟ್ಟಿದ್ದಾರೆ.
‘ಮಹಿಳೆ ಪರ ಮಾತನಾಡುತ್ತಿದ್ದೀರಾ, ಜನರ ಪರವಾಗಿ ಮಾತನಾಡ್ರಿ. ಒತ್ತುವರಿ ಮಾಡಿದ್ದಾರೆ. ಅದನ್ನು ಬಿಟ್ಟು ನೀವು ಮಹಿಳೆಗೆ ಹಂಗ್ ಮಾಡಿದ್ದೀರಾ ಎಂದು ಹೇಳುತ್ತಿದ್ದೀರಾ. ನಾನು ಏನು ಮಾಡಿದ್ದೇನೆ? ಅವಳನ್ನ ರೇಪ್ ಮಾಡಿದ್ದೀನಾ? ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಮರು ಪ್ರಶ್ನೆ ಹಾಕಿದ್ದಾರೆ.
ಇದನ್ನೂ ಓದಿ: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಮಹಿಳಾ ಆಯೋಗಕ್ಕೆ ಆಪ್ ದೂರು
ಶಾಸಕ ಅರವಿಂದ ಲಿಂಬಾವಳಿ ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿರುವುದು ಹಾಗೂ ಮಾಧ್ಯಮ ಪ್ರತಿನಿಧಿಗಳ ಎದುರು ನಾಲಗೆ ಹರಿಬಿಟ್ಟಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಶಾಸಕರ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
Next Story







