ಪರ್ಕಳ: ಸುರೇಶ್ ಪೂಜಾರಿ ನಿಧನ

ಉಡುಪಿ, ಸೆ.4: ಪರ್ಕಳ ಗರಡಿ ರೋಡ್ ನಿವಾಸಿ ಪರ್ಕಳ ಒಂದನೇ ವಾರ್ಡಿನ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸುರೇಶ್ ಪೂಜಾರಿ(64) ಅಲ್ಪಕಾಲದ ಅಸೌಖ್ಯದಿಂದ ಸೆ.4ರಂದು ಮುಂಜಾನೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಕೊಡುಗೆ ದಾನಿಯಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಇವರು, ಮಣಿಪಾಲ, ಉಡುಪಿ ಸುತ್ತಮುತ್ತ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆ ಮಾಡುತ್ತಿದ್ದರು.
Next Story





