ರಾಜ್ಯದಲ್ಲಿ ಇನ್ನೂ 5 ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು, ಸೆ.4: ರಾಜ್ಯದಲ್ಲಿ ಇನ್ನೂ ಐದು ದಿನ ಮಳೆಯಾಗುವ (RAIN) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆ.9ರವರೆಗೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಬೀಳಲಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಎಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ. ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಕಲಬುರಗಿ, ವಿಜಯಪುರ, ಗದಗ, ಧಾರಾವಾಡ, ಹಾವೇರಿ, ದಾವಣಗೆರೆ, ಹಾಸನ, ಮೈಸೂರು, ಮಂಡ್ಯ, ಚಾಮರಾಜ ನಗರ, ಕೋಲಾರ, ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆಗಳಲ್ಲೂ ಮುಂದಿನ 4 ದಿನಗಳ ಕಾಲ ಮಳೆ ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲೂ ತಡ ರಾತ್ರಿ ಗುಡುಗು ಮಿಂಚಿನ ಮಳೆಯಾಗಲಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದರು. ಬೆಂಗಳೂರಿನಲ್ಲೂ ಈ ತಿಂಗಳ 9 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವೆಡೆ ರಸ್ತೆಗಳು ಹಾಳಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.





