ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ: ಆಕ್ಷೇಪಣೆ ಸಲ್ಲಿಕೆಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು, ಸೆ.5: ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸೀಡಿ ಕೇಸ್ ತನಿಖೆಗಾಗಿ ಎಸ್‍ಐಟಿ ರಚನೆ ಹಾಗೂ ಬೆಂಗಳೂರಿನ ಸದಾಶಿವ ನಗರದಲ್ಲಿ ದಾಖಲಾಗಿರುವ ಬ್ಲಾಕ್‍ಮೇಲ್ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್, ಮುಂದಿನ 20 ದಿನದೊಳಗೆ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶನ ನೀಡಿದೆ.
ವಿಶೇಷ ತನಿಖಾ ದಳ ರಚನೆ ಮಾಡಿರುವ ಹಿನ್ನೆಲೆಯಲ್ಲಿ ಪ್ರಕರಣದ ಸಂತ್ರಸ್ತೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶನ ನೀಡಿದೆ.
ವಿಚಾರಣೆ ಆರಂಭವಾಗುತ್ತಿದ್ದಂತೆಯೇ ಹೈಕೋರ್ಟ್ ನ್ಯಾಯಪೀಠ, ಅರ್ಜಿದಾರರ ಪರ ವಕೀಲರಿಗೆ ಆಂಗ್ಲ ಭಾಷೆಯ ವರದಿಯನ್ನು ಸಲ್ಲಿಸಬೇಕು ಎಂದು ಎಸ್‍ಐಟಿ ಪರ ವಕೀಲರಿಗೆ ಸೂಚನೆ ನೀಡಿ, ವಿಚಾರಣೆಯನ್ನು ಮುಂದೂಡಿತು.
Next Story





