ಏಶ್ಯಕಪ್ ಸೂಪರ್-4 ಪಂದ್ಯ: ಭಾರತ ವಿರುದ್ಧ ಬೌಲಿಂಗ್ ಆಯ್ದುಕೊಂಡ ಪಾಕಿಸ್ತಾನ
Photo:twitter
ದುಬೈ: ದುಬೈ ಅಂತರ್ ರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ರವಿವಾರ ಭಾರತ ವಿರುದ್ಧದ ಏಶ್ಯಕಪ್ ನ ಸೂಪರ್ 4 ಪಂದ್ಯದಲ್ಲಿ ಟಾಸ್ ಜಯಿಸಿದ ಪಾಕಿಸ್ತಾನದ ನಾಯಕ ಬಾಬರ್ ಆಝಂ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ಆಗಸ್ಟ್ 28ರಂದು ನಡೆದ ಗ್ರೂಪ್ ಹಂತದ ಪಂದ್ಯದಲ್ಲಿ ಭಾರತವು ಪಾಕಿಸ್ತಾನವನ್ನು 5 ವಿಕೆಟ್ ಗಳಿಂದ ಮಣಿಸಿತ್ತು. ಮೂರು ವಿಕೆಟ್ ಹಾಗೂ ಔಟಾಗದೆ 33 ರನ್ ಗಳಿಸಿದ್ದ ಹಾರ್ದಿಕ್ ಪಾಂಡ್ಯ ಆಲ್ ರೌಂಡ್ ಪ್ರದರ್ಶನ ನೀಡಿದ್ದರು.
Next Story