Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶ್ರೀಲಂಕಾ ಪದಚ್ಯುತ ಅಧ್ಯಕ್ಷ ಗೊತಬಯ...

ಶ್ರೀಲಂಕಾ ಪದಚ್ಯುತ ಅಧ್ಯಕ್ಷ ಗೊತಬಯ ಬಂಧನಕ್ಕೆ ವ್ಯಾಪಕ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ3 Sept 2022 10:00 PM IST
share
ಶ್ರೀಲಂಕಾ ಪದಚ್ಯುತ ಅಧ್ಯಕ್ಷ ಗೊತಬಯ ಬಂಧನಕ್ಕೆ ವ್ಯಾಪಕ  ಆಗ್ರಹ

ಕೊಲಂಬೊ, ಸೆ.೩: ಸುಮಾರು ೨ ತಿಂಗಳು ಸ್ವಯಂ ಘೋಷಿತ ದೇಶಭ್ರಷ್ಟತೆಯಿಂದ ಶನಿವಾರ ದೇಶಕ್ಕೆ ಹಿಂದಿರುಗಿರುವ ಶ್ರೀಲಂಕಾದ ಪದಚ್ಯುತ ಅಧ್ಯಕ್ಷ ಗೊತಬಯ ರಾಜಪಕ್ಸರನ್ನು ಬಂಧಿಸಬೇಕೆಂಬ ಆಗ್ರಹ ದೇಶದೆಲ್ಲೆಡೆ ವ್ಯಕ್ತವಾಗಿದೆ.ಕಳೆದ ಜುಲೈಯಲ್ಲಿ ದೇಶದಿಂದ ಪಲಾಯನ ಮಾಡುವಾಗ ಅಧಿಕಾರ ವಹಿಸಿಕೊಂಡ ಸರಕಾರದ ಆಶ್ರಯದಲ್ಲಿ ರಾಜಪಕ್ಸ ಮಾಲ್ದೀವ್ಸ್, ಸಿಂಗಾಪುರ, ಬ್ಯಾಂಕಾಕ್ ಇತ್ಯಾದಿ ದೇಶಗಳಲ್ಲಿ ನೆಲೆಸಿದ್ದರು.

ಇದೀಗ ಅಧ್ಯಕ್ಷರಿಗೆ ದೊರಕುವ ಬಂಧನದಿಂದ ವಿನಾಯತಿ ಸೌಲಭ್ಯವನ್ನು ಅವರು ಕಳೆದುಕೊಂಡಿರುವುದರಿಂದ ತಕ್ಷಣವೇ ಅವರನ್ನು ಬಂಧಿಸಿ ಕಾನೂನು ಕ್ರಮಕ್ಕೆ ಒಳಗಾಗಿಸಬೇಕು ಎಂದು ಒತ್ತಾಯಿಸಲಾಗಿದೆ.

ಅವರನ್ನು ಯಾವ ದೇಶವೂ ಸ್ವೀಕರಿಸಲು ಒಪ್ಪಲಿಲ್ಲ. ಅಡಗಿ ಕುಳಿತಿರಲು ಜಾಗವಿಲ್ಲದ ಕಾರಣ ಅನಿವಾರ್ಯವಾಗಿ ದೇಶಕ್ಕೆ ಮರಳಿದ್ದಾರೆ. ಶ್ರೀಲಂಕಾದ ೨೨ ಮಿಲಿಯನ್ ಜನರ ಬದುಕನ್ನು ನರಕಸದೃಶಗೊಳಿಸಿರುವುದಕ್ಕಾಗಿ ಅವರನ್ನು ತಕ್ಷಣವೇ ಬಂಧಿಸಬೇಕು ಮತ್ತು ಅವರ ಅಪರಾಧಕ್ಕಾಗಿ ಕಾನೂನು ಕ್ರಮಕ್ಕೆ ಒಳಗಾಗಿಸಬೇಕು. ಏನೂ ಆಗಲೇ ಇಲ್ಲ ಎಂಬ ರೀತಿ ಅವರನ್ನು ಮುಕ್ತವಾಗಿ ಬದುಕಲು ಬಿಡಬಾರದು  ಎಂದು ಸರಕಾರದ ವಿರುದ್ಧದ ಪ್ರತಿಭಟನೆಯನ್ನು ಸಂಯೋಜಿಸಿದ್ದ  ಶಿಕ್ಷಕರ ಸಂಘಟನೆಯ ಮುಖಂಡ ಜೋಸೆಫ್ ಸ್ಟಾಲಿನ್ ಆಗ್ರಹಿಸಿದ್ದಾರೆ.

ಈ ಮಧ್ಯೆ, ೨೦೦೯ರಲ್ಲಿ ಪ್ರಮುಖ ಪತ್ರಿಕೆಯೊಂದರ ಸಂಪಾದಕ ಲಸಂತಾ ವಿಕ್ರಮಸಿಂಘೆಯ ಹತ್ಯೆಯಲ್ಲಿ ರಾಜಪಕ್ಸ ಅವರ ಆಪಾದಿತ ಪಾತ್ರವೂ ಸೇರಿದಂತೆ ಹಲವು ಪ್ರಕರಣಗಳಲ್ಲಿ ರಾಜಪಕ್ಸರ ವಿರುದ್ಧ ಕಾನೂನುಕ್ರಮಕ್ಕೆ ಒತ್ತಡ ಹೇರಲಾಗುವುದು ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಹೇಳಿದ್ದಾರೆ. ರಾಜಪಕ್ಸ ವಾಪಾಸು ಬಂದಿರುವುದನ್ನು ನಾವು ಸ್ವಾಗತಿಸುತ್ತೇವೆ. ಇದರಿಂದ ಆತ ಎಸಗಿರುವ ಅಪರಾಧಕ್ಕೆ ಶಿಕ್ಷೆ ವಿಧಿಸಲು ಸಾಧ್ಯವಾಗಲಿದೆ ಎಂದು `ಶ್ರೀಲಂಕಾ ಯಂಗ್ ಜರ್ನಲಿಸ್ಟ್ ಅಸೋಸಿಯೇಷನ್' ಹೇಳಿದೆ. ಅಧ್ಯಕ್ಷರಾಗಿ ಆಯ್ಕೆಗೊಂಡ ಬಳಿಕ ರಾಜಪಕ್ಸ ವಿರುದ್ಧ ಹಲವು ಭ್ರಷ್ಟಾಚಾರ ಪ್ರಕರಣಗಳು ದಾಖಲಿಸಲ್ಪಟ್ಟಿವೆ. ಜತೆಗೆ, ಪತ್ರಕರ್ತ ವಿಕ್ರಮಸಿಂಘೆ ಹತ್ಯೆ ಪ್ರಕರಣ ಹಾಗೂ ತಮಿಳು ಕೈದಿಗಳಿಗೆ ಚಿತ್ರಹಿಂಸೆ ನೀಡಿರುವುದಕ್ಕೆ  ಸಂಬಂಧಿಸಿ ಅಮೆರಿಕದ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ.

ರಾಜಪಕ್ಸಗೆ ಭದ್ರತೆ, ಸರಕಾರಿ ನಿವಾಸದ ಸೌಲಭ್ಯ

 ಕಳೆದ ಜುಲೈಯಲ್ಲಿ ಶ್ರೀಲಂಕಾದಲ್ಲಿ ಸರಕಾರ ವಿರೋಧಿ ಪ್ರತಿಭಟನೆ ಉತ್ತುಂಗ ಹಂತ ತಲುಪಿದ್ದ ಸಂದರ್ಭ ದೇಶದಿಂದ ಪಲಾಯನ ಮಾಡಿದ್ದ ಪದಚ್ಯುತ ಅಧ್ಯಕ್ಷ ಗೊತಬಯ ರಾಜಪಕ್ಸ ಶನಿವಾರ ದೇಶಕ್ಕೆ ಮರಳಿದ್ದು ಅವರಿಗೆ ಸರಕಾರದ ವತಿಯಿಂದ  ಸೂಕ್ತ ಭದ್ರತೆ ಹಾಗೂ ಸರಕಾರಿ ನಿವಾಸವನ್ನು ಒದಗಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

ಜುಲೈ ೧೩ರ ಬೆಳಿಗ್ಗೆ ಲಂಕಾ ದಿಂದ ಪಲಾಯನ ಮಾಡಿದ್ದ ಗೊತಬಯಗೆ  ಮಾಲ್ದೀವ್ಸ್, ಸಿಂಗಾಪುರ ಹಾಗೂ ಥೈಲ್ಯಾಂಡ್ ನಲ್ಲಿ ತಾತ್ಕಾಲಿಕವಾಗಿ ಆಶ್ರಯ ಕಲ್ಪಿಸಲು ಈಗಿನ ಅಧ್ಯಕ್ಷ ವಿಕ್ರಮಸಿಂಘೆ ನೇತೃತ್ವದ ಸರಕಾರ ಮನವಿ ಮಾಡಿತ್ತು. ಶನಿವಾರ ಮರಳಿ ಬಂದ ಗೊತಬಯ, ಕೊಲಂಬೋದ ಅಂತರಾಷ್ಟೀಯ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆಯೇ ಸಚಿವರು ಹಾಗೂ ಹಿರಿಯ ಮುಖಂಡರ ನೇತೃತ್ವದಲ್ಲಿ ಹಾರ ಹಾಕಿ ಹಾರ್ದಿಕವಾಗಿ ಸ್ವಾಗತಿಸಲಾಯಿತು. ಬಳಿಕ ಭದ್ರತಾ ಪಡೆಗಳ ವಾಹನಗಳ ಬೆಂಗಾವಲಿನೊಂದಿಗೆ, ಸರಕಾರ ಒದಗಿಸಿದ ನಿವಾಸಕ್ಕೆ ಗೊತಬಯ ತೆರಳಿದರು ಎಂದು ವರದಿಯಾಗಿದೆ. 

ರಾಜಪಕ್ಸ ಅವರ ಮುಂದಿನ ನಡೆಯ ಬಗ್ಗೆ ಸ್ಪಷ್ಟವಾಗಿಲ್ಲ. ಸದ್ಯಕ್ಕೆ ಭದ್ರತಾ ಕಾರಣಗಳಿಂದ ಅವರು ಮನೆಯಿಂದ ಹೊರಬರುವಂತಿಲ್ಲ ಎಂದು ಶ್ರೀಲಂಕಾ ಸರಕಾರದ ಸಚಿವರೊಬ್ಬರನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X