Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 2,750 ಕೋಟಿ ರೂ. ಮೊತ್ತದ ಯೋಜನೆಗಳಿಗೆ...

2,750 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಅನುಮೋದನೆ: ಸಚಿವ ಮುರುಗೇಶ್ ನಿರಾಣಿ

'ರಾಜ್ಯದಲ್ಲಿ ಒಟ್ಟು 8,619 ಜನರಿಗೆ ಉದ್ಯೋಗಾವಕಾಶ ಸೃಷ್ಟಿ'

ವಾರ್ತಾಭಾರತಿವಾರ್ತಾಭಾರತಿ3 Sept 2022 9:58 PM IST
share
2,750 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಅನುಮೋದನೆ: ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು, ಸೆ, 3: ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹಾಗೂ ಉದ್ಯಮಿದಾರರಿಗೆ  ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ಒಟ್ಟು 2,750.55 ಕೋಟಿ ರೂ. ಮೊತ್ತದ 53 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.

ಶನಿವಾರ ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ನೇತೃತ್ವದಲ್ಲಿ ನಡೆದ 134ನೆ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಒಟ್ಟು 53 ಯೋಜನೆಗಳಿಂದ 2750.55 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, ಇವುಗಳಿಂದ 8,619 ಜನರಿಗೆ ಉದ್ಯೋಗವಕಾಶ ಲಭ್ಯವಾಗಲಿದೆ ಎಂದು ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

50 ಕೋಟಿ ರೂ. ಗೂ ಹೆಚ್ಚು ಬಂಡವಾಳ ಹೂಡಿಕೆಯ ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಇವುಗಳಿಂದ ರೂ. 1670.69 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 4ಸಾವಿರ ಜನರಿಗೆ ಉದ್ಯೋಗಾವಕಾಶ ಲಭ್ಯವಾಗಲಿದೆ ಎಂದು ಹೇಳಿದರು.

ಇದೇ ರೀತಿ 15 ಕೋಟಿ ರೂ. ಯಿಂದ ರೂ.50 ಕೋಟಿ ರೂ. ಒಳಗಿನ ಬಂಡವಾಳ ಹೂಡಿಕೆಯ 41 ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇದರಿಂದ 1,062 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು ಅಂದಾಜು 4,311 ಜನರಿಗೆ ಉದ್ಯೋಗಗಳು ಸೃಜನೆಯಾಗಲಿವೆ.

ಹೆಚ್ಚುವರಿ ಬಂಡವಾಳ ಹೂಡಿಕೆಯ 3 ಯೋಜನೆಗೆ ಅನುಮೋದನೆ ನೀಡಿದ್ದು, ಇದರಿಂದ 17.85 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದೆ. ಒಟ್ಟು 53 ಯೋಜನೆಗಳಿಂದ ರೂ. 2750.55 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಇವುಗಳಿಂದ 8619 ಜನರಿಗೆ ಉದ್ಯೋಗವಕಾಶ ಲಭ್ಯವಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ, ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಓ, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಹೂಡಿಕೆ ಹಾಗೂ ಉದ್ಯೋಗಗಳು 

-ಉಕೇಮ್ ಅಗ್ರೀ ಇನ್ಪಾ ಲಿ- 497.95 ಕೋಟಿ ರೂ. ಹೂಡಿಕೆ, ಉದ್ಯೋಗ-425
-ಸುಂದರಿ ಶುಗರ್ಸ್ ಲಿಮಿಟೆಡ್- 402.24 ಕೋಟಿ ರೂ. ಹೂಡಿಕೆ, ಉದ್ಯೋಗ-270
-ಎವರೆಸ್ಟ್ ಇಂಡಸ್ಟ್ರೀಸ್ ಲಿಮಿಟೆಡ್- 187 ಕೋಟಿ ರೂ. ಹೂಡಿಕೆ, ಉದ್ಯೋಗ-120 
-ಕೊಪ್ಪಳ ಟಾಯ್ಸ್ ಮೋಲ್ಡಿಂಗ್ ಕೋ ಪ್ರೈವೇಟ್ ಲಿಮಿಟೆಡ್-131.94 ಕೋಟಿ ರೂ.ಹೂಡಿಕೆ, ಉದ್ಯೋಗ-800
-ಅಕ್ವೀಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್-118.27 ಕೋಟಿ ರೂ. ಹೂಡಿಕೆ, ಉದ್ಯೋಗ-485
-ಕೆಆರ್‍ಬಿಎಲ್ ಲಿಮಿಟೆಡ್-110.25 ಕೋಟಿ ರೂ. ಹೂಡಿಕೆ, ಉದ್ಯೋಗ-140
-ಅಕ್ವೀಸ್ ಟಾಯ್ಸ್ ಪ್ರೈವೇಟ್ ಲಿಮಿಟೆಡ್ ಡಿಟಿಎ ಯುನಿಟ್-72.58 ಕೋಟಿ ರೂ. ಹೂಡಿಕೆ, ಉದ್ಯೋಗ-550
-ಹೆಲ್ಲಾ ಇನ್ಫ್ರಾ ಮಾರ್ಕೆಟ್ ಪ್ರೈವೇಟ್ ಲಿಮಿಟೆಡ್-71.66 ಕೋಟಿ ರೂ. ಹೂಡಿಕೆ, ಉದ್ಯೋಗ-1500  
-ಸಾವಿತ್ರಿ ಪ್ಲೈಬೋರ್ಡ್ ಇಂಡಿಯಾ ಪ್ರೈವೇಟ್ ಲಿಮಿಟೆಡ್-49.86 ಕೋಟಿ ರೂ. ಹೂಡಿಕೆ, ಉದ್ಯೋಗ-515 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X