ಸೆ.18: ವೋಟರ್ ಐಡಿಗೆ ಆಧಾರ್ ಲಿಂಕ್ ಅಭಿಯಾನ

ಮಂಗಳೂರು, ಸೆ.5: ಪಟ್ಟಿಯಲ್ಲಿರುವ ಮತದಾರರನ್ನು ದೃಡೀಕರಿಸಲು ಆಧಾರ್ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಗೆ ಜೋಡಣೆ ಮಾಡಲು ಸೆ. 18ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಎಲ್ಲಾ ಮತಗಟ್ಟೆಗಳಲ್ಲಿ ವಿಶೇಷ ಅಭಿಯಾನ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
ಎಲ್ಲಾ ಬೂತ್ ಮಟ್ಟದ ಅಧಿಕಾರಿಗಳು ಅಂದು ಮತಗಟ್ಟೆಯಲ್ಲಿ ಹಾಜರಿದ್ದು, ಸಾರ್ವಜನಿಕರ ಆಧಾರ್ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಗೆ ಸ್ಥಳದಲ್ಲೇ ಜೋಡಣೆ ಮಾಡಲಾಗುವುದು. ಆಧಾರ್ ಕಾರ್ಡ್ ಇಲ್ಲದವರು ನರೇಗಾ ಜಾಬ್ಕಾರ್ಡ್, ಛಾಯಾಚಿತ್ರವಿರುವ ಬ್ಯಾಂಕ್, ಅಂಚೆ ಕಚೇರಿ ಪಾಸ್ ಪುಸ್ತಕ, ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಲಾದ ಆರೋಗ್ಯ ವಿಮೆ, ಸ್ಮಾರ್ಟ್ಕಾರ್ಡ್ ಅಥವಾ ಚಾಲನಾ ಪರವಾನಗಿ, ಪಾನ್ಕಾರ್ಡ್, ಎನ್ಪಿಆರ್ ಅಡಿಯಲ್ಲಿ ಆರ್ಜಿಐ ನೀಡಿದ ಸ್ಮಾರ್ಟ್ ಕಾರ್ಡ್, ಪಾಸ್ಪೋರ್ಟ್, ಛಾಯಾಚಿತ್ರ ವಿರುವ ಪಿಂಚಣಿ ದಾಖಲೆ, ಕೇಂದ್ರ, ರಾಜ್ಯದಿಂದ ಉದ್ಯೋಗಿಗೆ ನೀಡಿರುವ ಛಾಯಾಚಿತ್ರವಿರುವ ಸೇವಾ ಗುರುತಿನ ಚೀಟಿ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ನೀಡಲಾದ ವಿಶಿಷ್ಟ ಗುರುತಿನ ಕಾರ್ಡ್ಗಳಲ್ಲಿ ಯಾವುದಾದರೊಂದು ದಾಖಲೆ ಪಡೆದು ಮತದಾರರ ಚೀಟಿಗೆ ಜೋಡಣೆ ಮಾಡಬಹುದು ಎಂದು ಅಪರ ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.