ಸುಳ್ಯ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ರೇವತಿ, ಮಾಯಿಲಪ್ಪ, ಯೋಗೀಶ್
ಸುಳ್ಯ: ಶಿಕ್ಷಕರ ದಿನಾಚರಣೆಯ ಅಂಗವಾಗಿ 2022-23ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಹಾಗು ಪ್ರೌಢ ಶಾಲಾ ವಿಭಾಗದಲ್ಲಿ ಪ್ರಶಸ್ತಿ ಘೋಷಿಸಲಾಗಿದ್ದು ಸುಳ್ಯ ತಾಲೂಕಿನ 3 ಮಂದಿ ಶಿಕ್ಚಕರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಕೇನ್ಯ ಸರಕಾರಿ ಕಿರಿಯ ಪ್ರಾಥಮಿಮ ಶಾಲೆಯ ಸಹ ಶಿಕ್ಷಕಿ ರೇವತಿ ಕೊಡಪಾಡಿ, ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಕೆ.ಪಿ.ಎಸ್ ಬೆಳ್ಳಾರೆಯ ಶಿಕ್ಷಕ ಜಿ.ಮಾಯಿಲಪ್ಪ, ಪ್ರೌಢ ಶಾಲಾ ವಿಭಾಗದಲ್ಲಿ ಪಂಜ ಸರಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಯೋಗೀಶ್ ಸಿ. ಆಯ್ಕೆಯಾಗಿದ್ದಾರೆ. ಸೆ.5ರಂದು ಪುತ್ತೂರಿನಲ್ಲಿ ನಡೆಯುವ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಉತ್ತಮ ಶಿಕ್ಷಕರನ್ನು ಸನ್ಮಾನಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರ ಕಚೇರಿಯ ಪ್ರಕಟಣೆ ತಿಳಿಸಿದೆ.
Next Story