ವಿವಿಧ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದಲೇ ಶಿಕ್ಷಕರ ದಿನಾಚರಣೆ

ಉಡುಪಿ, ಸೆ.5: ಪೋಷಕರು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಸೇರಿದಂತೆ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಂಡು ಶಿಕ್ಷಕರ ದಿನವನ್ನು ಇಂದು ವಿವಿಧ ಶಾಲೆಗಳಲ್ಲಿ ಆಚರಿಸಲಾಯಿತು.
ವಳಕಾಡು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಈ ವಿಶೇಷ ಕಾರ್ಯ ಕ್ರಮದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್ ಭಾಗವಹಿಸಿ ಶುಭಹಾರೈಸಿದರು. ಸಭೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ತನುಜಾಕ್ಷಿ ಅವರನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶಿವರಾಜ್, ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರೇಗೌಡ, ವಳಕಾಡು ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ನಿರ್ಮಲಾ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಕುಸುಮಾ ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Next Story





