Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುರುಘಾ ಮಠದಲ್ಲಿ ಲೈಂಗಿಕ ಕಿರುಕುಳದ ಆರೋಪ...

ಮುರುಘಾ ಮಠದಲ್ಲಿ ಲೈಂಗಿಕ ಕಿರುಕುಳದ ಆರೋಪ | ಸರ್ಕಾರ ಯಾರ ಪರವಾಗಿದೆ ಎಂದು ಸ್ಪಷ್ಟಪಡಿಸಲಿ: ಎಚ್.ವಿಶ್ವನಾಥ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ4 Sept 2022 8:56 PM IST
share
ಮುರುಘಾ ಮಠದಲ್ಲಿ ಲೈಂಗಿಕ ಕಿರುಕುಳದ ಆರೋಪ | ಸರ್ಕಾರ ಯಾರ ಪರವಾಗಿದೆ ಎಂದು ಸ್ಪಷ್ಟಪಡಿಸಲಿ: ಎಚ್.ವಿಶ್ವನಾಥ್ ಆಗ್ರಹ

ಮೈಸೂರು,ಸೆ.4: 'ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೊಕ್ಸೋ ಕಾಯ್ದೆ ದಾಖಲಾದರೂ ಸರ್ಕಾರ ಗಂಭೀರವಾಗಿ ಪರಿಗಣಿಸದೆ ಇದ್ದುದರಿಂದಲೇ ಸಾಕ್ಷ್ಯಗಳು ನಾಶವಾಗಿವೆ. ಸರ್ಕಾರ ಸಂತ್ರಸ್ತರ ಪರವಾಗಿದಿಯೋ ಅಥವಾ ಸ್ವಾಮೀಜಿ ಪರವಾಗಿದಿಯೋ ಎಂಬುದನ್ನು ಸ್ಪಷ್ಟಪಡಿಸಬೇಕು' ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆಗ್ರಹಿಸಿದರು.

ನಗರದಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದಾಗ ಆರೋಪಿಯೇ ಅಪರಾಧಿಯಾಗುತ್ತಾನೆ. ಆದರೆ ಚಿತ್ರದುರ್ಗ ಎಸ್ಪಿ ಆರೋಪಿಯನ್ನು ಕೂಡಲೇ ಬಂಧಿಸಲು ಕ್ರಮ ಕೈಗೊಳ್ಳಲಿಲ್ಲ, ಬೆಡ್ ಶೀಟ್, ಹಾಸಿಗೆ ಒದಿಕೆಗಳೆಲ್ಲ ಬದಲಾದ ಮೇಲೆ ಮಠದಲ್ಲಿದ್ದ ಸಾಕ್ಷ್ಯಗಳು ನಾಶವಾದ ನಂತರ ಬಂಧಿಸಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.

'ಆರೋಪಿಯ ಪರವಾಗಿಯೇ ಹಲವು ಮಠಗಳ ಸ್ವಾಮೀಜಿಗಳು, ಜನಪ್ರತಿನಿಧಿಗಳು ಮಾತನಾಡುತ್ತಿದ್ದಾರೆ. ಅವರುಗಳ ವಿರುದ್ಧವೂ ಪ್ರಕರಣ ದಾಖಲಿಸಿ ಬಂಧಿಸಬೇಕು, ಪೋಕ್ಸೊ ಗಟ್ಟಿಯಾದ ಕಾಯ್ದೆ ಎನ್ನುವುದು ಅವರಿಗೆ ಗೊತ್ತಿಲ್ಲವೇ? ಅಪರಾಧಿಗಳು ಮಠದೊಳಗೆ ಇದ್ದರೂ ಪೊಲೀಸರು ಹುಡುಕುತ್ತಿದ್ದಾರೆ. ಕರ್ತವ್ಯ ಲೋಪ ಎಸಗಿದ ಚಿತ್ರದುರ್ಗ ಎಸ್ಪಿಯನ್ನು ಅಮಾನತ್ತುಗೊಳಿಸಬೇಕು. ನ್ಯಾಯಾಂಗ  ಬಂಧನಕ್ಕೊಳಗಾದ ಆರೋಪಿಯನ್ನು ಖಾವಿಯಲ್ಲಿ ಕರೆದೊಯ್ಯುತ್ತಾರಾ? 'ಎಂದು ಪ್ರಶ್ನಿಸಿದರು.

'ಮಕ್ಕಳಿಗೆ ನ್ಯಾಯ ಸಿಗಲಿ ಎಂದು ಇಡೀ ರಾಜ್ಯದ ಜನತೆ ಸರ್ಕಾರದತ್ತ ನೋಡುತ್ತಿದೆ ಎಂಬ ಎಚ್ಚರವಿರಲಿ, ಸಾಮಾಜಿಕ ಹೋರಾಟಗಾರರಿಗೆ ರಕ್ಷಣೆ ನೀಡುವ ಕೆಲಸವಾಗಬೇಕು, ಮಕ್ಕಳಿಗೆ ನೆರವಾಗಿರುವ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಮತ್ತು ಪರಶುರಾಮ್ ಕಾರ್ಯ ಅಭಿನಂದನೀಯ, ಅವರಿಗೂ ಬೆದರಿಕೆ ಕರೆಗಳು ಬರುತ್ತಿದ್ದು, ಅವರಿಗೆ ಸೂಕ್ತ ರಕ್ಷಣೆ ನೀಡಬೇಕು' ಎಂದರು.

'ನಾಡಿನ ಬಹುತೇಕ ಪೀಠಾಧಿಪತಿಗಳು ಬ್ರಹ್ಮಚಾರಿಗಳಲ್ಲ, ಸ್ವಾಮೀಜಿ ವೇಷ ಧರಿಸಿ ಅಪ್ರಾಪ್ತ ಹೆಣ್ಣುಮಕ್ಕಳ ಭವಿಷ್ಯ ಹಾಳು ಮಾಡುತ್ತಿದ್ದಾರೆ. ಆದ್ದರಿಂದ ವಿವಾಹಿತರೇ ಮಠಾಧಿಪತಿಗಳಾಗಬೇಕು' ಎಂದು ವಿಶ್ವನಾಥ್ ಹೇಳಿದರು.

ಜಗದ್ಗುರುಗಳೆಲ್ಲಾ ಜಾತಿ ಗುರುಗಳಾಗಿದ್ದಾರೆ. ಸಮುದಾಯ ಬೆಂಬಲಕ್ಕಿದೆ ಎಂಬ ಉಸಿ ನಂಬಿಕೆ ಅವರಿಗಿದೆ. ಕಾನೂನು ನ್ಯಾಯಾಲಯ ದೊಡ್ಡದೇ ಹೊರತು ಧರ್ಮ ಜಾತಿಯಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X