ಸುರತ್ಕಲ್: ಸರಕಾರಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚಣೆ

ಸುರತ್ಕಲ್: ಸರಕಾರಿ ಪದವಿಪೂರ್ವ ಕಾಲೇಜು, ಕೃಷ್ಣಾಪುರ ಶಿಕ್ಷಕರ ದಿನಾಚಣೆ ಹಾಗೂ ನಿವೃತ್ತ ರಾಜ್ಯ ಪ್ರಶಸ್ತಿ ವಿಜೇತ ಪ್ರಾಂಶುಪಾಲರಾದ ಅಷ್ಪಾಕ್ ಅಹ್ಮದ್ ಮ್ಯಾಗೇರಿ ಅವರನ್ನು ಗೌರವಿಸಲಾಯಿತು.
ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಅಶೋಕ್ ಕೃಷ್ಣಾಪುರ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರೂ, ಸಂಸ್ಥೆಯ ಹಳೆ ವಿದ್ಯಾರ್ಥಿಯೂ ಆದ ಲಕ್ಷ್ಮೀನಾರಾಯಣ ರಾವ್ ಮುಖ್ಯ ಅತಿಥಿಗಳಾಗಿದ್ದರು.
ಕಾಲೇಜು ಪ್ರಾಂಶುಪಾಲರಾದ ಅನುಸೂಯ ಕೆ ಪಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ದಿನಾಚರಣೆಯ ಮಹತ್ವದ ಬಗ್ಗೆ ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾದ ಪ್ರತಿಮಾ ಭಟ್ ಮಾತನಾಡಿದರು. ಈ ಸಂದರ್ಭ ಉಪನ್ಯಾಸಕರು, ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.
Next Story