Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಆಲ್ಜೈಮರ್ಸ್ ಮಾಸಾಚರಣೆಗೆ...

ಮಂಗಳೂರು: ಆಲ್ಜೈಮರ್ಸ್ ಮಾಸಾಚರಣೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ3 Sept 2022 11:37 PM IST
share
ಮಂಗಳೂರು: ಆಲ್ಜೈಮರ್ಸ್ ಮಾಸಾಚರಣೆಗೆ ಚಾಲನೆ

ಮಂಗಳೂರು, ಸೆ.3: ನಗರದ ಪೀಪಲ್ಸ್ ಅಸೋಸಿಯೇಶನ್ ಜೆರಿಯಾಟ್ರಿಕ್ ಎಂಪವರ್‌ಮೆಂಟ್ (ಪೇಜ್) ಸಂಸ್ಥೆಯು ಹಮ್ಮಿಕೊಂಡಿರುವ ಮರೆಗುಳಿತನ (ಆಲ್ಜೈಮರ್ಸ್) ಮಾಸ ಆಚರಣೆಗೆ ಶನಿವಾರ ಕದ್ರಿ ಉದ್ಯಾನದಲ್ಲಿ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಹಿರಿಯರಲ್ಲದೆ ಯುವಜನರೂ ಪಾಲ್ಗೊಂಡಿದ್ದರು. ಮರೆಗುಳಿತನವಿರುವವರ ಬಗ್ಗೆ ಕಾಳಜಿ ವಹಿಸುವ ಮೂಲಕ ಅಲ್ಝೈಮರ್ ಸ್ನೇಹಿ ನಗರವನ್ನಾಗಿ ಮಂಗಳೂರನ್ನು ರೂಪಿಸಲು ಪಣತೊಡುವ ಕುರಿತು ಸಂಕಲ್ಪತೊಟ್ಟರು. ಕೆಂಪು ಹಾಗೂ ಬಿಳಿ ಬಣ್ಣದ ದಿರಿಸು ಧರಿಸಿ ಬಂದಿದ್ದವರು ಹಾಡಿ, ಕುಣಿದರು, ಕಷ್ಟ ಸುಖ ಹಂಚಿಕೊಂಡರು.

ಸಾರ್ವಜನಿಕರಿಗಾಗಿ ಫಿಟ್ನೆಸ್ ಪರೀಕ್ಷೆ, ನೆನಪಿನ ಶಕ್ತಿ ಪರೀಕ್ಷೆ ಹಾಗೂ ಆರೋಗ್ಯ ತಪಾಸಣೆ ನಡೆಸಲಾಯಿತು. ನಡಿಗೆಯಲ್ಲಾಗುವ ಮಾರ್ಪಾಡುಗಳ ಬಗ್ಗೆ ತರಬೇತಿ ನೀಡಲಾಯಿತು.

ಪೇಜ್‌ನ ಟ್ರಸ್ಟಿ ಡಾ. ಪ್ರಭಾ ಅಧಿಕಾರಿ ಮಾತನಾಡಿ ಮರೆಗುಳಿತನವು ವಯೋಸಹಜ ಬೆಳವಣಿಗೆ ಎಂದು ಹೆಚ್ಚಿನವರು ಅಸಡ್ಡೆ ಮಾಡುತ್ತಾರೆ. ಹೊರಗೆ ಬಿಟ್ಟರೆ ಎಲ್ಲಾದರೂ ಹೋಗಬಹುದು ಎಂಬ ಆತಂಕದಿಂದ ಅಂತಹವರ ಕಾಲಿಗೆ ಸರಪಳಿ ಹಾಕುವುದನ್ನೂ ಗಮನಿಸಿದ್ದೇವೆ. ಸಕಾಲದಲ್ಲಿ ಚಿಕಿತ್ಸೆ ಕೊಡಿಸಿದರೆ ಈ ಕಾಯಿಲೆ ಹೊಂದಿರುವವರೂ ಇಳಿವಯಸ್ಸಿನ ದಿನಗಳನ್ನು ಘನತೆಯಿಂದ ಬದುಕಲು ಸಾಧ್ಯ ಎಂದರು.

ಪೇಜ್ನ ಟ್ರಸ್ಟಿ ಜೆರಾಡಿನ್ ಡಿಸೋಜ, ಪೇಜ್‌ನ ಟ್ರಸ್ಟಿ ಮೋಹನ್ ರಾಜ್ ಮಾತನಾಡಿದರು.

ಮರೆಗುಳಿತನ ಮಾಸಾಚರಣೆ ಅಂಗವಾಗಿ ಮರೆಗುಳಿತನದಿಂದ ಬಳಲುತ್ತಿರುವವರಿಗಾಗಿ ಪೇಜ್ ಸಂಸ್ಥೆಯು ಈ ತಿಂಗಳು ವಿವಿಧ ಸ್ಪರ್ಧೆಗಳನ್ನು ಹಾಗೂ ಚಟುವಟಿಕೆಗಳನ್ನು ಹಮ್ಮಿಕೊಂಡಿದೆ. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ನಗರದ ಪುರಭವನದಲ್ಲಿ ಸೆ.23ರಂದು ಏರ್ಪಡಿಸಿರುವ ಸಮಾರಂಭದಲ್ಲಿ ಬಹುಮಾನ ವಿತರಣೆ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X