Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿಕ್ಷಣ ಇಲಾಖೆ ಭ್ರಷ್ಟಾಚಾರದ...

ಶಿಕ್ಷಣ ಇಲಾಖೆ ಭ್ರಷ್ಟಾಚಾರದ ಕೊಂಪೆಯಾಗಿರುವ ಕತೆ ಒಂದೊಂದಾಗಿ ಹೊರಬೀಳುತ್ತಿವೆ: ಸಿದ್ದರಾಮಯ್ಯ

''ಲಂಚಕೋರರಿಗೆ ಮುಖ ಮರೆಸಿಕೊಳ್ಳಲು ಹಿಂದುತ್ವ ಒಂದು ಮುಖವಾಡ''

ವಾರ್ತಾಭಾರತಿವಾರ್ತಾಭಾರತಿ4 Sept 2022 4:58 PM IST
share
ಶಿಕ್ಷಣ ಇಲಾಖೆ ಭ್ರಷ್ಟಾಚಾರದ ಕೊಂಪೆಯಾಗಿರುವ ಕತೆ ಒಂದೊಂದಾಗಿ ಹೊರಬೀಳುತ್ತಿವೆ: ಸಿದ್ದರಾಮಯ್ಯ

ಬೆಂಗಳೂರು, ಸೆ. 4:‘ಗುತ್ತಿಗೆದಾರರು ಸರಕಾರದ ಶೇ.40ರಷ್ಟು ಕಮಿಷನ್ ಬಗ್ಗೆ ಪ್ರಧಾನಿಗೆ ಬರೆದ ಪತ್ರಗಳಿಗೆ ಉತ್ತರ ಸಿಕ್ಕಿಲ್ಲ. ಈಗ ಖಾಸಗಿ ಶಾಲೆಗಳ ಆಡಳಿತವೂ ಪ್ರಧಾನಿಗೆ ಪತ್ರ ಬರೆದಿದೆಯಂತೆ. ಮುಖ್ಯಮಂತ್ರಿಯವರು ಈ ಎಲ್ಲ ಪತ್ರಗಳ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರ ನಿಗಾವಣೆಯಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ನೀಡಬೇಕೆಂದು ಒತ್ತಾಯಿಸುತ್ತೇನೆ' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಮ್ಮ ಇಲಾಖೆಯ ಲಂಚಾವತಾರದ ಕಡೆಗಿನ ಜನರ ಗಮನ ಬೇರೆಕಡೆ ಸೆಳೆಯಲಿಕ್ಕಾಗಿಯೆ ಪಠ್ಯಪುಸ್ತಕ, ಭಗವದ್ಗೀತೆ, ಮದರಸಾಕ್ಕೆ ಸಂಬಂಧಿಸಿದ ವಿವಾದ ಹುಟ್ಟುಹಾಕುತ್ತಿದ್ದಾರೆ. ಲಂಚಕೋರರಿಗೆ ಮುಖ ಮರೆಸಿಕೊಳ್ಳಲು ಹಿಂದುತ್ವ ಒಂದು ಮುಖವಾಡ.ಇದು ಶಿಕ್ಷಣವೋ? ಭಕ್ಷಣೆಯೋ?' ಎಂದು ವಾಗ್ದಾಳಿ ನಡೆಸಿದ್ದಾರೆ.

‘ಆರ್‍ಟಿಇ ಯೋಜನೆಯಡಿ ಖಾಸಗಿ ಶಾಲೆಗಳಿಗೆ ಬಿಜೆಪಿ ಸರಕಾರ ಸುಮಾರು 900 ಕೋಟಿ ರೂ.ಬಾಕಿ ಪಾವತಿಸಬೇಕಂತೆ.ಶಿಕ್ಷಣ ಸಚಿವರು ಶೇ.40ರಷ್ಟು ಕಮಿಷನ್ ಲೆಕ್ಕ ಹಾಕುತ್ತಿರುವಂತೆ ಕಾಣುತ್ತಿದೆ. ಕಮಿಷನ್ ಎಂಬ ಸಾಂಕ್ರಾಮಿಕ ರೋಗ ಶಿಕ್ಷಣ ಇಲಾಖೆಯನ್ನೂ ರೋಗಗ್ರಸ್ತ ಗೊಳಿಸಿದೆ' ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಇದನ್ನೂ ಓದಿ: ಪುತ್ತೂರು; ರಸ್ತೆ ಅಪಘಾತಕ್ಕೆ ಬೈಕ್‌ ಸವಾರ ಬಲಿ, ಇನ್ನೋರ್ವನಿಗೆ ಗಂಭೀರ ಗಾಯ

‘ಕಾಂಗ್ರೆಸ್‍ನ ಮಹತ್ವಾಕಾಂಕ್ಷೆಯ ಶಿಕ್ಷಣ ಹಕ್ಕಿನ ಕಾಯ್ದೆಯನ್ನೂ ರಾಜ್ಯ ಶಿಕ್ಷಣ ಇಲಾಖೆ ಹಳ್ಳ ಹಿಡಿಸಿದೆ. 2012ರಲ್ಲಿ ಆರ್‍ಟಿಇ ಫಲಾನುಭವಿ ವಿದ್ಯಾರ್ಥಿಗಳು 1.20 ಲಕ್ಷ, ಈಗ ಈ ವಿದ್ಯಾರ್ಥಿಗಳ ಸಂಖ್ಯೆ 7 ಸಾವಿರಕ್ಕೆ ಇಳಿದಿದೆ. ಖಾಸಗಿ ಶಾಲೆಗಳಿಗೆ ಬಿಜೆಪಿ ಸರಕಾರದಿಂದಲೇ ಬೆಂಬಲ' ಎಂದು ಸಿದ್ದರಾಮಯ್ಯ ದೂರಿದ್ದಾರೆ.

‘ಖಾಸಗಿ ಶಾಲೆಗಳ ಪರವಾನಿಗೆಯಿಂದ ಹಿಡಿದು ನಿವೃತ್ತ ಶಿಕ್ಷಕರ ಪಿಂಚಣಿವರೆಗೆ ಶಿಕ್ಷಣ ಇಲಾಖೆಯಲ್ಲಿ ಲಂಚ ನೀಡದೆ ಯಾವ ಕೆಲಸವೂ ಆಗುತ್ತಿಲ್ಲವಂತೆ. ಲಂಚ ಪಡೆದು ಖಾಸಗಿ ಶಾಲೆಗಳಿಗೆ ಅಕ್ರಮವಾಗಿ ಅನುಮತಿ ನೀಡುವ ಇಲಾಖೆಯೇ, ಮತ್ತೆ ಅಕ್ರಮ ಎಸಗಿದ ಆರೋಪದ ಮೇಲೆ ದುಡ್ಡು ವಸೂಲಿ ಮಾಡುತ್ತಿದೆಯಂತೆ. ಎಂಥಾ ಅದ್ಭುತ ಪ್ಲಾನ್?' ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಪ್ರಾರಂಭದಿಂದಲೇ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ಕೇಳಿ ಬರುತ್ತಿದ್ದ ಭ್ರಷ್ಟಾಚಾರದ ಆರೋಪಗಳಿಗೆ ಈಗ ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಯ ಸಂಘಟನೆ ಪುರಾವೆಗಳನ್ನು ನೀಡಿದೆ. ಈ ಸಂಘಟನೆ ಪ್ರಧಾನಿ ಮೋದಿ ಅವರಿಗೂ ಪತ್ರ ಬರೆದಿದೆಯಂತೆ.ಇದು ಶಿಕ್ಷಣವೋ? ಭಕ್ಷಣೆಯೋ?' ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

----------------------

‘ಆರೆಸ್ಸೆಸ್ ನಲ್ಲಿ ತರಬೇತಿ ಪಡೆದು ಬಂದಿರುವ ಸಚಿವ ಬಿ.ಸಿ.ನಾಗೇಶ್ ಅವರು ರಾಜ್ಯ ಶಿಕ್ಷಣ ಸಚಿವರಾದಂದಿನಿಂದ ಶಿಕ್ಷಣ ಇಲಾಖೆ ಭ್ರಷ್ಟಾಚಾರದ ಕೊಂಪೆಯಾಗಿರುವ ಕತೆ ಒಂದೊಂದಾಗಿ ಹೊರಬೀಳುತ್ತಿವೆ. ಪಠ್ಯಪುಸ್ತಕಗಳ ವಿವಾದದ ಮರೆಯಲ್ಲಿ ಇಲ್ಲಿ ನಡೆಯುತ್ತಿರುವುದು ಲಂಚಾವತಾರದ ಕುಣಿದಾಟ'

-ಸಿದ್ದರಾಮಯ್ಯವಿಪಕ್ಷ ನಾಯಕ

ಗುತ್ತಿಗೆದಾರರು ಸರ್ಕಾರದ 40% ಕಮಿಷನ್ ಬಗ್ಗೆ ಪ್ರಧಾನಿಗೆ ಬರೆದ ಪತ್ರಗಳಿಗೆ ಉತ್ತರ ಸಿಕ್ಕಿಲ್ಲ. ಈಗ ಖಾಸಗಿ ಶಾಲೆಗಳ ಆಡಳಿತವೂ ಪ್ರಧಾನಿಗೆ ಪತ್ರ ಬರೆದಿದೆಯಂತೆ. @CMofKarnataka ಈ ಎಲ್ಲ ಪತ್ರಗಳ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರ ನಿಗಾವಣೆಯಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ನೀಡಬೇಕೆಂದು ಒತ್ತಾಯಿಸುತ್ತೇನೆ.
ಇದು ಶಿಕ್ಷಣವೋ? ಭಕ್ಷಣೆಯೋ? 7/7 pic.twitter.com/SCh4iXb4zW

— Siddaramaiah (@siddaramaiah) September 4, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X